Kundapura ಪ್ರತ್ಯೇಕ ಪ್ರಕರಣ: ಇಬ್ಬರ ಸಾವು
Team Udayavani, Nov 12, 2023, 9:27 PM IST
ಕುಂದಾಪುರ: ಎರಡು ಪ್ರತ್ಯೇಕ ಪ್ರಕರಣದಲ್ಲಿ ನೀರಿಗೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.
ಸತ್ಯವತಿ ಅವರು ಮಳಿ ತೆಗೆಯುವ ಕೆಲಸಕ್ಕೆ ನ. 10ರಂದು ಪಂಚಗಂಗಾವಳಿ ಹೊಳೆಗೆ ಹೋದವರು ಆಕಸ್ಮಿಕವಾಗಿ ಮುಳುಗಿ ಮೃತಪಟ್ಟಿದ್ದಾರೆ.
ರಾತ್ರಿಯಾದರೂ ವಾಪಾಸು ಬರದೇ ಇದ್ದು ಸುತ್ತಲಿನ ಪರಿಸರದಲ್ಲಿ ಹುಡುಕಾಡಿದಾಗ ಪತ್ತೆಯಾಗಿರಲಿಲ್ಲ. ಖಾರ್ವಿ ಕೇರಿಯ ರಿಂಗ್ ರೋಡ್ ಸಮೀಪ ಪಂಚಗಂಗಾವಳಿ ಹೊಳೆಯಲ್ಲಿ ನ. 11ರಂದು ಮೃತದೇಹ ದೊರೆತಿತ್ತು. ಮೃತರ ಸಹೋದರ ಸಂದೀಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.
ಕೋಟೇಶ್ವರ ಗ್ರಾಮದ ಮೆಜೆಸ್ಟಿಕ್ ಹಾಲಿನ್ ಸಮೀಪದ ಹಲಸಿನಕಟ್ಟೆ ಎಂಬಲ್ಲಿ ವಾಸವಿರುವ ಜಿ. ರಾಜೇಶ (53) ಅವರು ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಕೃಷಿ ಕೆಲಸ ಮಾಡುತ್ತಿದ್ದು 3-4 ವರ್ಷಗಳಿಂದ ಆರೋಗ್ಯ ಸಮಸ್ಯೆ ಹೊಂದಿದ್ದು, ಚಿಕಿತ್ಸೆಯಲ್ಲಿದ್ದರು.
ಬಾವಿಗೆ ಬಿದ್ದ ರಾಜೇಶ್ ಅವರನ್ನು ಅಗ್ನಿಶಾಮಕ ದಳದವರ ಸಹಾಯದಿಂದ ಮೇಲಕ್ಕೆತ್ತಿ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ರಾಜೇಶ್ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.