Chakravarti Sulibele ವಿರುದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ
ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ
Team Udayavani, Nov 16, 2023, 8:30 PM IST
ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಧಾರವಾಡದ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಅಕ್ಟೋಬರ್ 3 ರಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ ಮತ್ತು ಅವರು ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಆರೋಪಿಸಿದ್ದರು.
ಹೀಗಾಗಿ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ಅ. 5 ರಂದು ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದರು.
ಸೂಲಿಬೆಲೆ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ನ್ನು ರದ್ದುಪಡಿಸುವಂತೆ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಶಿವಶಂಕರ ಅಮರಣ್ಣನವರ್ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಎಫ್ಐಆರ್ಗೆ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.