Bhadra ಮೇಲ್ದಂಡೆ ಯೋಜನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಿರಿ

Team Udayavani, Nov 13, 2023, 8:55 PM IST

Bhadra ಮೇಲ್ದಂಡೆ ಯೋಜನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಿರಿ

ಬೆಂಗಳೂರು: ರಾಷ್ಟ್ರೀಯ ಯೋಜನೆ ಎಂದು ಘೋಷಿಸಿರುವ ಭದ್ರಾ ಮೇಲ್ದಂಡೆ ಯೋಜನೆಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಬೇಕು ಎಂದು ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಕೇಂದ್ರ ಜಲ ಶಕ್ತಿ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರನ್ನು ಒತ್ತಾಯಿಸಿದರು.

ಈ ಸಂಬಂಧ ದೆಹಲಿಯಲ್ಲಿ ದೇಬಶ್ರೀ ಮುಖರ್ಜಿ ಅವರನ್ನು ಭೇಟಿಯಾದ ಟಿ.ಬಿ. ಜಯಚಂದ್ರ, ಕೇಂದ್ರ ಸರ್ಕಾರ ಕಳೆದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ, ಇದಕ್ಕಾಗಿ 5,300 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿತ್ತು. ಈಗ ಇದಕ್ಕೆ ಸಂಬಂಧಿಸಿದ ಕಡತ ಪ್ರಧಾನಿ ಕಚೇರಿಯಲ್ಲಿದೆ. ಮುಂದೆ ನಡೆಯಲಿರುವ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಬೇಕು ಎಂದು ಆಗ್ರಹಿಸಿದರು.

ಕಳೆದ ಬಾರಿ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಟಿ.ಬಿ. ಜಯಚಂದ್ರ ಅವರು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಭೇಟಿ ಮಾಡಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ನೀಡಿದ್ದರು. ಈಗ ಜಲಶಕ್ತಿ ಕಾರ್ಯದರ್ಶಿಯನ್ನು ಭೇಟಿಯಾಗಿ ಮತ್ತೂಮ್ಮೆ ಮನವಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲ ಭಾಗಗಳಲ್ಲಿ ಭೂಸ್ವಾಧೀನ ಮಾಡಿಕೊಳ್ಳಬೇಕಾಗಿದೆ. ಹೀಗಾಗಿ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಿದರೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಬಹುದು. ಈ ಯೋಜನೆಯಿಂದ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಲು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.

ಇದಲ್ಲದೆ, ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳನ್ನು ನಿವಾರಿಸಿ ಅನುಮೋದನೆ ನೀಡುವಂತೆ ಸಹ ಕೋರಿ¨ªಾರೆ. ದೀರ್ಘ‌ಕಾಲದಿಂದ ನೆನಗುದಿಗೆ ಬಿದ್ದಿರುವ ಮೇಕೆದಾಟು ಯೋಜನೆಗೆ ಕೇಂದ್ರ ಪರಿಸರ ಇಲಾಖೆ ,ಜಲ ಶಕ್ತಿ ಇಲಾಖೆ ಸೇರಿದಂತೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ಕೊಡಿಸಿ, ಮೇಕೆದಾಟು ಯೋಜನೆ ಕಾಮಗಾರಿ ಆರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬೇಕು ಎಂದು ಆಗ್ರಹಿಸಿದರು.

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಮಾಡುವುದರಿಂದ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಅನುಕೂಲವಾಗುತ್ತದೆ . ಅಷ್ಟೇ ಅಲ್ಲ, ಬರಗಾಲದ ಸಮಯದಲ್ಲಿ ತಮಿಳುನಾಡಿಗೆ ಸಹ ನೀರು ಬಿಡಲು ಅನುಕೂಲವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು

Middle Class Family Tulu movie

Middle Class Family: ಮತ್ತೆ ರಂಜಿಸಲು ಬರುತ್ತಿದ್ದಾರೆ ಸೌಂಡ್‌ ಲೈಟ್ಸ್‌ ಹುಡುಗರು

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

1-aa

Congress MLA ; ಬೇಲೇಕೇರಿ ಅದಿರು ನಾಪತ್ತೆ ಕೇಸ್: ಕಾರವಾರ ಶಾಸಕ ಸತೀಶ್ ಸೈಲ್‌ ದೋಷಿ

Shiggaon: ಉಪ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

Shiggaon: ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

Zee Kannada Kutumba Awards-2024

Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್

KSRTC: ಬಸ್ ಪಲ್ಟಿ, ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.