Revenue: ಕಂದಾಯ ಇಲಾಖೆ ಅಧಿಕಾರಿಗಳು ಆಧುನಿಕ ಭಸ್ಮಾಸುರರು: ಸಚಿವ ಕೃಷ್ಣ ಭೈರೇಗೌಡ
Team Udayavani, Nov 17, 2023, 11:00 PM IST
ಹಾಸನ: ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಆಧುನಿಕ ಭಸ್ಮಾಸುರರು ಎಂದು ಹೇಳುವ ಮೂಲಕ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಇಲಾಖೆಯ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜರಗಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು ಸಾರ್ವಜನಿಕರ ಹಣದಿಂದ ಸಂಬಳ ಪಡೆದು ಸಕಾಲದಲ್ಲಿ ಕೆಲಸ ಮಾಡಿಕೊಡದೆ ಅವರ ತಲೆ ಮೇಲೆಯೇ ಕೈ ಇಡುವ ಮೂಲಕ 21ನೇ ಶತಮಾನದ ಭಸ್ಮಾಸುರರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಕಂದಾಯ ಇಲಾಖೆಯ ಬಾಕಿ ಕಡತಗಳ ವಿವರ ನೀಡಿದರು.
ಎಲ್ಲ ಇಲಾಖೆಗಳ ಮಾತೃ ಇಲಾಖೆ ಕಂದಾಯ ಇಲಾಖೆ. ಇದು ಜನರ ಮೇಲೆ ನೇರ ಪರಿಣಾಮ ಬೀರುವ ಇಲಾಖೆಯಾಗಿದ್ದು, ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಮೇಲೆ ಹೆಚ್ಚು ಜವಾಬ್ದಾರಿಯಿದೆ. ಸಣ್ಣಪುಟ್ಟ ಸಮಸ್ಯೆಗಳಿಗೆ ಜನರನ್ನು ಕಚೇರಿಗೆ ಅಲೆದಾಡಿಸುವುದರಿಂದ ಸರಕಾರಕ್ಕೂ ಕೆಟ್ಟ ಹೆಸರು ಬರುತ್ತದೆ ಎಂದರು.
ಶಾಸಕರ ಅಧ್ಯಕ್ಷತೆಯಲ್ಲಿ ಬಗರ್‌ಹುಕುಂ ಸಕ್ರಮ ಸಮಿತಿಗಳು ರಚನೆಯಾಗಿವೆ. ನ್ಯಾಯಾಲಯದ ನಿರ್ದೇಶನದಂತೆ 6 ತಿಂಗಳುಗಳಲ್ಲಿ ಅರ್ಜಿಗಳ ವಿಲೇವಾರಿಯಾಗಬೇಕು. ಆದರೆ ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಶೀಘ್ರ ಅರ್ಜಿಗಳ ವಿಲೇವಾರಿ ಆಗಲೇಬೇಕು. ಶಾಸಕರನ್ನು ಕಾಡಿ ಬೇಡಿಯಾದರೂ ತಹಶೀಲ್ದಾರರು ತಿಂಗಳಲ್ಲಿ 2 ಸಭೆಗಳನ್ನು ನಡೆಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು.
-ಕೃಷ್ಣ ಭೈರೇಗೌಡ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.