Mangaluru University: ಹೊಸ ಕುಲಪತಿ ನೇಮಕ ಬಾಕಿ!


Team Udayavani, Nov 18, 2023, 12:36 AM IST

Mangaluru University: ಹೊಸ ಕುಲಪತಿ ನೇಮಕ ಬಾಕಿ!

ಮಂಗಳೂರು: ಈಗಾಗಲೇ ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಬಹುನಿರೀಕ್ಷಿತ “ಕುಲಪತಿ’ ಹುದ್ದೆಯ ನೇಮಕ ಇನ್ನೂ ಅಂತಿಮಗೊಳ್ಳದಿರುವುದು ಕುತೂಹಲಕ್ಕೆ ಕಾರಣ ವಾಗಿದೆ.

ಮೂಲಗಳ ಪ್ರಕಾರ ಕುಲಪತಿ ಆಯ್ಕೆಗೆ ಸಂಬಂಧಿಸಿ ಶೋಧನಾ ಸಮಿತಿಯ ಬಹು ಮಹತ್ವದ ಸಭೆ 2 ತಿಂಗಳ ಹಿಂದೆಯೇ ನಡೆದಿದ್ದು, ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಆದರೂ ಹೊಸ “ವಿಸಿ’ ನೇಮಕ ಸರಕಾರದ ಹಂತದಲ್ಲೇ ಬಾಕಿಯಾಗಿದೆ.

ಮೈಸೂರು ವಿ.ವಿ.ಯ ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಉಪನ್ಯಾಸಕ ಪ್ರೊ| ಮುಜಾಫರ್‌ ಅಸ್ಸಾದಿ, ಮಂಗಳೂರು ವಿ.ವಿ.ಯ ಮಾಜಿ ಕುಲಸಚಿವ (ಪರೀಕ್ಷಾಂಗ)ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ| ಪಿ.ಎಲ್‌. ಧರ್ಮ ಹಾಗೂ ಮಂಗಳೂರು ವಿ.ವಿ.ಯ ಮಾಜಿ ಕುಲಸಚಿವ (ಆಡಳಿತ), ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಸಹಿತ ಕೆಲವರ ಹೆಸರು ಕುಲಪತಿ ಹುದ್ದೆಗೆ ಬಲವಾಗಿ ಕೇಳಿಬಂದಿತ್ತು. ಸರಕಾರದ ಹಂತದಲ್ಲಿ ಈ ಬಗ್ಗೆ ಚರ್ಚೆ ಕೂಡ ನಡೆದಿತ್ತು. ಯಾವ ಕಾರಣಕ್ಕಾಗಿ ನೇಮಕ ವಿಳಂಬವಾಗುತ್ತಿದೆ ಎಂಬುದಕ್ಕೆ ಯಾರಲ್ಲೂ ಉತ್ತರವಿಲ್ಲ. ಸರಕಾರವು “ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯ ಕಾಯ್ದೆ’ ಜಾರಿಗೊಳಿಸುವ ತರಾತುರಿಯಲ್ಲಿದ್ದು ಅದು ಪೂರ್ಣವಾದ ಬಳಿಕ ವಿಸಿ ನೇಮಕ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕುಲಪತಿ ಹುದ್ದೆಗೆ 108 ಅರ್ಜಿಗಳು ಸಲ್ಲಿಕೆಯಾಗಿದ್ದು ಅವುಗಳನ್ನು ಪರಿಶೀಲಿಸಿದ ಶೋಧನಾ ಸಮಿತಿಯು ಪ್ರಾರಂಭಿಕವಾಗಿ 40, ಬಳಿಕ 10 ಹೆಸರುಗಳನ್ನು ಪಟ್ಟಿ ಮಾಡಿಕೊಂಡಿತ್ತು. ಮಂಗಳವಾರ ನಡೆದ ಮಹತ್ವದ ಸಭೆಯಲ್ಲಿ 3 ಹೆಸರುಗಳನ್ನು ಅಂತಿಮಗೊಳಿಸಿ ಮೊಹರು ಮಾಡಿದ ಲಕೋಟೆಯಲ್ಲಿ ಸರಕಾರಕ್ಕೆ ಸಲ್ಲಿಸಿತ್ತು.

ಜೂನ್‌ನಿಂದ ಹುದ್ದೆ ಖಾಲಿ
4 ವರ್ಷಗಳಿಂದ ಮಂಗಳೂರು ವಿ.ವಿ. ಕುಲಪತಿಯಾಗಿದ್ದ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಜೂ. 2ರಂದು ಸೇವಾ ನಿವೃತ್ತಿ ಹೊಂದಿದ್ದಾರೆ. ಅಂದಿನಿಂದ ಪ್ರಭಾರ ಕುಲಪತಿಯಾಗಿ ಮಂಗಳೂರು ವಿ.ವಿ. ರಾಜ್ಯಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಕಲಾ ನಿಕಾಯದ ಡೀನ್‌ ಪ್ರೊ| ಜಯರಾಜ್‌ ಅಮೀನ್‌ ಅಧಿಕಾರದಲ್ಲಿದ್ದಾರೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.