Chikkamagaluru: ಸಾರಗೋಡು ಸಮೀಪ ಕಾಡಾನೆ ಸೆರೆ


Team Udayavani, Nov 16, 2023, 11:59 AM IST

2-chikkamagaluru

ಚಿಕ್ಕಮಗಳೂರು: ಜಿಲ್ಲೆಯ ಸಾರಗೋಡು ಸಮೀಪ ಕಾಡಾನೆಯೊಂದನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ.

ನ. 15ರ ಬುಧವಾರ ಮಧ್ಯಾಹ್ನ ಮೂಡಿಗೆರೆ ತಾಲ್ಲೂಕಿನ ಬಣಕಲ್ ಸಮೀಪದ ಬಸನಿ ಎಂಬಲ್ಲಿ ಕಾಡಾನೆಯೊಂದಕ್ಕೆ ಅರವಳಿಕೆ ಚುಚ್ಚುಮದ್ದು ಶೂಟ್ ಮಾಡಲಾಗಿತ್ತು. ಆನೆ ಸುಮಾರು 8 ಕಿಲೋ ಮೀಟರ್ ನಷ್ಟು ದೂರ ಸಾಗಿ ಸಾರಗೋಡು ಸಮೀಪ ಅರಣ್ಯದಲ್ಲಿ ಬಿದ್ದಿತ್ತು ಎನ್ನಲಾಗಿದೆ.

ನಂತರ ಸಂಜೆ ಅಭಿಮನ್ಯು ನೇತೃತ್ವದ ಸಾಕಾನೆಗಳ ನೆರವಿನಿಂದ ಸೆರೆಯಾದ ಆನೆಯನ್ನು ತಡರಾತ್ರಿ ಲಾರಿಗೆ ತುಂಬಿಸಿ ಸಕ್ರೇಬೈಲ್ ಆನೆ ಶಿಬಿರದ ಕಡೆ ಕೊಂಡೊಯ್ಯಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಸಮೀಪ ಕಾರ್ಮಿಕ ಮಹಿಳೆಯೋರ್ವರನ್ನು ಕಾಡಾನೆಯೊಂದು ತುಳಿದು ಸಾಯಿಸಿತ್ತು. ನವೆಂಬರ್ 8 ರಂದು ಮಹಿಳೆಯನ್ನು ಕೊಂದ ದಿನವೇ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸಿದ್ದರು. ಅವರ ಸೂಚನೆ ಮೇರೆಗೆ ಈ ಆನೆಯನ್ನು ಸೆರೆ ಹಿಡಿದು ಬೇರೆಡೆಗೆ ಸಾಗಿಸಲು ಸರ್ಕಾರ ಆದೇಶ ಮಾಡಿತ್ತು. ಈ ಆನೆ ಮಲೆನಾಡು ಭಾಗದಲ್ಲಿ ಹಲವು ಜೀವಹಾನಿಗೆ ಕಾರಣವಾಗಿತ್ತು.

ಅದರ ಸೆರೆಗೆ ಮತ್ತು ಆಲ್ದೂರು ಸುತ್ತಮುತ್ತ ಸಂಚರಿಸುತ್ತಿರುವ ಭುವನೇಶ್ವರಿ ತಂಡದ ಏಳು ಆನೆಗಳನ್ನು ಕಾಡಿಗಟ್ಟಲು ಒಟ್ಟು 9 ಸಾಕಾನೆಗಳನ್ನು ಕರೆತರಲಾಗಿತ್ತು. ಒಂಟಿ ಸಲಗದ ಪತ್ತೆಗೆ ಸತತ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಆದರೆ ನಿಗದಿತ ಒಂಟಿ ಸಲಗ ಕಾರ್ಯಾಚರಣೆ ವೇಳೆ ಪತ್ತೆಯಾಗಿರಲಿಲ್ಲ.

ಪ್ರಾಣಹಾನಿ ಉಂಟುಮಾಡುತ್ತಿದ್ದ ಒಂಟಿಸಲಗವನ್ನು ಹಿಡಿಯಲು ಕಾರ್ಯಾಚರಣೆ ನಡೆಸುತ್ತಿರುವಾಗ ಕುಂದೂರು ಭಾಗದ ಕಾಡಿನಲ್ಲಿ ಅನೇಕ ಆನೆಗಳು ಪತ್ತೆಯಾಗಿದ್ದವು. ಅವುಗಳಲ್ಲಿ ಒಂದು ಕಾಡಾನೆಯನ್ನು ಈಗ ಸೆರೆಹಿಡಿಯಲಾಗಿದೆ. ಸೆರೆಯಾಗಿರುವ ಆನೆಯೂ ಸಹ ಕುಂದೂರು ಸಾರಗೋಡು ಭಾಗದಲ್ಲಿ ರೈತರಿಗೆ ಉಪಟಳ ನೀಡುತ್ತಿತ್ತು ಎನ್ನಲಾಗಿದೆ.

ಪ್ರಾಣಹಾನಿ ಮಾಡಿದ ಆನೆಯಲ್ಲ: ಸ್ಥಳೀಯರ ಆರೋಪ

ಈಗ ಸೆರೆಯಾಗಿರುವ ಆನೆ ಜನರನ್ನು ಸಾಯಿಸಿರುವ ಆನೆಯಲ್ಲ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಮೊನ್ನೆ ಆಲ್ದೂರು ಸಮೀಪ ಮಹಿಳೆಯನ್ನು ಸಾಯಿಸಿದ್ದ ಆನೆಯ ಬೆನ್ನಿನ ಭಾಗದಲ್ಲಿ ದಪ್ಪದ ಗಂಟು ಇತ್ತು. ಅದರ ದಂತಗಳು ಚಿಕ್ಕದಾಗಿದ್ದವು, ಈಗ ಹಿಡಿದಿರುವ ಆನೆಯ ದಂತಗಳು ತುಂಬಾ ಉದ್ದವಾಗಿವೆ. ಹಾಗಾಗಿ ಈಗ ಹಿಡಿದಿರುವುದು ಮನುಷ್ಯರನ್ನು ಕೊಂದಿರುವ ಒಂಟಿಸಲಗವಲ್ಲ ಎಂದು ಹೇಳುತ್ತಿದ್ದಾರೆ.

ಕಾರ್ಯಾಚರಣೆ ಮುಂದುವರಿಯುತ್ತದೆ ; ಅರಣ್ಯ ಇಲಾಖೆ ಸ್ಪಷ್ಟನೆ

ಒಂಟಿ ಸಲಗವನ್ನು ಸೆರೆ ಹಿಡಿಯಲು ಒಟ್ಟು 9 ಸಾಕಾನೆಗಳು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದವು. ಸತತ ಐದು ದಿನಗಳಿಂದ ಕಾಡಾನೆ ಸೆರೆಗೆ ಪ್ರಯತ್ನ ನಡೆಸಲಾಗುತ್ತಿತ್ತು. ಆದರೆ ಮನುಷ್ಯರನ್ನು ಸಾಯಿಸಿದ್ದ ಒಂಟಿಸಲಗದ ಸುಳಿವು ಸಿಕ್ಕಿಲ್ಲ. ಇದೇ ಸಂದರ್ಭದಲ್ಲಿ ರೈತರ ಕೃಷಿ ಜಮೀನಿಗೆ ದಾಳಿ ಇಡುತ್ತಿದ್ದ ಒಂಟಿಸಲಗವನ್ನು ಸೆರೆ ಹಿಡಿಯಲಾಗಿದೆ.  ಒಂದು ದಿನದ ವಿಶ್ರಾಂತಿ ನಂತರ ಮತ್ತಾವರ ಭಾಗದಲ್ಲಿರುವ ಭುವನೇಶ್ವರಿ ತಂಡದ ಏಳು ಆನೆಗಳನ್ನು ಕಾಡಿಗಟ್ಟುವ ಮತ್ತು ಮನುಷ್ಯರ ಸಾವಿಗೆ ಕಾರಣವಾಗಿರುವ ಒಂಟಿ ಸಲಗವನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿಯುತ್ತದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಒಂಟಿಸಲಗದ ಸುಳಿವು ಸಿಕ್ಕರೆ ಸಾರ್ವಜನಿಕರು ಅರಣ್ಯ ಇಲಾಖೆಗೆ ಮಾಹಿತಿ ನೀಡಬೇಕೆಂದು ಕೋರಿದ್ದಾರೆ.

ಟಾಪ್ ನ್ಯೂಸ್

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

3-gangavathi

Vijayanagara ಕಾಲುವೆಗೆ ಬಿದ್ದು ಮತ್ತೊಬ್ಬ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

Elephant: ಕಾಫಿನಾಡಿನಲ್ಲಿ ಕಾಡಾನೆಗಳ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು

21-

Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ

Mundugaru-pejavara-sri2

Mundugaru:ನಕ್ಸಲ್‌ ಪೀಡಿತ ಪ್ರದೇಶದಲ್ಲಿ ಪೇಜಾವರ ಶ್ರೀಗಳ ಸಂಚಾರ; ಕಾಡಿನಲ್ಲಿ ರಾಮಮಂತ್ರ ಘೋಷ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

1-e4qeewqewq

Manipur ಗಲಭೆಗಳಲ್ಲಿ ‘ಸ್ಟಾರ್‌ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್

7

Sadalwood: ಶ್ರೀಮುರಳಿ ಬರ್ತ್‌ಡೇಗೆ ಎರಡು ಚಿತ್ರ ಘೋಷಣೆ

4-bantwala

ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.