New Criminal Law: ಶಿಕ್ಷೆ ಪ್ರಮಾಣ 7 ವರ್ಷದಿಂದ 5ಕ್ಕಿಳಿಸಲು ಶಿಫಾರಸು
ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವ ಪ್ರಕರಣ- ಸಂಸದೀಯ ಸಮಿತಿಯ ಅಭಿಮತ
Team Udayavani, Nov 12, 2023, 9:05 PM IST
ನವದೆಹಲಿ: ಪ್ರಸ್ತಾವಿತ ಹೊಸ ಕ್ರಿಮಿನಲ್ ಕಾನೂನಿನಲ್ಲಿ “ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವ ಪ್ರಕರಣಗಳಿಗೆ’ 7 ವರ್ಷ ಕಾರಾಗೃಹ ವಾಸದ ಶಿಕ್ಷೆ ವಿಧಿಸಿರುವುದು ಸಮಂಜಸವಲ್ಲ ಎಂದು ಹೇಳಿರುವ ಸಂಸದೀಯ ಸಮಿತಿ, ಈ ಶಿಕ್ಷೆಯನ್ನು 5 ವರ್ಷಗಳಿಗೆ ಇಳಿಸಬೇಕು ಎಂದು ಸಲಹೆ ನೀಡಿದೆ.
ವೇಗದ ಚಾಲನೆ ಅಥವಾ ನಿರ್ಲಕ್ಷ್ಯ ಚಾಲನೆ ಮಾಡಿ ವ್ಯಕ್ತಿಯ ಸಾವಿಗೆ ಕಾರಣನಾಗುವ ಚಾಲಕನು, ಆ ಸ್ಥಳದಿಂದ ಓಡಿ ಹೋದರೆ ಅಥವಾ ಘಟನೆ ಬಗ್ಗೆ ಪೊಲೀಸರಿಗಾಗಲೀ, ಮ್ಯಾಜಿಸ್ಟ್ರೇಟ್‌ಗಾಗಲೀ ಮಾಹಿತಿ ನೀಡದೇ ಇದ್ದರೆ ಅಂಥವರಿಗೆ 10 ವರ್ಷ ಜೈಲು ಶಿಕ್ಷೆಯಾಗಬೇಕು ಎಂದು ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್)ಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಪ್ರಸ್ತಾಪವನ್ನೂ ಉಳಿಸಿಕೊಳ್ಳಬೇಕೇ, ಬೇಡವೇ ಎಂಬ ಬಗ್ಗೆಯೂ ಸಮಾಲೋಚನೆ ನಡೆಯಬೇಕು ಎಂದೂ ಬಿಜೆಪಿ ಸಂಸದ ಬೃಜ್‌ಲಾಲ್ ನೇತೃತ್ವದ ಗೃಹ ವ್ಯವಹಾರಗಳಿಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ.
ಭಾರತೀಯ ದಂಡ ಸಂಹಿತೆ(ಐಪಿಸಿ)ಯ ಸೆಕ್ಷನ್ 304ಎ ಅನ್ವಯ ಇಂಥ ಶಿಕ್ಷೆಗಳಿಗೆ ವಿಧಿಸಲಾಗುವ ಶಿಕ್ಷೆಯ ಪ್ರಮಾಣಕ್ಕೆ ಹೋಲಿಸಿದರೆ ಹೊಸ ಕಾನೂನಿನಲ್ಲಿ ಪ್ರಸ್ತಾಪಿಸಲಾದ ಶಿಕ್ಷೆಯ ಪ್ರಮಾಣವು ಅಧಿಕವಾಗಿದೆ. ಹೀಗಾಗಿ, ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವಂಥ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವನ್ನು 7ರ ಬದಲಿಗೆ 5ಕ್ಕೆ ಇಳಿಸಬೇಕು ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
ಆ.11ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಎಂಬ ಮೂರು ವಿಧೇಯಕಗಳನ್ನು ಲೋಕಸಭೆಯಲ್ಲಿ ಮಂಡಿಸಿದ್ದಾರೆ. ಈ ವಿಧೇಯಕಗಳ ಕುರಿತು ಪರಿಶೀಲನೆ ನಡೆಸಿರುವ ಸಂಸದೀಯ ಸಮಿತಿಯು ಶುಕ್ರವಾರ ರಾಜ್ಯಸಭೆಗೆ ತನ್ನ ವರದಿಯನ್ನು ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.