BJP ಮನೆಯೊಂದು, ಮೂರು ಬಾಗಿಲು : ಲಕ್ಷ್ಮಣ ಸವದಿ

ಜ.26ರ ಬಳಿಕ ಯಾರ್ಯಾರು ಬರುತ್ತಾರೆಂದು ಕಾದು ನೋಡಿ

Team Udayavani, Nov 20, 2023, 10:19 PM IST

BJP ಮನೆಯೊಂದು, ಮೂರು ಬಾಗಿಲು : ಲಕ್ಷ್ಮಣ ಸವದಿ

ವಿಜಯಪುರ: ಮನೆಯೊಂದು ಮೂರು ಬಾಗಿಲಾಗಿರುವ ಹಾಗೂ ರಾಜಕೀಯ ಭವಿಷ್ಯವಿಲ್ಲದ ಬಿಜೆಪಿ ಬರುವ 20 ವರ್ಷಗಳ ಕಾಲ ವಿಪಕ್ಷದಲ್ಲೇ ಇರಲಿದೆ. ಜ.26ರ ಬಳಿಕ ಯಾರ್ಯಾರು ಯಾವ್ಯಾವ ಪಕ್ಷಕ್ಕೆ ಬರುತ್ತಾರೆಂದು ಕಾದು ನೋಡಿ ಎಂದು ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟವಾಗುತ್ತದೆ ಎನ್ನುವ ವಿಜಯೇಂದ್ರ ಬಿಜೆಪಿ ತತ್ವ, ಸಿದ್ಧಾಂತ ಗಾಳಿಗೆ ತೂರಿ ಬ್ಲಾಕ್‌ವೆುàಲ್‌ ಮಾಡಿ ಅಧ್ಯಕ್ಷರಾಗಿದ್ದಾರೆ. ಇದು ಅವರದೇ ಪಕ್ಷದ ಹಿರಿಯ ಶಾಸಕ ಯತ್ನಾಳ ಮಾಡಿರುವ ಆರೋಪ. ಬಿಜೆಪಿಯಲ್ಲಿ ನನಗೆ ಅನ್ಯಾಯ ಆಗಿದ್ದರಿಂದ ಕಾಂಗ್ರೆಸ್‌ ಸೇರಿದ್ದೇನೆ. ಕಳೆದ ಚುನಾವಣೆ ವೇಳೆ ಶಾಸಕ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಯಿಂದ ಹೊರ ಹಾಕಿದವರೇ ಈಗ ರೆಡ್ಡಿ ಅವರನ್ನು ಕರೆತರಲು ಮುಂದಾಗಿದ್ದಾರೆ ಎಂದರು.

ರಾಮಕೃಷ್ಣ ಹೆಗಡೆ ಅವರ ಅಪ್ಪಟ ಬೆಂಬಲಿಗರಾಗಿದ್ದ ನಾವು, ಅವರು ಇರುವವರೆಗೆ ಜತೆಯಲ್ಲಿದ್ದೆವು. ತಮ್ಮ ಅನಾರೋಗ್ಯದ ಪರಿಸ್ಥಿತಿ ಸಂದರ್ಭದಲ್ಲಿ ಲಾಲಕೃಷ್ಣ ಅಡ್ವಾಣಿ ಅವರನ್ನು ಸಂಪರ್ಕಿಸಿ ಹೆಗಡೆ ಅವರು ನಮ್ಮನ್ನು ಬಿಜೆಪಿ ಸೇರ್ಪಡೆ ಮಾಡಿಸಿದ್ದರು. ಆಗ ಬಿಜೆಪಿಯಲ್ಲಿ ಅನಂತಕುಮಾರ ಅವರಂಥ ನಾಯಕರಿದ್ದರು. ಈಗ ಬಿಜೆಪಿ ಪಕ್ಷದಲ್ಲಿ ಅಂಥ ನಾಯಕರಿಲ್ಲ. ಕುಟುಂಬ ರಾಜಕೀಯದಿಂದ ತತ್ತರಿಸಿರುವ ಬಿಜೆಪಿ, ಆಂತರಿಕ ಸಂಘರ್ಷದಿಂದಲೂ ತತ್ತರಿಸಿದೆ ಎಂದರು.

ಇಂಥ ಸ್ಥಿತಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ 136 ಶಾಸಕ ಬಲದೊಂದಿಗೆ ಸಿದ್ದರಾಮಯ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲ ಸಚಿವ-ಶಾಸಕರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಯಾವ ಪಕ್ಷದಿಂದ ಯಾರು ಪಕ್ಷ ತೊರೆಯಲಿದ್ದಾರೆ ಎಂದು ಕಾದುನೋಡಿ. ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನರು ಸಂತೃಪ್ತರಾಗಿದ್ದಾರೆ. ಜನರು ನೆಮ್ಮದಿಯಿಂದ ಇರುವುದನ್ನು ಸಹಿಸಲಾಗದ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ ಎಂದರು.

ಬಿಜೆಪಿ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು, ಕಾಂಗ್ರೆಸ್‌ ತಟ್ಟೆಯಲ್ಲಿ ಬಿದ್ದಿರುವ ನೊಣದ ಬಗ್ಗೆ ಏಕೆ ಮಾತನಾಡುತ್ತಾರೆ. ಬಿಜೆಪಿ ಶಾಸಕಾಂಗ ಸಭೆಯಲ್ಲಿ ಏನಾಗಿದೆ ಎಂಬುದನ್ನು ವಿಜಯೇಂದ್ರ ನೆನಪು ಮಾಡಿಕೊಳ್ಳಲಿ. ಹೀಗಾಗಿ ನಮ್ಮ ಪಕ್ಷದ ಬಗ್ಗೆ ಅವರು ಮಾತನಾಡುವ ಅಗತ್ಯವಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರನ್ನು ಚುನಾವಣೆ ಸಂದರ್ಭದಲ್ಲಿ ಜೋಡೆತ್ತಾಗಿದ್ದು, ಈ ಕಿತ್ತಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಅವರಿಬ್ಬರ ಜಗಳ ಬಗೆಹರಿಸಲು ಹೋಗಿದ್ದರಾ, ವಿಪಕ್ಷದಲ್ಲಿದ್ದೇವೆ ಎಂದು ಪ್ರಚಾರಕ್ಕಾಗಿ ಏನೇನೋ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

delhi ganesh

Delhi Ganesh: ಹಿರಿಯ ನಟ ಡೆಲ್ಲಿ ಗಣೇಶ್‌ ಇನ್ನಿಲ್ಲ

JJ Perry of Hollywood came to Yash film Toxic

Toxic: ಯಶ್‌ ಚಿತ್ರಕ್ಕೆ ಬಂದ ಹಾಲಿವುಡ್‌ ನ ಜೆ.ಜೆ.ಪೆರ್ರಿ

final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

Yathanaa

Waqf Property: ಸಚಿವ ಜಮೀರ್‌ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್‌

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

Kambala Result: ಪಣಪಿಲ ಜಯ-ವಿಜಯ ಜೋಡುಕರೆ ಕಂಬಳ ಕೂಟದ ಫಲಿತಾಂಶ

delhi ganesh

Delhi Ganesh: ಹಿರಿಯ ನಟ ಡೆಲ್ಲಿ ಗಣೇಶ್‌ ಇನ್ನಿಲ್ಲ

2-haldiram

Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್‌ ವ್ಯಾಲ್ಯು ಫಂಡ್‌

JJ Perry of Hollywood came to Yash film Toxic

Toxic: ಯಶ್‌ ಚಿತ್ರಕ್ಕೆ ಬಂದ ಹಾಲಿವುಡ್‌ ನ ಜೆ.ಜೆ.ಪೆರ್ರಿ

final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Final Verdict: ಬುಲ್ಡೋಜರ್‌ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್‌ ಅಂತಿಮ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.