State Politics: ಹೊಸ ಶಕ್ತಿಯಿಂದ ಬಿಜೆಪಿ ಎದ್ದು ಬರುತ್ತದೆ: ಮಾಜಿ ಸಚಿವ ಆರಗ ಜ್ಞಾನೇಂದ್ರ

Team Udayavani, Nov 11, 2023, 3:54 PM IST

9-araga-jnanendra

ಚಿಕ್ಕಮಗಳೂರು: ವಿಜಯೇಂದ್ರ ಅವರ ಕೈಗೆ ಅಧ್ಯಕ್ಷ‌ ಸ್ಥಾನ ಕೊಟ್ಟಿದ್ದು ಸಮಯೋಚಿತ. ಅವರಿಗೆ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಹೈಕಮಾಂಡ್ ಗೆ ಅಭಿನಂದನೆ ಸಲ್ಲಿಸುತ್ತೇನೆ. ವಿಜಯೇಂದ್ರ ಅವರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅವರು ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು.

ವಿಜಯೇಂದ್ರ ಅವರಿಗೆ ಯುವಕ, ಯುವಮೋರ್ಚಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷ, ಶಾಸಕನಾಗಿ ಅನುಭವವಿದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಸಾವಿರಾರು ಜನರಿಗೆ ಪರಿಚಿತ ವ್ಯಕ್ತಿ ಇವರು. ಹೊಸ ಶಕ್ತಿಯಿಂದ ಬಿಜೆಪಿ ಎದ್ದು ಬರುತ್ತದೆ ಎಂದು ಹೇಳಿದರು.

ಮುಂದೆ ಬಿಜೆಪಿ ವಿಜಯೇಂದ್ರ ನೇತೃತ್ವದಲ್ಲಿ ಬಹಳ ದೊಡ್ಡ ಶಕ್ತಿಯಾಗಿ ಹೊರಹೊಮ್ಮುತ್ತೆ. ಹಿಂದೆ ಅತಿವೃಷ್ಟಿಯಾದಾಗ ಯಡಿಯೂರಪ್ಪನವರು ಡಬ್ಬ ಹಿಡ್ಕೊಂಡು ಭಿಕ್ಷೆ ಬೇಡಿದ್ರು. ನಿರಾಶ್ರಿತರ ಜೊತೆ ದೀಪಾವಳಿ ಆಚರಿಸಿದ್ದರು. ಇದು ಒಬ್ಬ ಸಿಎಂ ಆಗಿ ಇರಬೇಕಾದ ಬದ್ಧತೆ, ಹೃದಯವಂತಿಕೆ ಎಂದರು.

ಸಿದ್ದರಾಮಯ್ಯ ವೇದಿಕೆ ಮೇಲೆ ಭಾಷಣ ಮಾಡುತ್ತಾ, ಡ್ಯಾನ್ಸ್ ಮಾಡುತ್ತಾ ಆರಾಮವಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಕ್ಯಾಬಿನೆಟ್ ಮಂತ್ರಿಗಳು ಎಲ್ಲೂ ಓಡಾಡ್ತಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರೈತರ ಬೆಳೆ ನಾಶ, ಕುಡಿಯುವ ನೀರಿಗೆ ಸಮಸ್ಯೆ, ವಿದ್ಯುತ್ ಅಭಾವವಿದೆ. ಆದ್ರೆ, ಸರ್ಕಾರ ತನ್ನ ಪಾತ್ರ ಏನೂ ಇಲ್ಲದಂತೆ ವರ್ತಿಸುತ್ತಿದೆ. ದಿನ ಬೆಳಗಾದರೆ ಕೇಂದ್ರ ಕೊಡ್ಲಿಲ್ಲ ಅಂತ ಕೇಂದ್ರದತ್ತ ಕೈ ತೋರಿಸುತ್ತಾರೆ. ಕೇಂದ್ರದ ಬಳಿ ನಿಯೋಗ ಹೋಗಲು ಏನ್ ಮಾಡಿದ್ದಾರೆ, ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದಿದ್ದಾರಾ ಎಂದು ಪ್ರಶ್ನಿಸಿದರು.

ಕೇಂದ್ರ ಕಳಿಸಿದ ಎನ್.ಡಿ.ಆರ್.ಎಫ್. ಹಣ 900 ಕೋಟಿ ಇದೆ. ಸರ್ಕಾರ ಅದನ್ನೂ ಬಿಡುಗಡೆ ಮಾಡಿಲ್ಲ. ಜನ ಗುಳೇ ಹೋಗ್ತಿದ್ದಾರೆ. ಜನರ ಕೈಗೆ  ಕೆಲಸ ಕೊಡಬೇಕಿದೆ. ಜನವರಿ ಬಳಿಕ ಅತ್ಯಂತ ಭೀಕರ ಪರಿಸ್ಥಿತಿಯನ್ನು ನಾವು ನೋಡಬಹುದು ಎಂದು ಕಾಂಗ್ರೇಸ್‌ ಪಕ್ಷದ ಕುರಿತು ಮಾತನಾಡಿದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.