Congress: ಸರಕಾರ ಬೀಳಿಸುವ ಅಶೋಕ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ
ಜನರು ಕೊಟ್ಟ ಅಧಿಕಾರ ಕಿತ್ತುಕೊಳ್ಳಲು ಇವರ್ಯಾರು ಎಂದು ಪ್ರಶ್ನೆ
Team Udayavani, Nov 18, 2023, 10:49 PM IST
ಬೆಂಗಳೂರು: ಸರಕಾರವನ್ನು ಬೀಳಿಸಲೂ ಹಿಂದುಮುಂದು ನೋಡುವುದಿಲ್ಲ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಕಾಂಗ್ರೆಸ್ ಸಚಿವರು ಕಿಡಿಕಾರಿದ್ದು, 135 ಸ್ಥಾನಗಳ ಮೂಲಕ ಜನರು ಕೊಟ್ಟ ಅಧಿಕಾರವನ್ನು ಕಿತ್ತುಕೊಳ್ಳಲು ಇವರ್ಯಾರು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಪಕ್ಷ ನಾಯಕ ಅಶೋಕ ವಿರುದ್ಧ ಹರಿಹಾಯ್ದಿದ್ದಾರೆ.
ವಿಪಕ್ಷ ನಾಯಕರಾಗಿ ಆರ್.ಅಶೋಕ ಅವರಿಗೆ ದೊಡ್ಡ ಜವಾಬ್ದಾರಿ ಇದೆ. ಸರಕಾರಕ್ಕೆ ಸಲಹೆ ಕೊಟ್ಟು ಎಚ್ಚರಿಸಲಿ. ಸರಕಾರದ ತಪ್ಪುಗಳನ್ನು ಎತ್ತಿ ತೋರಿಸುವುದು ಸಹಜ. ಆದರೆ ಅವರು ಸರಕಾರವನ್ನು ಬೀಳಿಸುವ ಮಾತನಾಡಿದ್ದಾರೆ. ಜನ ಕೊಟ್ಟಿರುವ ಅಧಿಕಾರವನ್ನು ಕಸಿದುಕೊಳ್ಳಲು ಇವರ್ಯಾರು ಎಂದು ಸಚಿವ ಪರಮೇಶ್ವರ್ ಪ್ರಶ್ನಿಸಿದರು.
6 ತಿಂಗಳ ಬಳಿಕವಾದರೂ ರಾಜ್ಯಾಧ್ಯಕ್ಷರು, ವಿಪಕ್ಷದ ನಾಯಕನನ್ನು ಆಯ್ಕೆ ಮಾಡುವ ಮೂಲಕ ಪ್ರಜಾಪ್ರಭುತ್ವ ಹಾಗೂ ಕರ್ನಾಟಕದ ಜನರಿಗೆ ಸ್ವಲ್ಪವಾದರೂ ಗೌರವ ತಂದಿ
ದ್ದಾರೆ. ನಮ್ಮ ಸರಕಾರವನ್ನು ಕಿತ್ತೆಸೆಯುವ ಮಾತು ಬದಿಗಿರಲಿ. ಮೊದಲು ಅವರನ್ನು ಜೋಡಿಸಿಕೊಳ್ಳಲಿ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದರು.
ಗೋ ಬ್ಯಾಕ್ ಅಶೋಕ ಪೋಸ್ಟರ್ ಬಂದರೂ ಅಚ್ಚರಿಯಿಲ್ಲ: ಖರ್ಗೆ
ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆಯಿಂದ ಬಿಜೆಪಿ ವರ್ಸಸ್ ಬಿಜೆಪಿಯ 2ನೇ ಚಾಪ್ಟರ್ ಆರಂಭವಾಗಿದೆ. ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಅಶೋಕ ಅವರನ್ನು ಮಂಡ್ಯ ಉಸ್ತುವಾರಿಯನ್ನಾಗಿ ನೇಮಿಸಿದಾಗಲೂ ಅವರ ಪಕ್ಷದವರೇ ಗೋ ಬ್ಯಾಕ್ ಅಶೋಕ ಎಂಬ ಪೋಸ್ಟರ್ ಅಂಟಿಸಿದ್ದರು. ಬಿಜೆಪಿ ಕಚೇರಿಯಲ್ಲೂ ಗೋ ಬ್ಯಾಕ್ ಪೋಸ್ಟರ್ ಬಂದರೆ ಅಚ್ಚರಿಯಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
England vs Newzeland Test: ನ್ಯೂಜಿಲ್ಯಾಂಡ್ ಹಿಡಿತದಲ್ಲಿ ಹ್ಯಾಮಿಲ್ಟನ್ ಟೆಸ್ಟ್
Womens T20 Cricket: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಗೆಲುವು
Ali Trophy: ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ
Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ
Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.