World Cup; ಆಸ್ಟ್ರೇಲಿಯ ನಾಯಕನಿಗೆ ಟ್ರೋಫಿ ನೀಡಿದ ಪ್ರಧಾನಿ ಮೋದಿ
Team Udayavani, Nov 19, 2023, 11:17 PM IST
ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಗೆದ್ದ ನಂತರ ಆಸ್ಟ್ರೇಲಿಯ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರಿಗೆ ವಿಜೇತ ಟ್ರೋಫಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯ ಉಪಪ್ರಧಾನಿ ರಿಚರ್ಡ್ ಮಾರ್ಲ್ಸ್ ಅವರೊಂದಿಗೆ ನೀಡಿದರು.
ಇದನ್ನೂ ಓದಿ: World Cup; ಅಮೋಘ ವಿಜಯಕ್ಕಾಗಿ ಆಸ್ಟ್ರೇಲಿಯಕ್ಕೆ ಅಭಿನಂದನೆಗಳು: ಪ್ರಧಾನಿ ಮೋದಿ
ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆದ್ದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಪಂದ್ಯವನ್ನು ವೀಕ್ಷಿಸಿದರು.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಭಾರತೀಯ ಆಟಗಾರರಿಗೆ ಆಯಾ ರನ್ನರ್ಸ್-ಅಪ್ ಪದಕಗಳನ್ನು ನೀಡಿ ಗೌರವಿಸಿದರು.
ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಸರಣಿ ಶ್ರೇಷ್ಠ ಪದಕವನ್ನು ಪಡೆಯುವ ವಿರಾಟ್ ಕೊಹ್ಲಿ ಅವರಿಗೆ ನೀಡಿದರು. ಕೊಹ್ಲಿ ಅವರಲ್ಲಿ ಯಾವ ಸಂಭ್ರಾಮವೂ ಕಾಣದಲ್ಲಿ ಗಾಢವಾದ ನೋವು ಅವರನ್ನು ಆವರಿಸಿಕೊಂಡಿದ್ದುದು ಎದ್ದು ಕಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.