CCB Raid: ಮೀಟರ್‌ ಬಡ್ಡಿ ದಂಧೆಕೋರರಿಗೆ ಸಿಸಿಬಿ ಶಾಕ್‌

Team Udayavani, Nov 14, 2023, 11:47 AM IST

CCB Raid: ಮೀಟರ್‌ ಬಡ್ಡಿ ದಂಧೆಕೋರರಿಗೆ ಸಿಸಿಬಿ ಶಾಕ್‌

ಬೆಂಗಳೂರು: ನಗರದಲ್ಲಿ ಮೀಟರ್‌ ಬಡ್ಡಿ ದಂಧೆ ಹಾವಳಿ ಹೆಚ್ಚಾಗಿದ್ದು, ದೀಪಾ ವಳಿ ಸಂದರ್ಭದಲ್ಲಿ ಸಿಸಿಬಿ ಪೊಲೀಸರು ದಂಧೆಕೋರರ ಮೇಲೆ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ.

ಕೇಂದ್ರ ಅಪರಾಧ ಬ್ಯೂರ(ಸಿಸಿಬಿ)ದ ಆರ್ಥಿಕ ಅಪರಾಧ ವಿಭಾಗ, ಬೆಂಗಳೂರು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಲೇವಾದೇವಿ ನಿಬಂಧಕ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಚಾಮರಾಜಪೇಟೆ, ಬಸವನಗುಡಿ, ಕಾಮಾಕ್ಷಿಪಾಳ್ಯ, ಬಸವೇಶ್ವರನಗರದ ನಾಲ್ಕು ಕಡೆಗಳಲ್ಲಿ ಮೀಟರ್‌ ಬಡ್ಡಿ ದಂಧೆ ನಡೆಸುವವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.

ಚಾಮರಾಜಪೇಟೆಯಲ್ಲಿ ವೆಂಕಟೇಶ್‌, ಬಸವೇಶ್ವರ ನಗರದಲ್ಲಿ ಮನೋಜ್‌, ಬಸವನಗುಡಿಯಲ್ಲಿ ನಿವೃತ್ತ ಎಎಸ್‌ಐ ಪುತ್ರ ಶೀಲಾ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ರೌಡಿಶೀಟರ್‌ ಜಗದೀಶ್‌ ಅಲಿಯಾಸ್‌ ಟಾಮಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಸಂದರ್ಭದಲ್ಲಿ 23.42 ಲಕ್ಷ ರೂ. ನಗದು, 7 ಲಕ್ಷ ರೂ. ಮೌಲ್ಯದ 127 ಗ್ರಾಂ ಚಿನ್ನಾಭರಣ, 9 ಲಕ್ಷ ರೂ. ಮೌಲ್ಯದ 10 ಕೆ.ಜಿ. 864 ಗ್ರಾಂ ಬೆಳ್ಳಿ ವಸ್ತುಗಳು, 109 ಚೆಕ್‌ಗಳು, 50 ಆನ್‌ ಡಿಮಾಂಡ್‌ ಪ್ರಾಮಿಸರಿ ನೋಟ್‌, 42 ಖಾಲಿ ಬಾಂಡ್‌ ಪೇಪರ್‌, 85 ಶುದ್ಧ ಕ್ರಿಯ ಪತ್ರಗಳು, 35 ಸಾಲ ನಮೂದಿಸಿರುವ ದಾಖಲಾತಿಗಳು, 11 ಇ-ಸ್ಟಾಂಪ್‌ ಪೇಪರ್‌ಗಳು, 45 ಪಾಕೇಟ್‌ ಪುಸ್ತಕಗಳು, 15 ಅಗ್ರಿಮೆಂಟ್‌ ಪ್ರತಿಗಳು, 3 ಲಕ್ಷ ರೂ. ಮೌಲ್ಯದ 6 ರೋಲೆಕ್ಸ್‌ ವಾಚ್‌ಗಳು ಸೇರಿ 42,42 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.

ಆರೋಪಿಗಳ ಪೈಕಿ ಮನೋಜ್‌ ಪರಾರಿಯಾಗಿದ್ದು, ಇತರೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗಿದೆ. ಈ ಹಿಂದೆ ರೌಡಿಗಳ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ರೌಡಿ ಶೀಟರ್‌ ಜಗದೀಶ್‌ ಅಲಿಯಾಸ್‌ ಟಾಮಿ ಮನೆ ಮೇಲೆ ರೌಡಿ ನಿಗ್ರಹ ಪಡೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆಯೇ ಈತನ ವ್ಯವಹಾರಗಳು ಕಂಡು ಬಂದ ಹಿನ್ನೆಲೆಯಲ್ಲಿ ಆರ್ಥಿಕ ಅಪರಾಧ ವಿಭಾಗಕ್ಕೆ ಮಾಹಿತಿ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಆತನ ಮನೆ ಮೇಲೆ ದಾಳಿ ನಡೆಸಲಾಗಿದೆ. ಆರೋಪಿಗಳು ಬಡವರು ಮತ್ತು ಮಧ್ಯಮ ವರ್ಗದವರಿಗೆ ಮೀಟರ್‌ಬಡ್ಡಿ ರೂಪದಲ್ಲಿ ಹಣ ನೀಡಿ ಸುಲಿಗೆ ಮಾಡುತ್ತಿದ್ದರು ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಸಿಸಿಬಿ ಡಿಸಿಪಿ ಆರ್‌.ಶ್ರೀನಿವಾಸ್‌ಗೌಡ ನೇತೃತ್ವದಲ್ಲಿ ಆರ್ಥಿಕ ಅಪರಾಧ ವಿಭಾಗದ ಎಸಿಪಿ ಎಂ.ಎಚ್‌. ಮಂಜುನಾಥ ಚೌಧರಿ ಮತ್ತು ತಂಡ ಕಾರ್ಯಾಚರಣೆ ನಡೆಸಿದೆ.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.