BJP ಹೈಕಮಾಂಡ್ ನೇಮಕ ಮಾಡಿದ ಮೇಲೆ ಎಲ್ಲರೂ ಒಪ್ಪಬೇಕು: ಶ್ರೀರಾಮುಲು
Team Udayavani, Nov 20, 2023, 9:57 PM IST
ಬೆಂಗಳೂರು: ಯಾರಿಗೆ ಇಷ್ಟ ಇದೆಯೋ ಇಲ್ಲವೋ ಗೊತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಂದು ಬಾರಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ ಮೇಲೆ ಎಲ್ಲರೂ ಒಪ್ಪಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಹಿರಂಗ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಒಂದು ಬಾರಿ ಘೋಷಣೆ ಮಾಡಿದ ನಂತರ ಮುಗಿಯಿತು. ಬದಲಾಯಿಸಲು ಸಾಧ್ಯವಿಲ್ಲ. ಯತ್ನಾಳ್ ಅವರು ಹಿರಿಯ ನಾಯಕ. ಒಂದು ಬಾರಿ ಪಕ್ಷ ನಿರ್ಧಾರ ಮಾಡಿದ ಮೇಲೆ ಎಲ್ಲವನ್ನು ಸರಿ ಮಾಡಿಕೊಂಡು ಪಕ್ಷ ಮುನ್ನಡೆಸಬೇಕು ಎಂದರು.
ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್. ಆಶೋಕ್ ನೇಮಕಗೊಂಡಿದ್ದಾರೆ. ಅದೇ ರೀತಿ ಬಿ.ವೈ. ವಿಜಯೇಂದ್ರ ಕಿರಿಯರು ಎಂಬುದನ್ನು ಒಪ್ಪಿಕೊಳ್ಳುವೆ. ಇಲ್ಲಿ ನನ್ನ ಅಥವಾ ಇನ್ನೊಬ್ಬರ ಇಷ್ಟ, ಕಷ್ಟ ಮುಖ್ಯವಲ್ಲ. ಪಕ್ಷದ ಹಿತದೃಷ್ಟಿಯಿಂದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು. ವೈಯಕ್ತಿಕ ಅಭಿಪ್ರಾಯ ಏನೇ ಇದ್ದರೂ ರಾಷ್ಟ್ರೀಯ ಪಕ್ಷದಲ್ಲಿ ಅದು ಪರಿಗಣನೆಗೆ ಬರುವುದಿಲ್ಲ ಎಂದು ತಿಳಿಸಿದರು.
ಈಗ ವಿಜಯೇಂದ್ರ ಅವರಿಗೆ ಹೈಕಮಾಂಡ್ ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ ನಾನು ಸೇರಿದಂತೆ ಎಲ್ಲರೂ ಅವರಿಗೆ ಸಹಕಾರ ಕೊಡಬೇಕು. ಆಗ ಮಾತ್ರ ಪಕ್ಷ ಕಟ್ಟಲು ಸಾಧ್ಯ. ಪಕ್ಷದ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.