UN; ಪ್ಯಾಲೆಸ್ತೀನ್ ನಲ್ಲಿ ಇಸ್ರೇಲಿ ದಾಳಿ ವಿರುದ್ಧ ವಿಶ್ವಸಂಸ್ಥೆ ನಿರ್ಣಯಕ್ಕೆ ಭಾರತ ಸಹಮತ
Team Udayavani, Nov 12, 2023, 8:40 AM IST
ಯುಎನ್: ಪೂರ್ವ ಜೆರುಸಲೆಮ್ ಸೇರಿದಂತೆ ಆಕ್ರಮಿತ ಪ್ಯಾಲೇಸ್ಟಿನಿಯನ್ ಪ್ರಾಂತ್ಯದಲ್ಲಿ ಮತ್ತು ಆಕ್ರಮಿತ ಸಿರಿಯನ್ ಗೋಲನ್‌ನಲ್ಲಿ ವಸಾಹತು ಚಟುವಟಿಕೆಗಳನ್ನು ಖಂಡಿಸುವ ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸಹಮತ ಸೂಚಿಸಿದೆ. ವಿಶ್ವಸಂಸ್ಥೆಯಲ್ಲಿ ನಡೆದ ಮತದಾನದಲ್ಲಿ ಭಾರತ ಸೇರಿ 145 ದೇಶಗಳು ವಿಶ್ವಸಂಸ್ಥೆ ನಿರ್ಣಯಕ್ಕೆ ಬೆಂಬಲ ಸೂಚಿಸಿದೆ.
ವಿಶ್ವಸಂಸ್ಥೆಯ ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿದವು. ಕೆನಡಾ, ಹಂಗೇರಿ, ಇಸ್ರೇಲ್, ಮಾರ್ಷಲ್ ಐಲ್ಯಾಂಡ್ಸ್, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ, ನೌರು, ಯುನೈಟೆಡ್ ಸ್ಟೇಟ್ಸ್ ನಿರ್ಣಯದ ವಿರುದ್ಧ ಮತ ಚಲಾಯಿಸಿದವು. 18 ದೇಶಗಳು ಮತದಾನದಿಂದ ದೂರವಿದ್ದವು.
ವಿಶ್ವಸಂಸ್ಥೆಯಲ್ಲಿ ನಿರ್ಣಯದ ಮೇಲಿನ ಮತದಾನದ ಫೋಟೋವನ್ನು ಹಂಚಿಕೊಂಡಿರುವ ತೃಣಮೂಲ ಕಾಂಗ್ರೆಸ್ ಸಂಸದ ಸಾಕೇತ್ ಗೋಖಲೆ ಅವರು “ಭಾರತ ಗಣರಾಜ್ಯವು ನಿರ್ಣಯದ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ತುಂಬಾ ಸಂತೋಷವಾಗಿದೆ” ಎಂದು ಹೇಳಿದರು.
“ವಸಾಹತುಗಾರರ ಮೂಲಕ ಇಸ್ರೇಲ್ ಪ್ಯಾಲೆಸ್ಟೈನ್ ಅನ್ನು ವಶಪಡಿಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಇಸ್ರೇಲ್‌ನ ವರ್ಣಭೇದ ನೀತಿ ಈಗ ಕೊನೆಗೊಳ್ಳಬೇಕು” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.