Kerala ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆ ಶಿಕ್ಷೆ
ಮಕ್ಕಳ ದಿನಾಚರಣೆ ದಿನದಂದೇ ಆರೋಪಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Nov 14, 2023, 7:32 PM IST
ಕೊಚ್ಚಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ ಕೇರಳದ ನ್ಯಾಯಾಲಯವು ಮಂಗಳವಾರ ಮರಣದಂಡನೆ ವಿಧಿಸಿದೆ.
ಬಿಹಾರದ 5 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಂದ ಅಪರಾಧಿ ಅಶ್ವಕ್ ಆಲಂನನ್ನು ಗಲ್ಲಿಗೇರಿಸುವಂತೆ ವಿಶೇಷ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ನ್ಯಾಯಾಲಯದ ನ್ಯಾಯಾಧೀಶ ಕೆ ಸೋಮನ್ ಆದೇಶಿಸಿದ್ದಾರೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ (ಪಿಪಿ) ಜಿ ಮೋಹನರಾಜ್ ಹೇಳಿದ್ದಾರೆ.
ಬಿಹಾರದ ವಲಸೆ ಕಾರ್ಮಿಕ ಆಲಂಗೆ ನೀಡಿದ ಶಿಕ್ಷೆಯ ವಿವರಗಳನ್ನು ನೀಡಿದ ಪ್ರಾಸಿಕ್ಯೂಟರ್, ಭಾರತೀಯ ದಂಡ ಸಂಹಿತೆ ಮತ್ತು ಪೋಕ್ಸೋ ಅಡಿಯಲ್ಲಿ ಅತ್ಯಾಚಾರ ಮತ್ತು ತೀವ್ರತರವಾದ ಲೈಂಗಿಕ ದೌರ್ಜನ್ಯದ ವಿವಿಧ ಅಪರಾಧಗಳಿಗಾಗಿ ಅಪರಾಧಿಗೆ ಐದು ಜೀವಾವಧಿ ಶಿಕ್ಷೆಯನ್ನು ನೀಡಲಾಗಿದೆ. ಆದರೆ ಮರಣದಂಡನೆ ಶಿಕ್ಷೆಯನ್ನು ಕೇರಳ ಹೈಕೋರ್ಟ್ ಖಚಿತಪಡಿಸಿದರೆ ಮಾತ್ರ ಶಿಕ್ಷೆ ಜಾರಿಯಾಗಲಿದೆ ಎಂದು ಮೋಹನರಾಜ್ ಮಾಧ್ಯಮಗಳಿಗೆ ತಿಳಿಸಿದರು.
ಜೀವಾವಧಿ ಶಿಕ್ಷೆ ಎಂದರೆ ಅಪರಾಧಿ ತನ್ನ ಸಹಜ ಜೀವನ ಪರ್ಯಂತ ಜೈಲಿನಲ್ಲಿಯೇ ಇರಬೇಕಾಗುತ್ತದೆ ಎಂದು ನ್ಯಾಯಾಲಯ ಆದೇಶಿಸಿದೆ ಎಂದು ಹೇಳಿದ್ದಾರೆ.
ನ್ಯಾಯಾಲಯವು ಅಪರಾಧಿಗೆ ₹ 6 ಲಕ್ಷಕ್ಕೂ ಹೆಚ್ಚು ದಂಡವನ್ನು ವಿಧಿಸಿದೆ ಎಂದು ಅವರು ಹೇಳಿದರು.
ಮಕ್ಕಳ ದಿನಾಚರಣೆ ದಿನದಂದೇ ನೀಡಿದ ಶಿಕ್ಷೆಯನ್ನು ಮಕ್ಕಳ ಮೇಲೆ ದೌರ್ಜನ್ಯ ನಡೆಸುವವರಿಗೆ ಬಲವಾದ ಎಚ್ಚರಿಕೆಯಾಗಿ ನೋಡಬೇಕು. ಮಗು ಅತ್ಯಂತ ಘೋರ ಅಪರಾಧಕ್ಕೆ ಬಲಿಯಾಗಿದೆ ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯನ್ನು ನೀಡಲು ಇಡೀ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಸಮರ್ಥವಾಗಿ ಕೆಲಸ ಮಾಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಜು. 28 ರಂದು ಅಪ್ರಾಪ್ತ ಬಾಲಕಿಯನ್ನು ಬಾಡಿಗೆ ಮನೆಯಿಂದ ಅಪಹರಿಸಿದ ನಂತರ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.