Bangalore: ಮಹಿಳೆ ಸಾವು: ವೈದ್ಯರ ವಿರುದ್ಧ ಪೋಷಕರ ಕಿಡಿ
Team Udayavani, Nov 18, 2023, 10:59 AM IST
ಬೆಂಗಳೂರು: ಹೊಟ್ಟೆ ನೋವಿನಿಂದ ಅಂಬೇಡ್ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ನಾಜ್ನಿ (34) ಮೃತ ಮಹಿಳೆ. ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಮೃತಪಟ್ಟಿರುವುದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಆಸ್ಪತ್ರೆ ಮುಂದೆ ಮಹಿಳೆಯ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ನಾಜ್ನಿ ಮೂರು ದಿನಗಳ ಹಿಂದೆ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನವಾದರೂ ವೈದ್ಯು ಸೂಕ್ತ ಚಿಕಿತ್ಸೆ ನೀಡಿರಲಿಲ್ಲ. 3ನೇ ದಿನ ಹೊಟ್ಟೆಯಲ್ಲಿ ಗಡ್ಡೆ ಆಗಿದೆ, ಕೂಡಲೇ ಆಪರೇಷನ್ ಮಾಡಬೇಕೆಂದು ತಿಳಿಸಿದ್ದರು. ಗುರುವಾರ ಸಂಜೆಯವರೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು.
ನಂತರ ನರದ ಸಮಸ್ಯೆ ಇದೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ. ಆಂಬುಲೆನ್ಸ್ನಲ್ಲಿ ಬೇರೆ ಆಸ್ಪತ್ರೆಗೆ ತೆರಳುವ ವೇಳೆ ಮಹಿಳೆ ಮೃತಪಟ್ಟಿದ್ದಾಳೆ. ಮಹಿಳೆ ಮೊದಲೇ ಮೃತಪಟ್ಟಿದ್ದರೂ ವೈದ್ಯರು ತಮ್ಮ ಮೇಲೆ ಆರೋಪ ಬಾರದಂತೆ ವೆಂಟಿಲೇಟರ್ ಹಾಕಿ ಆಸ್ಪತ್ರೆಯಿಂದ ಕಳುಹಿಸಿದ್ದಾರೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atul Subhash Case: ಪತ್ನಿ ಮೇಲಿನ ಕೇಸ್ ರದ್ದತಿಗೆ ನಿರಾಕರಣೆ
Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್ಐ ಸಸ್ಪೆಂಡ್
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.