Caste,Politics ರಹಿತ ಬಲಿಷ್ಠ ದೇಶ ಕಟ್ಟಲು ಸಹಕಾರಿ ರಂಗ ಆದ್ಯತೆ ನೀಡಬೇಕು:ಸಿದ್ದರಾಮಯ್ಯ

ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ

Team Udayavani, Nov 20, 2023, 3:36 PM IST

1-sddsdsad

ವಿಜಯಪುರ: ಸಹಕಾರಿ ರಂಗ ಜಾತಿ, ಧರ್ಮ, ಮತ ರಹಿತವಾದ ವ್ಯವಸ್ಥೆ. ಸಹಕಾರಿ ರಂಗ ಬಲವರ್ಧನೆ ಇರುವ ದೇಶ, ರಾಜ್ಯಗಳ ಆರ್ಥಿಕ ಉತ್ಪನ್ನ (ಜಿಡಿಪಿ) ಬೆಳವಣಿಗೆಗೆ ಸಹಕಾರಿ ಕ್ಷೇತ್ರದ ಕೊಡುಗೆಯೇ ಪ್ರಧಾನ ಎಂಬುದು ಗಮನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೋಮವಾರ ನಗರದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಸಮಾರೋಪ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ‌ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಹಕಾರಿ ರಂಗದಲ್ಲಿ ಇರುವ ಧುರಿಣರು ದೇಶವನ್ನು ಜಾತಿ, ಮತ, ಪಂಥ, ರಾಜಕೀಯ ರಹಿತವಾಗಿ ಸಹಕಾರಿ ರಂಗವನ್ನು ಬಲವರ್ಧನೆ ಮಾಡುವ ಮೂಲಕ ಸಮಾಹ, ದೇಶವನ್ನು ಕಟ್ಟುವಲ್ಲಿ ಶ್ರಮಿಸಬೇಕು ಎಂದರು.

ಕಳೆದ ಒಂದು ವಾರದಿಂದ ದೇಶದಲ್ಲಿ ನಡೆದ ಸಹಕಾರಿ ಸಪ್ತಾಹ ವಿಜಯಪುರ ಜಿಲ್ಲೆಯಲ್ಲಿ ಸಮಾರೋಪ ಗೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದೇನೆ ಎಂದರು.

ಸ್ವಾತಂತ್ರ್ಯ ಪೂರ್ವದಿಂದಲೇ ದೇಶದಲ್ಲಿ ಕರ್ನಾಟಕದ ಗದಗ ಜಿಲ್ಲೆಯ ಕಣಗುನಹಾಳ ಗ್ರಾಮದಲ್ಲಿ 1905 ರಲ್ಲಿ ಸಿದ್ದನಗೌಡ ಪಾಟೀಲ ಅವರಿಂದ ಸಹಕಾರಿ ವ್ಯವಸ್ಥೆ ಜನ್ಮ ತಳೆದಿದೆ. ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಸ್ಮರಣೆಗಾಗಿ ನೆಹರು ಅವರ ಜನ್ಮದಿನವಾದ ನವೆಂಬರ್ 14 ರಿಂದ ರಾಷ್ಟ್ರ ಮಟ್ಟದಲ್ಲಿ ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಿಸಲಾಗುತ್ತದೆ ಎಂದರು.

ಇದೀಗ ಸಹಕಾರಿ ರಂಗ ಭಾರತದಲ್ಲಿ ಹೆಮ್ಮರವಾಗಿ ಬೆಳೆದಿದ್ದು, 8.5 ಲಕ್ಷ ಸಂಘಗಳಿವೆ ಎಂದರು.

ಸಹಕಾರಿ ರಂಗದಲ್ಲಿ ದಲಿತ ಸಮುದಾಯದ ಮಹಿಳೆಯರು ಸದಸ್ಯತ್ವ ಪಡೆಯಲು ಮುಂದಾಗಬೇಕು ಎಂದು ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲು ಉತ್ಪಾದಕ ವ್ಯವಸ್ಥೆ ಬಲವರ್ಧನೆಗೆ ಸರ್ಕಾರ ನೆರವಿಗೆ ನಿಂತಿದೆ. ಶಾಲಾ ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಗಾಗಿ ಸರ್ಕಾರ ವಾರ್ಷಿಕ 1200 ಕೋಟಿ ರೂ.‌ ನೆರವು ನೀಡುವ ಮೂಲಕ ಹಾಲು ಉತ್ಪಾದಕರ ಸಂಘಗಳ ಶಕ್ತಿ ತುಂಬುವ ಕೆಲಸ ಮಾಡಿದೆ ಎಂದರು.

ಕೃಷಿ ಕ್ಷೇತ್ರದ ಅಭಿವೃದ್ಧಿಗೆ ನೀಡುವ ಸಾಲದಲ್ಲಿ ನಬಾರ್ಡ ತನ್ನ ಪಾಲಿನ ಹಣ ನೀಡುವ ವಿಷಯದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಈ ವಿಷಯವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ವೇದಿಕೆ ಮೇಲಿರುವ ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ ಅವರು ಕೂಡ ನಬಾರ್ಡ ನೆರವಿಗೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ಕೃಷಿ ಕ್ಷೇತ್ರಕ್ಕೆ ಬಡ್ಡಿ ರಹಿತ, ಕಡಿಮೆ ಬಡ್ಡಿ ದರಕ್ಕೆ ಜಾತಿನೀಡುವುದರಿಂದ ರೈತರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದರು.

ಕರ್ನಾಟ ಸೇರಿದಂತೆ ದೇಶದಲ್ಲಿ 12 ರಾಜ್ಯಗಳ ಭೀಕರ ಬರಗಾಲ ಆವರಿಸಿದೆ. ರಾಜ್ಯದಲ್ಲಿ ಆವರಿಸಿರುವ ಬರ ಪರಿಸ್ಥಿತಿ ನಿರ್ವಹಣೆಗೆ 800 ಕೋಟಿ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮೆ ಮಾಡಿದೆ. ರಾಜ್ಯ ಸರ್ಕಾರ ಬರ ಪರಿಸ್ಥಿತಿ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದಕ್ಕಾಗಿ ಬರ ಪರಿಹಾರ ಕಾರ್ಯಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.

ಸಮಾರೋಪ ಸಮಾರಂಭ ಆಯೋಜಿರುವ ಆತಿಥ್ಯ ವಹಿಸಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಸಕ್ಕರೆ ಸಚಿವ ಶಿವಾನಂದ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು.

ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ, ಆರ್.ಬಿ. ತಿಮ್ಮಾಪುರ, ಸಂಸದರಾದ ರಮೇಶ ಜಿಗಜಿಣಗಿ, ಪಿ.ಸಿ.ಗದ್ದಿಗೌಡರ, ಸಹಕಾರಿ ರಂಗದ ಹಿರಿಯ ನಾಯಕ ಜಿ.ಟಿ. ದೇವೇಗೌಡ, ವಿಜಯಪುರ, ಬಾಗಲಕೋಟ ಜಿಲ್ಲೆಗಳೂ ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳ ಶಾಸಕರು, ಸಹಕಾರಿ ರಂಗದ ಸಾಧಕರು ವೇದಿಕೆ ಮೇಲಿದ್ದರು.

ಚಿತ್ರ ಕಲಾವಿದನಿಗೆ ಸನ್ಮಾನ
ತಮ್ಮ ಮುಂದೆಯೇವ ತಮ್ಮ ಭಾವಚಿತ್ರ ಬಿಡಿಸಿದ ಕೆಂಚಪ್ಪ ಬಡಿಗೇರ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ನನ್ನ ಚಿತ್ರವನ್ನು ಚನ್ನಾಗಿ ಬಿಡಿಸಿದ್ದಿ ಕಣಯ್ಯ ಎಂದು ಶಾಲು ಹೊದಿಸಿ ಸನ್ಮಾನಿಸಿದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.