Thekkatte ರಾಮಕೃಷ್ಣ ಆಚಾರ್‌ಗೆ ಹುಟ್ಟೂರ ಸಮ್ಮಾನ
Team Udayavani, Nov 14, 2023, 9:18 PM IST
ತೆಕ್ಕಟ್ಟೆ : ಮಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪದವಿ ಪುರಸ್ಕೃತ ಮೂಡಬಿದಿರೆಯ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ. ಲಿ. ಇದರ ಚೇರ್‌ಮನ್ ಡಾ| ಜಿ. ರಾಮಕೃಷ್ಣ ಆಚಾರ್ ಅವರಿಗೆ ಇಲ್ಲಿನ ಯಡಾಡಿ ಮತ್ಯಾಡಿ, ಹೊಂಬಾಡಿ ಮಂಡಾಡಿ ಮತ್ತು ಮೊಳಹಳ್ಳಿ ಯ ಗ್ರಾಮಸ್ಥರು ಒಂದಾಗಿ ನಡೆಸಿದ ಹುಟ್ಟೂರ ಸಮ್ಮಾನ ಸಮಾರಂಭವು ನ.11ರಂದು ಗುಡ್ಡೆಯಂಗಡಿ ಯಡಾಡಿ ಮತ್ಯಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಚಿತ್ರನಟ ರಮೇಶ್ ಅರವಿಂದ್ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿ ದರು. ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಸಮ್ಮಾನಿಸಿದರು. ಸಮ್ಮಾನ ಸಮಿತಿಯ ಅಧ್ಯಕ್ಷ ಬಿ.ಅರುಣ್ ಕುಮಾರ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ , ಸಮ್ಮಾನ ಸಮಿತಿಯ ಗೌರವಾಧ್ಯಕ್ಷ ಉದ್ಯಮಿ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ , ಲಯನ್ ಮಾಜಿ ರಾಜ್ಯಪಾಲ ಎನ್.ಎಂ. ಹೆಗ್ಡೆ ,
ಸವಿತಾ ರಾಮಕೃಷ್ಣ ಆಚಾರ್, ತೇಜಸ್ ಆಚಾರ್, ಪ್ರಜ್ವಲ್ ಆಚಾರ್, ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ| ಎಂ. ಬಾಲಕೃಷ್ಣ ಶೆಟ್ಟಿ, ಕಲರ್ ಕನ್ನಡ ವಾಹಿನಿಯ ಗಿಚ್ಚಿಗಿಲಿಗಿಲಿಯ ನಿರೂಪಕಿ ಜಾಹ್ನವಿ, ಹೊಂಬಾಡಿ ಮಂಡಾಡಿ ಗ್ರಾ.ಪಂ. ಅಧ್ಯಕ್ಷೆ ಜಯಂತಿ ಶೆಟ್ಟಿ, ಗುಡ್ಡೆಯಂಗಡಿ ಯಡಾಡಿ ಮತ್ಯಾಡಿ ಸರಕಾರಿ ಹಿ. ಪ್ರಾ. ಶಾಲೆಯ ಮುಖ್ಯೋ ಪಾಧ್ಯಾಯಿನಿ ರಮಣಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಮಂಗಳೂರು ಶ್ರೀ ರಾಮಕೃಷ್ಣ ಕಾಲೇಜಿನ ಪ್ರಾಂಶುಪಾಲ ಪ್ರೊ| ಎಂ. ಬಾಲಕೃಷ್ಣ ಶೆಟ್ಟಿ ಅಭಿನಂದನಾ ಭಾಷಣಗೈದು, ಎಚ್. ದೀನಪಾಲ್ ಶೆಟ್ಟಿ ಸ್ವಾಗತಿಸಿ, ಸಹ ಕಾರ್ಯದರ್ಶಿ ಎನ್. ಸತೀಶ ಅಡಿಗ ಮತ್ಯಾಡಿ ಪ್ರಶಸ್ತಿ ಪತ್ರ ವಾಚಿಸಿ, ಹಿರಿಯ ಪತ್ರಕರ್ತ ಕೆ.ಸಿ.ರಾಜೇಶ್ ನಿರೂಪಿಸಿ, ವಿದ್ವಾನ್ ದಾಮೋದರ ಶರ್ಮ ಸಹಕರಿಸಿ, ಕಾರ್ಯದರ್ಶಿ ಉಮೇಶ್ ಶೆಟ್ಟಿ ವಂದಿಸಿದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.