Teachers ಕೊರತೆ ನೀಗಿಸಿದಲ್ಲಿ ಮಕ್ಕಳ ಭವಿಷ್ಯ ಸುಭದ್ರ: ಡಾ| ಹೆಗ್ಗಡೆ
ಬೆಂಗಳೂರು, ಮೈಸೂರು ವಿಭಾಗ ಮಟ್ಟದ ಚಿಂತನ ಮಂಥನ
Team Udayavani, Nov 20, 2023, 12:36 AM IST
ಬೆಳ್ತಂಗಡಿ: ಅನುದಾನಿತ ಶಾಲೆಗಳ ಕಟ್ಟಡ, ಮೂಲಸೌಕರ್ಯ ಕೊರತೆ ತುಂಬಿಕೊಡಲು ಸಂಬಂಧಪಟ್ಟ ಸಂಸ್ಥೆಗಳು ಸಿದ್ಧವಿದೆ. ಆದರೆ ಸರಕಾರವೂ ಗಮನಹರಿಸಿ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷರ ನೇಮಕಕ್ಕೆ ಮುಂದಾಗಬೇಕಿದೆ. ಶಿಕ್ಷಕರಿಗೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸುವ ಮೂಲಕ ಮಕ್ಕಳ ಭವಿಷ್ಯ ಸುಭದ್ರಗೊಳಿಸುವ ಹೊಣೆಗಾರಿಕೆಯನ್ನು ಮನಗಾಣಬೇಕಿದೆ ಎಂದು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಇಲ್ಲಿನ ಅಮೃತವರ್ಷಿಣಿ ಸಭಾಭವನ ದಲ್ಲಿ ನ. 19ರಂದು ರಾಜ್ಯ ಅನು ದಾನಿತ ಪ್ರಾಥಮಿಕ ಶಾಲಾಶಿಕ್ಷಕರ ಸಂಘದ ದ.ಕ.ಜಿಲ್ಲಾ ಸಮಿತಿವತಿಯಿಂದ ಹಮ್ಮಿಕೊಂಡ ಬೆಂಗಳೂರುಮತ್ತು ಮೈಸೂರು ವಿಭಾಗ ಮಟ್ಟದ
ಚಿಂತನ-ಮಂಥನ, ನಿವೃತ್ತ ಪದಾಧಿಕಾರಿ ಗಳ ಸಮ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರಿ ಶಾಲೆಗಳು ಮುಚ್ಚುತ್ತ ಬಂದರೆ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಈ ನೆಲೆಯಲ್ಲಿ ಮಠ, ಮಂದಿರ, ಚರ್ಚ್, ಮಸೀದಿಗಳು ನಡೆಸುತ್ತಿರುವ ಅನುದಾನಿತ ಶಾಲೆಗಳು ಕಟ್ಟಡ ನಿರ್ಮಾಣ ಸಹಿತ ನೇಮಕಾತಿಯಲ್ಲಿ ಅನುಕೂಲ ಕಲ್ಪಿಸಿಕೊಡುತ್ತಿವೆ. ಶಿಕ್ಷಕರ ನೇಮಕಾತಿ ಬಗ್ಗೆ ಸರಕಾರ ಈ ಕೂಡಲೆ ಮುತುವರ್ಜಿ ವಹಿಸಬೇಕು, ಈ ಕುರಿತು ಸರಕಾರದ ಗಮನ ಸೆಳೆಯಲು ಪ್ರಯತ್ನಿಸುವೆ ಎಂದರು.
ಕರ್ನಾಟಕ ರಾಜ್ಯ ಅನುದಾನಿತ ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗೋಪಾಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರ ನೇಮಕಾತಿ ಇಲ್ಲವೇ ಗೌರವ ಶಿಕ್ಷಕರನ್ನು ನೀಡಬೇಕು. ಶಿಕ್ಷಕರಿಗೆ ವೈದ್ಯಕೀಯ ಭತ್ತೆ ಸೇರಿ ಹಲವಾರು ಬೇಡಿಕೆಗಳನ್ನು ಸರಕಾರ ಈಡೇರಿಸಬೇಕಿದೆ ಎಂದು ಅಗ್ರಹಿಸಿದರು.
ಈ ವೇಳೆ ಪ್ರಧಾನ ಕಾರ್ಯದರ್ಶಿ ಎಂ.ಕೆ.ರಾಜು ಅವರು ಅನುದಾನಿತ ಶಾಲೆಗಳು ಹಾಗೂ ಶಿಕ್ಷಕರ ಸಮಸ್ಯೆ ಗಳನ್ನು ಶೀಘ್ರವಾಗಿ ಈಡೇರಿಸ ಬೇಕೆಂಬ ಮನವಿ ಪತ್ರವನ್ನು ಡಾ| ಹೆಗ್ಗಡೆಯವರ ಮೂಲಕ ಸರಕಾರಕ್ಕೆ ಸಲ್ಲಿಸಿದರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಸಂಘದ ವತಿಯಿಂದ ಸಮ್ಮಾನಿಸಲಾಯಿತು.
ಸಂಘದ ನಿಕಟಪೂರ್ವ ಅಧ್ಯಕ್ಷ ಡಾ| ಹನುಮಂತಪ್ಪ, ಕಾರ್ಯದರ್ಶಿ ಟಿ. ರವಿಕುಮಾರ್, ರಾಜ್ಯ ಉಪಾಧ್ಯಕ್ಷ ಮುತ್ತಯ್ಯ, ಪ್ರಧಾನ ಕಾರ್ಯದರ್ಶಿ ಎಂ.ಕೆ.ರಾಜು, ಜಿಲ್ಲಾ ಕೋಶಾಧಿಕಾರಿ ಶಶಿಕಾಂತ್ ಜೈನ್, ಮೈಸೂರು ವಿಭಾಗೀಯ ಕಾರ್ಯದರ್ಶಿ ಅರುಣ್ ಕುಮಾರ್ ಶೆಟ್ಟಿ, ಜಿಲ್ಲಾ ಕೋಶಾಧಿಕಾರಿ ಎಚ್.ಎನ್.ರಮೇಶ್ ಹಾಗೂ ಬೆಳ್ತಂಗಡಿ ಬಿಇಒ ತಾರಕೇಸರಿ ಭಾಗವಹಿಸಿದರು.
ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ದ.ಕ.ಜಿಲ್ಲಾಧ್ಯಕ್ಷ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ರಾವ್ ವಂದಿಸಿದರು. ಪ್ರಧಾನ ಕಾರ್ಯದರ್ಶಿ ಆಲ್ವಿನ್ ಲ್ಯಾನ್ಸಿ ರೋಡ್ರಿಗಸ್ ನಿರೂಪಿಸಿದರು.
ಸರಕಾರಿ ಶಾಲೆಗಳ ಪೋಷಿಸುವ ಸಲುವಾಗಿ ವರ್ಷಕ್ಕೆ 300 ಗೌರವ ಶಿಕ್ಷಕರನ್ನು ನೀಡುವ ಕಾರ್ಯ ಧರ್ಮಸ್ಥಳದಿಂದಾಗುತ್ತಿದೆ. ಕನ್ನಡ ಮಾಧ್ಯಮ ಶಾಲೆಗಳ ಉಳಿಸಿ, ಪ್ರೋತ್ಸಾಹಿಸುವ ನೆಲೆಯಲ್ಲಿ ಕ್ಷೇತ್ರದಿಂದ ವರ್ಷಕ್ಕೆ 3 ಕೋ.ರೂ. ಸಹಾಯಧನದ ಮೂಲಕ ಪೀಠೊಪಕರಣ ಅಗತ್ಯತೆಗಳನ್ನು ಪೂರೈಸಲಾಗುತ್ತಿದೆ ಎಂದು ಡಾ| ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.