Chamarajanagar: ತೇಗದ ಮರ ಕಡಿಯಲು ಅಡ್ಡಿ; ಪ್ರತಿಭಟನೆ

Team Udayavani, Nov 11, 2023, 10:41 AM IST

Chamarajanagar: ತೇಗದ ಮರ ಕಡಿಯಲು ಅಡ್ಡಿ; ಪ್ರತಿಭಟನೆ

ಚಾಮರಾಜನಗರ: ರೈತರು ತಮ್ಮ ಜಮೀನಿನಲ್ಲಿ ಬೆಳೆದ ತೇಗದ ಮರಗಳನ್ನು ಕಟಾವು ಮಾಡಲು ಅರಣ್ಯ ಇಲಾಖೆ ಅಧಿಕಾರಿಗಳು ತೊಂದರೆ ನೀಡುತ್ತಿದ್ದಾರೆ ಎಂದುಆರೋಪಿಸಿ ಜಿಲ್ಲಾ ರೈತಸಂಘದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸುಲ್ತಾನ್‌ ಷರೀಫ್ ವೃತ್ತದಲ್ಲಿರುವ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು, ನಮ್ಮ ಮರ ನಮ್ಮ ಹಕ್ಕು, ನಮ್ಮ ಜಮೀನಿನಲ್ಲಿರುವ ಮರ ಕಡಿಯಲು ಅವಕಾಶ ನೀಡದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಧಿಕ್ಕಾರ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ವೇಳೆ ರೈತಸಂಘದ ರಾಜ್ಯ ಕಾರ್ಯದರ್ಶಿ ಡಾ. ಗುರುಪ್ರಸಾದ್‌ ಮಾತನಾಡಿ, ರೈತರು ತಮ್ಮ ಜಮೀನಿನಲ್ಲಿ ಬೆಳೆದ ತೇಗದ ಮರಗಳನ್ನು ಕಟಾವು ಮಾಡಲು ಅನುಮತಿ ನೀಡುವಂತೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಾರೆ. ತೇಗದ ಮರವನ್ನು ತಮ್ಮ ಸ್ವಂತ ಬಳಕೆಗೆ, ಮನೆ ಕಟ್ಟಲು ಬಳಸುವ ಸಲುವಾಗಿ ಕಟಾವು ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸಿದರೆ 2-3 ವರ್ಷ ಕಾದರೂ ಲೈಸೆನ್ಸ್‌ ನೀಡುವುದಿಲ್ಲ. ರೈತರು ತಮ್ಮ ಮರ ಕಡಿಯಲು ಅರಣ್ಯ ಇಲಾಖೆ ಕಚೇರಿಗೆ ವರ್ಷಗಟ್ಟಲೆ ಅಲೆಯಬೇಕಾಗಿದೆ. ನಮ್ಮ ಜಮೀನಲ್ಲಿರುವ ತೇಗದ ಮರಗಳನ್ನು ಕಟಾವು ಮಾಡಲು ಕಟ್ಟಿಂಗ್‌ ಆರ್ಡರ್‌, ಟ್ರಾನ್ಸ್‌ಪೋರ್ಟ್‌ ಆರ್ಡರ್‌ ಎಂದು ಇಲ್ಲ ಸಲ್ಲದ ಕಾನೂನುಗಳನ್ನು ನಮ್ಮ ಜಿಲ್ಲೆಯಲ್ಲಿ ಮಾತ್ರ ಹೇರುತ್ತಿದ್ದಾರೆ. ರೈತರು ತಮ್ಮ ಜಮೀನುಗಳಲ್ಲಿ ನ್ಯಾಯಯುತವಾಗಿ ಬೆಳೆದ ಮರಗಳನ್ನು ಕಡಿಯಲು ಅವಕಾಶ ನೀಡುತ್ತಿಲ್ಲ. ಈ ವಿಳಂಬ ನೀತಿಯಿಂದಾಗಿ ರೈತರು ರೋಸಿ ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳು ತಕ್ಷಣವೇ ಇದೆಲ್ಲವನ್ನು ನಿಲ್ಲಿಸಿ ಮರಗಳನ್ನು ಕಟಾವು ಮಾಡಿ, ಬಳಕೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು. ಇಲ್ಲವೇ ಈ ವಿಷಯವಾಗಿ ನಾವು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಕಾಡು ಪ್ರಾಣಿಗಳ ಹಾವಳಿಯು ಹೆಚ್ಚಾಗಿದ್ದು, ಬೆಳೆ ನಷ್ಟವನ್ನು ಸಹ ನೀಡುತ್ತಿಲ್ಲ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಹುಲಿ- ಚಿರತೆಗಳ ದಾಳಿಯೂ ಸಹ ನಡೆಯುತ್ತಿದ್ದು, ಇದರ ಬಗ್ಗೆ ಮಾಹಿತಿ ನೀಡಿದರೂ ಸಹ ಸ್ಥಳಕ್ಕೆ ಅರಣ್ಯ ಇಲಾಖೆಯವರು ಬಂದು ಪರಿಶೀಲನೆ ನಡೆಸಿ, ಬೋನ್‌ ಇಡಲು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದರು.

ಸಾಮಿಲ್‌ಗ‌ಳಿಗಾಗಿ ರೈತರಿಂದ ಕಡಿಮೆ ಬೆಲೆಗೆ ಖರೀದಿ ಮಾಡುವ ಮಾರಾಟಗಾರರು ಅರಣ್ಯ ಇಲಾಖಾಧಿಕಾರಿಗಳಿಗೆ ಲಂಚ ನೀಡಿ ರಾತ್ರೋರಾತ್ರಿ ಮರ ಕಡಿದು ಸಾಮಿಲ್‌ ಗಳಿಗೆ ಸಾಗಿಸುತ್ತಾರೆ. ಅರಣ್ಯ ಇಲಾಖೆಯ ನಾನಾ ಕಾನೂನುಗಳಿಗೆ ಹೆದರಿ ಕೆಲವು ರೈತರು ಮಾರಾಟಗಾರರಿಗೆ ಮರ ಕೊಟ್ಟುಬಿಡುತ್ತಾರೆ. ಇವರು ಎಲ್ಲಾ ಸಾಮಿಲ್‌ಗ‌ಳಲ್ಲೂ ಸಿಸಿ ಟಿವಿ ಅಳವಡಿಸಿ ಪರಿಶೀಲನೆ ಮಾಡುತ್ತೀದ್ದೇವೆ ಎಂಬುವುದು ಶುದ್ಧ ಸುಳ್ಳು ಎಂದು ಆರೋಪಿಸಿದರು.

ರೈತಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಮುಖಂಡರಾದ ಮಹೇಶ್‌, ಗುರು, ಷಣ್ಮುಖಸ್ವಾಮಿ, ಮಣಿ, ಶ್ರೀನಿವಾಸ್‌, ರಘು, ಬಸವರಾಜು ಇದ್ದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.