U.P: ಉ.ಪ್ರ.ದಲ್ಲಿ ಹಲಾಲ್ ಪ್ರಮಾಣೀಕೃತ ವಸ್ತುಗಳ ಮಾರಾಟ ನಿಷೇಧ?
ಲಕ್ನೋ ನಿವಾಸಿಯಿಂದ 4 ಸಂಸ್ಥೆಗಳ ವಿರುದ್ಧ ದೂರು
Team Udayavani, Nov 18, 2023, 8:42 PM IST
ಲಕ್ನೋ: ಹಲಾಲ್ ಪ್ರಮಾಣೀಕೃತ ಉತ್ಪನ್ನಗಳ ನಿಷೇಧಕ್ಕೆ ಉತ್ತರ ಪ್ರದೇಶ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಲ್ಕು ಸಂಸ್ಥೆಗಳ ವಿರುದ್ಧ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಸಾಧ್ಯತೆ ಅಧಿಕವಾಗಿದೆ. ಲಕ್ನೋ ನಗರದ ಠಾಣಾ ವ್ಯಾಪ್ತಿಯಲ್ಲಿ ಸ್ಥಳೀಯರೊಬ್ಬರು ದೂರು ನೀಡಿದ್ದಾರೆ. ದೂರಿನ ಪ್ರಕಾರ ಚೆನ್ನೈನ ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ನವದೆಹಲಿಯ ಜಮೀಯತ್ ಉಲೇಮಾ ಹಿಂದ್ ಹಲಾಲ್ ಟ್ರಸ್ಟ್, ಮುಂಬೈನ ಹಲಾಲ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ಜಮೀಯತ್ ಉಲೇಮಾ ಎಂಬ ಸಂಸ್ಥೆಗಳು ಚಿಲ್ಲರೆ ಮಾರುಕಟ್ಟೆಯಲ್ಲಿ ಮಾರಾಟವಾಗುವ ವಸ್ತುಗಳ ಮೇಲೆ ಹಲಾಲ್ ಪ್ರಮಾಣ ಪತ್ರ ನೀಡುತ್ತವೆ. ಇದಲ್ಲದೆ, ಇನ್ನೂ ಹಲವು ಸಂಸ್ಥೆಗಳು ಇಂಥ ವ್ಯವಸ್ಥೆ ಅನುಸರಿಸುತ್ತಿವೆ. ಇದು ಸಾರ್ವಜನಿಕರ ನಂಬಿಕೆಯನ್ನು ಪ್ರಶ್ನಿಸುವಂತಿದೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜ್ಯ ಸರ್ಕಾರದ ವಕ್ತಾರರು “ಹಲಾಲ್ ಉತ್ಪನ್ನಗಳ ಮೇಲೆ ರಾಜ್ಯವ್ಯಾಪಿ ನಿಷೇಧ ಹೇರುವ ಸಾಧ್ಯತೆ ಅಧಿಕವಾಗಿದೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.