National Naturopathy Day; ಔಷಧ ರಹಿತ ಪ್ರಕೃತಿ ಚಿಕಿತ್ಸೆಯಿಂದ ರೋಗಮುಕ್ತ ಜೀವನ


Team Udayavani, Nov 18, 2023, 5:37 AM IST

1-sdsdsa

ಇಂದು ಜನರು ರೋಗಮುಕ್ತರಾಗಲು ಅಲೋಪಥಿ, ಆಯುರ್ವೇದ, ಹೋಮಿ ಯೋಪಥಿ, ಸಿದ್ಧ, ಯುನಾನಿ ಹೀಗೆ ಹಲ ವಾರು ವೈದ್ಯಕೀಯ ಮತ್ತು ಚಿಕಿತ್ಸಾ ಪದ್ಧತಿ ಗಳನ್ನು ಅನುಸರಿಸುತ್ತಿ¨ªಾರೆ. ಇವುಗಳಲ್ಲಿ ಪ್ರಕೃತಿ ಚಿಕಿತ್ಸೆ ಅಥವಾ ನ್ಯಾಚುರೋಪಥಿ ಕೂಡ ಒಂದು.

ಮಾನವನು ತನ್ನ ಜೀವನದ ಭೌತಿಕ, ಮಾನ ಸಿಕ, ನೈತಿಕ ಮತ್ತು ಆಧ್ಯಾತ್ಮಿಕ ಆಯಾಮಗಳಲ್ಲಿ ನಿಸರ್ಗದ ರಚನಾತ್ಮಕ ನಿಯಮಗಳೊಂದಿಗೆ ಸಾಮರಸ್ಯವನ್ನು ಇರಿಸಿಕೊಂಡು ಚಿಕಿತ್ಸೆ ನೀ ಡುವ ಪದ್ಧತಿಯೇ ಪ್ರಕೃತಿ ಚಿಕಿತ್ಸೆ. ಇದು ಆರೋ ಗ್ಯಕರ ಜೀವನಶೈಲಿಯ ಬಗ್ಗೆ ಶಿಕ್ಷಣ ನೀಡುವ ಮಾರ್ಗವಾಗಿದೆ. ಆರೋಗ್ಯಕರ ಆಹಾರ, ಶುದ್ಧ ನೀರು, ವ್ಯಾಯಾಮ, ಉಪವಾಸ, ಸೂರ್ಯನ ಬೆಳಕು ಮತ್ತು ಒತ್ತಡ ನಿರ್ವಹಣೆ ಪ್ರಕೃತಿ ಚಿಕಿತ್ಸೆಯ ಮೂಲ ಆಧಾರ ಸ್ತಂಭಗಳಾಗಿವೆ. ನಿಸರ್ಗವೇ ಶ್ರೇಷ್ಠ ಚಿಕಿತ್ಸಕ ಎಂಬ ಅಂಶವೇ ಪ್ರಕೃತಿ ಚಿಕಿತ್ಸೆಯಲ್ಲಿ ಪ್ರಧಾನವಾಗಿದೆ. ಈ ಚಿಕಿತ್ಸಾ ಪದ್ಧತಿಯಲ್ಲಿ ಆಹಾರವೇ ಔಷಧವಾಗಿದ್ದು, ಹೊರಗಿನ ಯಾವುದೇ ಔಷಧಗಳನ್ನು ಬಳಸುವುದಿಲ್ಲ.

ಇದೊಂದು ನೈಸರ್ಗಿಕ ಚಿಕಿತ್ಸಾ ವ್ಯವಸ್ಥೆಯಾಗಿದ್ದು ಇದರಲ್ಲಿ ಯಾವುದೇ ರಸಾಯನಿಕಜನ್ಯ ಔಷಧಗಳನ್ನು ಬಳಸಲಾಗುವುದಿಲ್ಲ. ಬದಲಾಗಿ ಈ ವಿಶಿಷ್ಟ ಚಿಕಿತ್ಸಾ ವಿಧಾನವು ದೇಹವನ್ನು ಒಳಗಿನಿಂದ ಬಲಪಡಿಸುವುದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದು, ಅಗತ್ಯವಿದ್ದರೆ ಜೀವನಶೈಲಿಯಲ್ಲಿ ಬದಲಾವಣೆಗಳನ್ನು ಅಳವಡಿಸಿ ಕೊಳ್ಳುವುದು ಮತ್ತು ಆ ಮೂಲಕ ನಮ್ಮ ದೇಹವು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಸಾಧ್ಯವಾಗುವ ಉತ್ತಮ, ಸುರಕ್ಷಿತ ಮತ್ತು ನೈಸರ್ಗಿಕ ಮಾರ್ಗವಾಗಿದೆ. “ಪ್ರಕೃತಿಯು ನಮ್ಮನ್ನು ಗುಣಪಡಿಸುತ್ತದೆ, ಔಷಧ ಗಳಲ್ಲ’ ಎಂಬುದು ಪ್ರಕೃತಿ ಚಿಕಿತ್ಸೆಯ ಮೂಲತಣ್ತೀವಾಗಿದೆ. ಅನಾ ರೋಗ್ಯದ ಸಂದರ್ಭದಲ್ಲಿ ದೇಹಕ್ಕೆ ಅವಕಾಶವನ್ನು ಒದಗಿಸಿ, ಸಂಪೂ ರ್ಣ ವಿಶ್ರಾಂತಿ ದೊರಕಿಸಿದಲ್ಲಿ ತಾನಾಗಿಯೇ ಅದು ಗುಣ ಮುಖವಾಗುತ್ತದೆ.

ಪ್ರಕೃತಿ ಚಿಕಿತ್ಸೆಯಲ್ಲಿ ಪಂಚಮಹಾಭೂತಗಳಾದ ಪೃಥ್ವಿ, ಜಲ, ವಾಯು, ಆಕಾಶ ಮತ್ತು ಸೂರ್ಯನನ್ನು ಆಧರಿಸಿ ವಿವಿಧ ಬಗೆಯ ಚಿಕಿತ್ಸೆಗಳಿವೆ. ಯಾವುದೇ ಆರೋಗ್ಯ ಸಮಸ್ಯೆಗಳಿಗೂ ಪಂಚಮಹಾಭೂತ ಆಧಾರಿತ ಚಿಕಿತ್ಸೆಗಳಾದ ಮಣ್ಣಿನ ಸ್ನಾನ, ಜಲ ಚಿಕಿತ್ಸೆಗಳಾದ ಕಟಿ ಸ್ನಾನ, ಅಂಡರ್‌ ವಾಟರ್‌ ಮಸಾಜ್‌, ಇಮ್ಮರ್ಶನ್‌ ಟಬ್‌ ಬಾತ್‌, ಸ್ಪೈನಲ್‌ ಟಬ್‌ ಬಾತ್‌ (ಬೆನ್ನುಹುರಿ ಸ್ನಾನ), ಸರ್ಕಿಲಾರ್‌ ಜೆಟ್‌ ಬಾತ್‌, ಡೂಶ್‌, ಸ್ಪೈನಲ್‌ ಸ್ಪ್ರೆà, ವರ್ಲ್ ಪೂಲ್‌ ಬಾತ್‌ (ಸ್ವಿಮಿಂಗ್‌), ಆರ್ಮ್ ಆ್ಯಂಡ್‌ ಫ‌ುಟ್‌ ಬಾತ್‌, ಸೂರ್ಯ ಸ್ನಾನ, ಉಪವಾಸ ಮೊದಲಾದ ಚಿಕಿತ್ಸೆಗಳನ್ನು ನೀಡಲಾಗುತ್ತದೆ.

ಪ್ರಕೃತಿ ಚಿಕಿತ್ಸೆಯ ಸಿದ್ಧಾಂತದ ಪ್ರಕಾರ ಕಾಯಿಲೆಯ ಮೂಲ ­ ಕ್ರಿಮಿಗಳಲ್ಲ; ಕ್ರಿಮಿಗಳನ್ನು ಬೆಳೆಸುವಂತಹ ಕಶ್ಮಲಗಳು ದೇಹದಲ್ಲಿ ಸಂಗ್ರಹಣೆಗೊಂಡಾಗ ದೇಹದ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ದೇಹಕ್ಕೆ ಪ್ರವೇಶಿಸಿದ ಕ್ರಿಮಿಗಳ ಸಂಖ್ಯೆ ಯಥೇ ತ್ಛವಾಗಿ ಬೆಳೆದು ಕಾಯಿಲೆಗೆ ಕಾರಣವಾಗುತ್ತವೆ. ಆದ್ದರಿಂದ ಪ್ರಾಕೃತಿಕ ಮತ್ತು ಸಂಪ್ರದಾಯಬದ್ಧ ಜೀವನ ಶೈಲಿಯನ್ನು ಅಳವಡಿಸಿಕೊಂಡು ದೇಹ ದಲ್ಲಿನ ಕಶ್ಮಲಗಳನ್ನು ವಿಸರ್ಜನಾಂಗಗಳ ಮೂಲಕ ಹೊರಹಾಕಿ ಶುಭ್ರಪಡಿಸಿಕೊಂಡು ರೋಗನಿರೋಧಕ ಶಕ್ತಿಯನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದರಿಂದ ಎಲ್ಲ ವೈರಾಣುಗಳು, ಬ್ಯಾಕ್ಟೀರಿಯಾ ಇತರ ರೋಗಕಾರಕ ಕ್ರಿಮಿಗಳಿಂದ ದೂರವಿರಲು ಸಾಧ್ಯವಾಗುತ್ತದೆ. ಅಷ್ಟೇ ಅಲ್ಲ, ಈ ವೈರಾಣು, ಬ್ಯಾಕ್ಟೀರಿಯಾ, ಕ್ರಿಮಿಗಳು ದೇಹವನ್ನು ಪ್ರವೇಶಿಸಿದರೂ ದೇಹಾರೋಗ್ಯ ಸರಿ ಯಾಗಿರುತ್ತದೆ. ಹಾಗೆಯೇ ಆಧುನಿಕ ಜೀವನಶೈಲಿ, ತಪ್ಪಾದ ಆಹಾರ ಕ್ರಮಗಳು, ಮಾನಸಿಕ ಒತ್ತಡ ಇತ್ಯಾದಿ ಅನೇಕ ಕಾರಣಗಳು ರೋಗ ರುಜಿನಗಳಿಗೆ ಕಾರಣ.

ಉಪವಾಸ, ಪ್ರಕೃತಿ ಚಿಕಿತ್ಸೆಯಲ್ಲಿ ಪ್ರಮುಖವಾದ ಅಂಶ. ಉಪ ವಾಸವೆಂದರೆ ದಿನದಲ್ಲಿ ಸ್ವಲ್ಪ ಸಮಯ ಅಥವಾ ಸಂಪೂರ್ಣವಾಗಿ ಎಲ್ಲ ರೀತಿಯ ಆಹಾರ ಸೇವಿಸುವುದರಿಂದ ದೂರವಿರುವುದು. ಸಂಪೂರ್ಣ ಉಪವಾಸ ಸಾಧ್ಯವಾಗದಿದ್ದರೆ ನೀರು, ಕನಿಷ್ಠ ತಾಜಾ ಹಣ್ಣಿನ ರಸ ಅಥವಾ ಹಸಿ ತರಕಾರಿ ಸೇವನೆಯೊಂದಿಗೂ ಉಪವಾಸ ಮಾಡ ಬಹುದು. ಉಪವಾಸ ಮಾಡುವಾಗ, ದೇಹವು ತನ್ನಲ್ಲಿ ಸಂಗ್ರಹ ವಾಗಿರುವ ಅಗಾಧ ಪ್ರಮಾಣದ ತ್ಯಾಜ್ಯವನ್ನು ದಹಿಸಿ ವಿಸರ್ಜಿಸುತ್ತದೆ. ಉಪವಾಸದ ಅವಧಿಯಲ್ಲಿ ರೋಗಿಯು ಎಷ್ಟು ಸಾಧ್ಯವೋ ಅಷ್ಟು ದೈಹಿಕ ವಿಶ್ರಾಂತಿ ಮತ್ತು ಮಾನಸಿಕ ನೆಮ್ಮದಿಯನ್ನು ಹೊಂದುವುದು ಅತೀ ಮುಖ್ಯ.ಇದರಿಂದ ವ್ಯಕ್ತಿಯು ದೈಹಿಕವಾಗಿ, ಮಾನಸಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಕಾರಿ.
ಇಂದು ಪ್ರಕೃತಿ ಚಿಕಿತ್ಸೆಯನ್ನು ಜಾಗತಿಕ ವೈಜ್ಞಾನಿಕ ಮತ್ತು ವೈದ್ಯಕೀಯ ಸಮುದಾಯವು ಅಂಗೀಕರಿಸಿದೆ. ಸಮಾಜವು ಇಂದು ಆರೋಗ್ಯವನ್ನು ಕಾಪಾಡಿಕೊಳ್ಳಲು ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರದ ವಿಧಾನವನ್ನು ಬಳಸುತ್ತದೆ. ಹಾಗಾಗಿ ಪ್ರತೀ ವರ್ಷ ಹೆಚ್ಚಿನ ಸಂಖ್ಯೆಯ ರೋಗಿಗಳು ಪ್ರಕೃತಿ ಚಿಕಿತ್ಸೆಯತ್ತ ಮುಖ ಮಾಡುತ್ತಿ¨ªಾರೆ ಮತ್ತು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿ¨ªಾರೆ.

ಡಾ| ಹರ್ಷಿಣಿ,ಉಜಿರೆ

ಟಾಪ್ ನ್ಯೂಸ್

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.