Tamil Nadu: ಮೈ ಮೇಲೆ ಪಟಾಕಿ ಬಿದ್ದು 4 ವರ್ಷದ ಮಗು ಮೃತ್ಯು
Team Udayavani, Nov 13, 2023, 1:39 PM IST
ಸಾಂದರ್ಭಿಕ ಚಿತ್ರ
ಚೆನ್ನೈ: ಪಟಾಕಿ ಸಿಡಿದು ನಾಲ್ಕು ವರ್ಷದ ಮಗುವೊಂದು ಸಾವನ್ನಪ್ಪಿರುವ ದುರುಂತ ಘಟನೆ ತಮಿಳುನಾಡಿನ ರಾಣಿಪೇಟ್ ಜಿಲ್ಲೆಯ ಅಂಬಕ್ಕಂ ಪ್ರದೇಶದಲ್ಲಿ ಭಾನುವಾರ(ನವೆಂಬರ್ 12 ರಂದು) ನಡೆದಿದೆ.
ನಿಮಿಷಾ(4) ಮೃತ ಮಗು.
ದೀಪಾವಳಿ ಹಬ್ಬದ ಪ್ರಯುಕ್ತ ನಿಮಿಷಾ ತನ್ನ ತಂದೆ – ತಾಯಿಯೊಂದಿಗೆ ರಾಣಿಪೇಟೆಯ ತಮ್ಮ ಊರಿಗೆ ತೆರಳಿದ್ದರು. ಈ ವೇಳೆ ನಿಮಿಷಾ ನೆರೆಹೊರೆಯ ಮಕ್ಕಳು ಜೊತೆ ಸೇರಿಕೊಂಡು ಪಟಾಕಿಗೆ ಬೆಂಕಿ ಹಚ್ಚಿ ಹಬ್ಬವನ್ನು ಆಚರಿಸುತ್ತಿದ್ದಳು.
ಪಟಾಕಿ ಸಿಡಿಸುವಾಗ ಪಟಾಕಿಗಳು ಒಂದರ ನಂತರ ಒಂದರಂತೆ ಮಗುವಿನ ಮೇಲೆ ಬಿದ್ದಿದೆ. ಇದರಿಂದ ಮಗುವಿಗೆ ತೀವ್ರತರದ ಸುಟ್ಟಗಾಯಗಳಾಗಿವೆ. ಕೂಡಲೇ ಮಗುವನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ಎದೆ ಮತ್ತು ಹೊಟ್ಟೆಯ ಭಾಗಗಳಾದ ಸುಟ್ಟಗಾಯಗಳಿಂದಾಗಿ ಮಗು ಮೃತಪಟ್ಟಿದೆ ಎಂದು ವೈದ್ಯರು ಹೇಳಿದ್ದಾರೆ.
ಸದ್ಯ ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.