Team India; ಆಸೀಸ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಸ್ಟಾರ್
Team Udayavani, Nov 17, 2023, 11:07 AM IST
ಮುಂಬೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಕೂಟದಲ್ಲಿ ಇನ್ನೊಂದೇ ಪಂದ್ಯ ಬಾಕಿಯಿದೆ. ಭಾನುವಾರ ಅಹಮದಾಬಾದ್ ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನಡೆಯಲಿದೆ. ಇದಾದ ಬಳಿಕ ಕೆಲವೇ ದಿನಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ.
ಮುಂದಿನ ವಾರ ಆಸೀಸ್ ವಿರುದ್ಧ ತವರಿನಲ್ಲಿ ಭಾರತ ಐದು ಪಂದ್ಯಗಳ ಟಿ20 ಸರಣಿ ಆಡಲಿದೆ. ಭಾರತದ ಪ್ರಮುಖ ಆಟಗಾರರಿಗೆ ಈ ಸರಣಿಗೆ ವಿಶ್ರಾಂತಿ ಲಭಿಸುವ ಸಾಧ್ಯತೆಯಿದೆ. ಆದರೆ ಇದೀಗ ಪ್ರಮುಖ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರೂ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.
ವಿಶ್ವಕಪ್ ನ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಬಳಿಕ ವಿಶ್ವಕಪ್ ತಂಡದಿಂದ ಹೊರಬಿದ್ದಿದ್ದ ಪಾಂಡ್ಯ ಬದಲು ಪ್ರಸಿಧ್ ಕೃಷ್ಣ ಸ್ಥಾನ ಪಡೆದಿದ್ದರು. ಹಾರ್ದಿಕ್ ಸದ್ಯ ಬೆಂಗಳೂರಿನ ಎನ್ ಸಿಎನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆದರೆ ಅವರಿನ್ನೂ ಪೂರ್ಣ ಗುಣಮುಖರಾಗಿಲ್ಲ. ಅವರಿಗೆ ಶಸ್ತ್ರಚಿಕಿತ್ಸೆ ಮಾಡಬೇಕಾದ ಅಗತ್ಯವೂ ಬರಬಹುದು ಎಂದು ವರದಿ ಹೇಳಿದೆ. ಹೀಗಾಗಿ ಅವರು ಆಸೀಸ್ ವಿರುದ್ಧದ ಟಿ20 ಸರಣಿ ಮತ್ತು ಅದರ ಬಳಿಕದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಲಭ್ಯರಾಗುವ ಸಾಧ್ಯತೆ ಕಡಿಮೆ.
ಸದ್ಯ ವಿಶ್ವಕಪ್ ನಲ್ಲಿ ಆಡುತ್ತಿರುವ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಬುಮ್ರಾ ಮುಂತಾದ ಹಿರಿಯ ಆಟಗಾರರು ಟಿ20 ಸರಣಿಯಲ್ಲಿ ಆಡುವುದು ಅನುಮಾನ. ಹಾರ್ದಿಕ್ ಅನುಪಸ್ಥಿತಿಯಲ್ಲಿ ಕೆಎಲ್ ರಾಹುಲ್ ಅವರು ತಂಡವನ್ನು ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.