Congress ಹೈಕಮಾಂಡ್ ಟಿಕೆಟ್ ನೀಡಿದರೆ ಲೋಕಸಭೆಗೆ ಸ್ಪರ್ಧೆ: ರಾಜಣ್ಣ
Team Udayavani, Nov 13, 2023, 8:48 PM IST
ತುಮಕೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇದೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಲೋಕಸಭೆಯನ್ನೂ ಒಮ್ಮೆ ನೋಡುವ ಆಸೆಯಿದೆ. ಹೈಕಮಾಂಡ್ ಒಪ್ಪಿ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ.
ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ಬರುವ ಬಗ್ಗೆ ನನ್ನ ಬಳಿಯೂ ಕೆಲವರು ಚರ್ಚೆ ನಡೆಸಿದ್ದಾರೆ. ಡಾ.ಜಿ.ಪರಮೇಶ್ವರ್ ಹತ್ತಿರವೂ ಕೆಲವರು ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಸೇರುವ ವಿಚಾರ ಗೊತ್ತಿಲ್ಲ ಎಂದರು.
ಶೀಘ್ರದಲ್ಲೇ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ. ಅದನ್ನು ಸಾರ್ವಜನಿಕರ ಚರ್ಚೆಗೆ ಬಿಡಲಾಗುವುದು. ಅಲ್ಲಿ ಬರುವ ಅಭಿಪ್ರಾಯವನ್ನು ಪರಿಗಣಿಸಿ, ಯಾವುದನ್ನು ಬಿಡಬೇಕು, ತೆಗೆದುಕೊಳ್ಳಬೇಕು ಎಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.ವರದಿ ಬಂದಾಕ್ಷಣ ಒಪ್ಪಬೇಕೆಂಬ ನಿಯಮವಿಲ್ಲ ಎಂದು ಹೇಳಿದರು.
ಮಾಸ್ ಲೀಡರ್ ಆಗಲು ಸಾಧ್ಯವಿಲ್ಲ: ಸರ್ಕಾರ ಇದ್ದಾಗ ಉಪ ಚುನಾವಣೆಗಳಲ್ಲಿ ಎರಡು ಸ್ಥಾನ ಗೆದ್ದಾಕ್ಷಣ ಮಾಸ್ ಲೀಡರ್ ಆಗಲು ಸಾಧ್ಯವಿಲ್ಲ, ಜನರ ಜೊತೆ ಇದ್ದು ಜನರಿಗಾಗಿ ಹೋರಾಟ ಮಾಡಿ ಮಾಸ್ ಲೀಡರ್ ಆಗಬೇಕು. ಬಿಜೆಪಿಯಲ್ಲಿ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ಅಧ್ಯಕ್ಷ ಮತ್ತು ವಿರೋಧಪಕ್ಷ ಸ್ಥಾನಗಳಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಡಿಯೂರಪ್ಪ ಅವರ ಮಗ ವಿಜಯೇಂದ್ರನನ್ನು ತಂದಿದ್ದಾರೆ. ಇದರ ಬಗ್ಗೆ ಬಿಜೆಪಿ ಮುಖಂಡರಲ್ಲಿಯೇ ಅಸಮಾಧಾನವಿದೆ. ಒಂದೆರಡು ಬೈ ಎಲೆಕ್ಷನ್ ಗೆಲ್ಲಿಸಿದಾಕ್ಷಣ ದೊಡ್ಡ ಸಂಘಟನಾ ಚುತುರ ಎಂದು ಸರ್ಟಿಫಿಕೇಟ್ ನೀಡಲಾಗದು ಎಂದು ಹೇಳಿದರು.
ಮಾಜಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರುವ ವಿಚಾರ ಪ್ರಸ್ತಾಪಿಸಿದ ಕೆ.ಎನ್.ರಾಜಣ್ಣ, ಡಿ.6ರಂದು ಸಿದ್ಧಗಂಗಾ ಮಠದಲ್ಲಿ ಸೋಮಣ್ಣ ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದಾರೆ. ನನ್ನನ್ನೂ ಆಹ್ವಾನಿಸಿದ್ದಾರೆ. ಅಧಿವೇಶನದ ಇದೆ. ಆದರೂ ಬಿಡುವು ಮಾಡಿಕೊಂಡು ಬರಲು ಪ್ರಯತ್ನಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.