Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

ದೇವರಿಗೂ ದೀಪ ಹಚ್ಚುವ ಪರಿಪಾಠ ಅನೇಕ ಮನೆಗಳಲ್ಲಿ ಇಲ್ಲ.

Team Udayavani, Nov 13, 2023, 6:05 PM IST

Deepavali: ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಮಂಗಳದ ಚಿಹ್ನೆ

ಹಿಂದೆ ನಮ್ಮ ಪೂರ್ವಜರೆಲ್ಲ ಗೋಮಯದಿಂದ ನೆಲ ಸಾರಿಸುತ್ತಿದ್ದರು. ಗೋಮಯ ಆಯ್ದುಕೊಳ್ಳುವಾಗ ವಿಶಿಷ್ಟ ನಿಯಮಗಳಿದ್ದವು. ಕರು ಹಾಕಿರುವ ಹಸುವಿನ ತಾಜಾ ಸೆಗಣಿಯೇ ಗೋಮಯವಾಗುತ್ತಿತ್ತು. ಸೂರ್ಯನ ಕಿರಣದಡಿಯಲ್ಲಿ ಗೋಮಾಳಗಳಲ್ಲಿ ಮೇಯ್ದು ಬರುವ ದೇಸೀ ದನಗಳ ತಾಜಾ ಸೆಗಣಿಯಲ್ಲಿ ಕ್ರಿಮಿನಾಶಕ ಅಂಶಗಳಿವೆ ಎಂಬುದು ವೈಜ್ಞಾನಿಕ. ನಮ್ಮ ಕಾರ್ಯಗಳಿಗೆ ಅಡಚಣೆ ಉಂಟು ಮಾಡದಂತೆ ಉಪದ್ರವಕಾರಿ ಕೀಟಾಣುಗಳನ್ನು ದೂರವಿಡುವುದು ಅನಿವಾರ್ಯ. ಅವುಗಳ ಹತವೇ ನಮ್ಮ ಉದ್ದೇಶವಲ್ಲ; ಆದರೆ ನಮಗರಿವಿಲ್ಲದೆಯೇ ಅವು ಹತವಾದರೆ ಅದಕ್ಕಾಗಿ ಸೃಷ್ಟಿಕರ್ತನನ್ನೇ ಸ್ಮರಿಸುವುದು ಸಂಪ್ರದಾಯ.

ಗೋಮಯದಿಂದ ಶುದ್ಧಿಗೊಂಡ ನೆಲದ ಮೇಲೆ ರಂಗೋಲಿ ಇಡುವುದು ಮಂಗಳದ ಇನ್ನೊಂದು ಚಿಹ್ನೆ. ನಿತ್ಯವೂ ನಾವು ವಾಸಿಸುವ ಸ್ಥಳಗಳ ಎದುರು ಭಾಗದಲ್ಲಿ ಸೂರ್ಯೋದಯಕ್ಕೂ ಮುಂಚೆ ನೀರು-ಗೋಮಯ ಹಾಕಿ ಸಾರಿಸಿ ರಂಗೋಲಿ ಇಡುವುದು ನಡೆಯಬೇಕಾದ ಕೆಲಸ. ವಿಶೇಷ ದಿನಗಳಲ್ಲಿ ಮಾವಿನ ಎಲೆ, ಬಾಳೆ ಗಿಡಗಳಿಂದ ಬಾಗಿಲು ಅಲಂಕರಿಸಿ ದೇವತೆಗಳ ಆಹ್ವಾನಕ್ಕೆ ತಯಾರಿ ನಡೆಸಿಕೊಳ್ಳುವುದು ಮಂಗಳಕರ ಚಿಹ್ನೆ. ಸಂಜೆಯಾಯಿತೆಂದರೆ ಭಾರತೀಯ ನಾರಿಯರು
ಮನೆಯೊಳಗಡೆ ದೀಪ ಉರಿಸಿ ಈ ಶ್ಲೋಕ ಹೇಳುತ್ತಿದ್ದರು.

ಈ ಶ್ಲೋಕದಲ್ಲಿ “ಮಮ ಶತ್ರು ಹತಾರ್ಥಾಯ’ ಎಂದರೆ ನಮ್ಮ ಶತ್ರು ಕತ್ತಲೆ ಎಂದರ್ಥ. ಈ ಜನ್ಮದಲ್ಲಿ ವ್ಯಾವಹಾರಿಕವಾಗಿ ನಮಗೆ ಆಗದ ಜನರನ್ನು ಶತ್ರುಗಳೆಂದು ಭಾವಿಸಬಾರದು. ಹಾಗೆ ಭಾವಿಸುವುದು ನಮ್ಮ ದುಷ್ಟತನವೆನಿಸಿಕೊಳ್ಳುತ್ತದೆ. ನಮಗೂ, ಅವರಿಗೂ ಯಾವುದೋ ಕಾರ್ಯಕಾರಣದಿಂದ ಉಂಟಾದ ರಾಗದ್ವೇಷ ಆ ಕಾರಣಕ್ಕಾಗಿ ಮಾತ್ರ ಮೀಸಲಾಗಿರಲಿ;

ಅಲ್ಲಿಂದಾಚೆಗೆ ಎಲ್ಲ ವಿಷಯಗಳಲ್ಲೂ ಅವರು ನಮ್ಮ ದ್ವೇಷಿಗಳೆಂದು ಭಾವಿಸದಿರುವುದು ಸನಾತನ ನೀತಿ. ಮಹಾಭಾರತದಲ್ಲಿ ರಣರಂಗದಲ್ಲಿ ತೊಡೆ ಮುರಿದು ಬಿದ್ದ ದುರ್ಯೋಧನನನ್ನು ಕೃಷ್ಣನ ಅನುಜ್ಞೆಯ ಮೇರೆಗೆ ಭೀಮನು ಕೊಂದು ಹಾಕಿದ. ಸತ್ತ ಸುಯೋಧನನ ಶಿರವನ್ನು ಭೀಮ ಕಾಲಿನಿಂದ ತುಳಿದ. ಆಗ ಕೃಷ್ಣ ಒಂದು ಮಾತನ್ನು ಹೇಳಿದ್ದಾ ನೆ. ಜೀವಿಗೆ ಶಿರದ ಭಾಗವೇ ಪ್ರಮುಖ. ಅದನ್ನು ತುಳಿದು ಅವಮಾನಿಸಬಾರದು.

ಜೀವವಿರಲಿ, ಇಲ್ಲದಿರಲಿ ಪ್ರತ್ಯಕ್ಷವಾಗಿ ಜೀವಿಯ ಭೌತಿಕ ಶರೀರ ಎದುರು ಕಂಡಾಗ, ಕಾಲಿನಿಂದ ತಲೆ ತುಳಿಯಬಾರದು. ಹಿಂದೊಂದು ಜಾವದಲ್ಲಿ ಜೀವದಲ್ಲಿದ್ದ ಆ ಜೀವಿಗೆ ತಲೆಯೇ ಕೇಂದ್ರ ಸ್ಥಾನವಾಗಿತ್ತು. ತಲೆಯಿಲ್ಲದಿದ್ದರೆ ಜೀವಿ ಅಪೂರ್ಣ. ತಲೆಯಲ್ಲಿರುವ ಮೆದುಳಿನಿಂದ ಮನಸ್ಸಿನ ಚಟುವಟಿಕೆಗಳು ನಡೆಸಲ್ಪಡುತ್ತವೆ. ಹೀಗಾಗಿ ಭೀಮ ನೀನು ಸುಯೋಧನನ ಪಾರ್ಥಿವ ಶರೀರದ ಶಿರವನ್ನು ಕಾಲಿನಿಂದ ತುಳಿದದ್ದು ತಪ್ಪು. ಇದು ಕೃಷ್ಣನ ಧರ್ಮಪಾಲನೆ ತಿಳಿಸುತ್ತದೆ. ಇಂದು ಎಣ್ಣೆಯ ದೀಪಗಳ ಹಂಗಿಲ್ಲ. ದೇವರಿಗೂ ದೀಪ ಹಚ್ಚುವ ಪರಿಪಾಠ ಅನೇಕ ಮನೆಗಳಲ್ಲಿ ಇಲ್ಲ.

ಹೀಗಾಗಿ ದೀಪಗಳ ಮಹತ್ವದ ಅರಿವಿಲ್ಲ. ದೀಪಗಳನ್ನು ಉರಿಸುವಾಗ ಅವುಗಳಿಂದ ಉತ್ಪತ್ತಿಯಾದ ಹೊಗೆ ವಾಯು ಸೇರುತ್ತದೆ. ಹೀಗಾಗಿ ವಾಯು ಮಲೀನಗೊಳಿಸುವ ಹೊಗೆ ಆದಷ್ಟೂ ಆಗದ ರೀತಿಯಲ್ಲಿ ದೀಪಗಳನ್ನು ಉರಿಸುತ್ತಿದ್ದರು. ಉದಾಹರಣೆಗೆ ಎಳ್ಳೆಣ್ಣೆಯ ದೀಪ ಉರಿಸುವುದರಿಂದ ಅದರ ಹೊಗೆ ಸುತ್ತಲಿನ ವಾತಾವರಣ ಸೇರಿ-ಉಸಿರಾಟ ಮೂಲಕ ನಮ್ಮೊಳಗೆ ಸೇರಿ ಮನದ
ಕ್ಲೇಶನಾಶಕ್ಕೆ ಕಾರಣವಾಗುತ್ತದೆ. ತುಪ್ಪದ ದೀಪ ಕೂಡ ಹಾಗೆ. ಸೀಮೆಎಣ್ಣೆ ದೀಪವನ್ನು ದೇವರ ಮುಂದೆ ಬೆಳಗಲ್ಲ. ಏಕೆಂದರೆ ಕಲ್ಲೆಣ್ಣೆಯ ಹೊಗೆ ಆರೋಗ್ಯಕ್ಕೆ ಹಾನಿಕರ.

ಮನುಷ್ಯ ಪರಿಶ್ರಮದಿಂದ ತಯಾರಿಸಿಕೊಂಡ ಕಡಲೆಕಾಯಿ ಎಣ್ಣೆ ಶೇಂಗಾ ಎಣ್ಣೆ, ಹರಳೆಣ್ಣೆ, ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಇಂತಹ ಎಣ್ಣೆಗಳನ್ನು ಮಾತ್ರ ದೀಪಗಳಿಗೆ ಬಳಸಲಾಗುತ್ತದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ಬೆಳಕಿನ ಹಬ್ಬ…ನೀರು ತುಂಬುವ ಹಬ್ಬ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023: ದೀಪಾವಳಿಯ ಬಲಿಪಾಡ್ಯಮಿ… ಪೂಜ್ಯನೀಯ ಗೋ ಪೂಜೆ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ದೀಪಾವಳಿಗೂ ಲಕ್ಷ್ಮಿದೇವಿಗೂ ಅವಿನಾಭಾವ ಸಂಬಂಧ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali 2023; ಹಳ್ಳಿಗಳಲ್ಲಿ ಆಚರಿಸುವ ಪಾಂಡವರ ಪೂಜೆ

Deepavali: ಮತ್ತೆ ಮೂಡಿತು ಬೆಳಕು

Deepavali: ಮತ್ತೆ ಮೂಡಿತು ಬೆಳಕು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.