Canada: ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳಿಗೆ ಉಚಿತ ಪಡಿತರ ಬಂದ್
ಮಳಿಗೆಗಳಲ್ಲಿ ಪ್ರವೇಶ ನಿಷೇಧಿಸಿ ಫಲಕ ಅಳವಡಿಕೆ
Team Udayavani, Nov 19, 2023, 11:03 PM IST
ಒಂಟಾರಿಯೋ: ಕೆನಡಾದ ವಿವಿಗಳಲ್ಲಿ ಅಧ್ಯಯನ ನಡೆಸುತ್ತಿರುವ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಡಿತರ ನೀಡುವ ವ್ಯವಸ್ಥೆ ತಡೆ ಹಿಡಿಯಲಾಗಿದೆ. ಅಂಥ ವ್ಯವಸ್ಥೆಯನ್ನು ಒದಗಿಸುವ ಕೆಲವೊಂದು ಮಳಿಗೆಗಳ ಮುಂದೆ “ಡು ನಾಟ್ ಎಂಟರ್ ಫುಡ್ ಬ್ಯಾಂಕ್’, “ನೋ ಇಂಟರ್‌ನ್ಯಾಷನಲ್ ಸ್ಟೂಡೆಂಟ್ಸ್’ ಎಂಬ ಫಲಕಗಳನ್ನು ಹಾಕಲಾಗಿದೆ.
ಭಾರತ ಸೇರಿದಂತೆ ಹಲವಾರು ದೇಶಗಳಿಂದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಕೆನಡಾದ ವಿವಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಧ್ಯಯನ ನಡೆಸುತ್ತಿದ್ದಾರೆ. ಅವರಿಗೆ ಅಲ್ಲಿನ ಅಂಗಡಿಗಳಿಂದ ಆಹಾರ ವಸ್ತುಗಳನ್ನು ಖರೀದಿಸುವುದು ದುಬಾರಿಯಾಗುತ್ತದೆ. ಹೀಗಾಗಿ, ಕೆಲವೊಂದು ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಉಚಿತವಾಗಿ ಆಹಾರ ವಸ್ತುಗಳನ್ನು ಪೂರೈಸುತ್ತಿವೆ. ಕೆನಡಾದ ಬ್ರಾಂಪ್ಟನ್, ಒಂಟಾರಿಯೋಗಳಲ್ಲಿ ಹೆಚ್ಚಿನ ಪ್ರಮಾಣದ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳಿದ್ದಾರೆ.
ಭಾರತ ಮತ್ತು ಕೆನಡಾ ನಡುವೆ ಖಲಿಸ್ತಾನ ಉಗ್ರ ಹರ್‌ದೀಪ್ ಸಿಂಗ್ ನಿಜ್ಜರ್ ಸಾವಿನ ಬಳಿಕ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಅದರ ನಡುವೆಯೇ ಈ ಹೊಸ ಬೆಳವಣಿಗೆ ನಡೆದಿದೆ. ಇದರ ಜತೆಗೆ ಕೆನಡಾದಲ್ಲಿ ಹಣದುಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯರೂ ಈ ವ್ಯವಸ್ಥೆಯನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.