Kerala ಮುನ್ನಡೆಯುತ್ತಿದೆ: ಸಿಎಂ ಪಿಣರಾಯಿ ವಿಜಯನ್
Team Udayavani, Nov 20, 2023, 12:20 AM IST
ಕಾಸರಗೋಡು: ರಾಜ್ಯಕ್ಕೆ ಅರ್ಹವಾಗಿ ಸಲ್ಲಬೇಕಾದ ಆರ್ಥಿಕ ಸವಲತ್ತುಗಳನ್ನು ಕೇಂದ್ರ ಸರಕಾರ ನೀಡದ ಕಾರಣ ಕೇರಳವನ್ನು ಉಸಿರುಕಟ್ಟುವಂತೆ ಮಾಡುತ್ತಿದೆ. ಇದರ ವಿರುದ್ಧ ಕೇರಳೀಯರು ಒಗ್ಗೂಡಿ ಹೋರಾಡುವುದಾಗಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದರು.
ಅವರು ಕಾಸರಗೋಡು ನಾಯಮ್ಮಾರಮೂಲೆಯ ಚೆಂಗಳ ಪಂಚಾಯತ್ ಸ್ಟೇಡಿಯಂನಲ್ಲಿ ನಡೆದ ಕಾಸರಗೋಡು ವಿಧಾನಸಭಾ ಕ್ಷೇತ್ರ ನವ ಕೇರಳ ಸದಸ್(ಸಭೆ)ಯನ್ನು ಉದ್ಘಾಟಿಸಿ ಮಾತನಾಡಿದರು.
ಆರ್ಥಿಕವಾಗಿ ಬಿಕ್ಕಟ್ಟಿನಲ್ಲಿದ್ದರೂ ಕೇರಳ ಮಿತಿಗಳನ್ನು ಮೀರಿ ಮುನ್ನಡೆಯುತ್ತಿದೆ. ಕೇರಳಕ್ಕೆ ವಿವಿಧ ಕ್ಷೇತ್ರಗಳಲ್ಲಿ 57,000 ಕೋಟಿ ರೂ. ಗೂ ಅಧಿಕ ಹಣವನ್ನು ಕಡಿತಗೊಳಿಸಲಾಗಿದೆ. ಇದು ರಾಜ್ಯಕ್ಕೆ ಬರಬೇಕಾದ ಮೊತ್ತವಾಗಿತ್ತು. ಈ ಆರ್ಥಿಕ ಬಿಕ್ಕಟ್ಟು ಕೆಲವು ತೊಂದರೆಗಳನ್ನು ಉಂಟುಮಾಡುತ್ತಿದೆ. ಆದರೆ ರಾಜ್ಯವು ಅದೆಲ್ಲವನ್ನೂ ಮೀರಿ ಮುನ್ನಡೆಯುತ್ತಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತಿದೆ ಎಂದರು.
ಕಳೆದ ಏಳು ವರ್ಷಗಳಲ್ಲಿ ರಾಜ್ಯದ ತಲಾ ಆದಾಯ 1,48,000 ಕೋಟಿ ರೂ.ಗಿಂತ 2,28,000 ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Saira Banu: ಎ.ಆರ್.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ
Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ
Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್ ಇದ್ರು ಸಿಕ್ಕಿದ್ದು ಕೇವಲ 155 ಮತ!!
UV Fusion: ನಿಸ್ವಾರ್ಥ ಜೀವ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.