Mla Pradeep Eshwar: ಮೊನ್ನೆ ಬಿಗ್‌ಬಾಸ್‌, ಈಗ ತೆಲಂಗಾಣದಲ್ಲಿ ಪ್ರಚಾರ!

Team Udayavani, Nov 14, 2023, 2:34 PM IST

Mla Pradeep Eshwar: ಮೊನ್ನೆ ಬಿಗ್‌ಬಾಸ್‌, ಈಗ ತೆಲಂಗಾಣದಲ್ಲಿ ಪ್ರಚಾರ!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ನೆರೆಯ ತೆಲಂಗಾಣ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯದಲ್ಲಿ ತೊಡಗಿರುವುದಕ್ಕೆ ಜೆಡಿಎಸ್‌ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಜೆಡಿಎಸ್‌ ಎಂಬ ಮುಖಪುಟದಲ್ಲಿ ತನ್ನ ಕ್ಷೇತ್ರದ ಹೂ ಬೆಳೆಗಾರರ ಸಮಸ್ಯೆ ಬಗ್ಗೆ ತಲೆ ಕೆಡಿಸಿಕೊಳ್ಳದೇ, ಪಕ್ಕದ ರಾಜ್ಯದ ಜನರ ಕಿವಿಗೆ ಹೂ ಇಡುತ್ತಿರುವ ಬಿಲ್ಡಪ್‌ ಈಶ್ವರ್‌ ಎಂದು ಬರೆದು ಚಿಕ್ಕಬಳ್ಳಾಪುರದ ಹೂ ಮಾರುಕಟ್ಟೆಯ ಅವ್ಯವಸ್ಥೆಯ ದೃಶ್ಯಗಳನ್ನು ಟ್ಯಾಗ್‌ ಮಾಡಿದ್ದಾರೆ.

ಜೆಡಿಎಸ್‌ ಮುಖಂಡರ ಆಕ್ರೋಶ: ಇನ್ನೂ ಚಿಕ್ಕಬಳ್ಳಾಪುರದ ಜೆಡಿಎಸ್‌ ಯುವ ಮುಖಂಡ ಅಖೀಲ್‌ರೆಡ್ಡಿ ಎಂಬುವರು ತಮ್ಮ ಫೇಸ್‌ಬುಕ್‌ನಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಹಾಗೂ ಹೂ ಮಾರುಕಟ್ಟೆ ವ್ಯವಸ್ಥೆಯ ದೃಶ್ಯವನ್ನು ಲಕ್ಷಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ. ಸುಮಾರು 31 ಸಾವಿರ ಮಂದಿ ಲೈಕ್‌ ಒತ್ತಿದ್ದು 1,700 ಮಂದಿ ಕಾಮೆಂಟ್‌ ಮಾಡಿದ್ದಾರೆ.

ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ತಾತ್ಕಾಲಿಕ ಜಾಗದಲ್ಲಿ ನಡೆಯುತ್ತಿರುವ ಹೂ ಮಾರುಕಟ್ಟೆಯ ದುಸ್ಥಿತಿ ಬಗ್ಗೆ ಜೆಡಿಎಸ್‌ ಮುಖಂಡರು ತಮ್ಮ ಆಕ್ರೋಶ ವ್ಯಕ್ತಪಡಿಸುವ ಮೂಲಕ ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸದೇ, ಪಕ್ಕದ ರಾಜ್ಯದ ಚುನಾವಣೆಯಲ್ಲಿ ಪ್ರಚಾರಕ್ಕೆ ತೆರಳಿರುವ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧ ಕಿಡಿಕಾರಿದ್ದಾರೆ. ತಾನು ರೈತ ಮಗ ಎಂದು ಹೇಳಿಕೊಂಡು ಓಟ್‌ ಹಾಕಿಕೊಂಡು ಗೆದ್ದು ಬಿಟ್ಟಿದೀರಿ, ಚಿಕ್ಕಬಳ್ಳಾಪುರದಲ್ಲಿ ಸರಿಯಾದ ರಸ್ತೆ ಇಲ್ಲ. ಚರಂಡಿ ಇಲ್ಲ. ಮಳೆ ಬಂದರೆ ಓಡಾಟಕ್ಕೆ ಆಗಲ್ಲ. ಇದಕ್ಕೆ ಪರಿಹಾರ ಕಲ್ಪಿಸಿ, ನೀವು ನೋಡಿದರೆ ಚಿಕ್ಕಬಳ್ಳಾಪುರದಲ್ಲಿ ಏನು ಸಮಸ್ಯೆ ಇಲ್ಲ ಅಂತ ಎಲ್ಲೋ ಹೋಗಿ ಚುನಾವಣೆ ಪ್ರಚಾರದಲ್ಲಿ ಇದ್ದೀರಿ. ಇಲ್ಲಿಗೆ ಬಾರಣ್ಣ, ನೀವು ಇಲ್ಲಿ ಬರಲೇಬೇಕಣ್ಣ ಅಂತ ಯುವ ರೈತರಾಗಿರುವ ಅಖೀಲ್‌ರೆಡ್ಡಿ ಶಾಸಕ ಪ್ರದೀಪ್‌ ಈಶ್ವರ್‌ಗೆ ಕೋರಿದ್ದಾರೆ.

ಕೆಸರು ಗದ್ದೆಯಾದ ಹೂ ಮಾರುಕಟ್ಟೆ!: ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ನಗರದ ಹೊರ ವಲಯದ ಸಿವಿವಿ ಕ್ಯಾಂಪಸ್‌ ಬಳಿ ಇರುವ ತಾತ್ಕಲಿಕ ಹೂ ಮಾರುಕಟ್ಟೆ ಸಂಪೂರ್ಣ ಕೆಸರು ಗೆದ್ದೆಯಾಗಿದ್ದು, ವಾಹನಗಳ ಹಾಗೂ ರೈತರ ಓಡಾಟಕ್ಕೆ ತೀವ್ರ ಸಮಸ್ಯೆ ಆಗಿದೆ. ಹೂ ಮಾರುಕಟ್ಟೆಯ ಅವ್ಯವಸ್ಥೆಯನ್ನು ವಿಡಿಯೋ ಮಾಡಿ ಶಾಸಕ ಪ್ರದೀಪ್‌ ಈಶ್ವರ್‌ಗೆ ಟ್ಯಾಗ್‌ ಮಾಡಿರುವ ನೆಟ್ಟಿಗರು ಮೊದಲು ಚಿಕ್ಕಬಳ್ಳಾಪುರ ಬಾ ಅಂತ ಕರೆಯುತ್ತಿದ್ದು, ಈ ವಿಡಿಯೋ ತುಣಕುಗಳು ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗುತ್ತಿವೆ.

ಟಾಪ್ ನ್ಯೂಸ್

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.