Udupi: ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕಬಡ್ಡಿ
Team Udayavani, Nov 21, 2023, 12:09 AM IST
ಉಡುಪಿ: ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ, ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ನ. 23ರಿಂದ 26ರ ವರೆಗೆ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಆವರಣದಲ್ಲಿ “ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಕಬಡ್ಡಿ ಪಂದ್ಯಾವಳಿ 2023-24′ ನಡೆಯಲಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ| ಜಿ.ಎಸ್. ಚಂದ್ರಶೇಖರ್ ಹೇಳಿದರು.
ಪಿಪಿಸಿಯಲ್ಲಿ ಈಗಾಗಲೇ ಅಖೀಲ ಭಾರತ ಮಟ್ಟದ ನೆಟ್‌ಬಾಲ್, ಕಬಡ್ಡಿ, ಪುರುಷರ ವಾಲಿಬಾಲ್ ಪಂದ್ಯಾವಳಿಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು, ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಇದೀಗ ಮತ್ತೂಮ್ಮೆ ಅಖೀಲ ಭಾರತ ಮಟ್ಟದ ಕಬಡ್ಡಿ ಪಂದ್ಯಾವಳಿ ನಡೆಸಲಿದ್ದೇವೆ ಎಂದರು.
ನ. 23ರ ಬೆಳಗ್ಗೆ 7ಕ್ಕೆ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಭೂಮಿ ಪೂಜೆ ನೆರವೇರಿಸಿ ಪಂದ್ಯಾವಳಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ವಿ.ವಿ. ಕುಲಪತಿ ಪ್ರೊ| ಜಯರಾಜ್ ಅಮೀನ್ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಅರ್ಜುನ ಪ್ರಶಸ್ತಿ ವಿಜೇತ ಭಾರತದ ಕಬಡ್ಡಿ ತಂಡದ ಮಾಜಿ ನಾಯಕ ರಾಕೇಶ್ ಕುಮಾರ್ ಮುಖ್ಯ ಅತಿಥಿಯಾಗಿದ್ದಾರೆ.
4 ವಲಯಗಳ ತಲಾ 4 ತಂಡಗಳಂತೆ 16 ತಂಡಗಳ ಸುಮಾರು 320 ಕ್ರೀಡಾಳುಗಳು, 50 ಮಂದಿ ತರಬೇತುದಾರರು, 50 ಮಂದಿ ತೀರ್ಪುಗಾರರು ಆಗಮಿಸಲಿದ್ದಾರೆ. ಒಟ್ಟು 32 ಪಂದ್ಯಗಳು ನಡೆಯಲಿವೆ. ವಿಜೇತರಿಗೆ ಟ್ರೋಫಿ ಮತ್ತು ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಯಾವುದೇ ನಗದು ಬಹುಮಾನ ಇರುವುದಿಲ್ಲ.
ಪ್ರೊ ಕಬಡ್ಡಿ ಮಾದರಿಯಲ್ಲೇ ಪಂದ್ಯಾಟ ನಡೆಯಲಿದೆ. ಪ್ರೊ ಕಬಡ್ಡಿ ಆಟಗಾರರಾದ ಸೌರಭ್ ಮಂಡಲ್, ಇಮಾಂಶು, ಅಮನ್ ಮೊದಲಾದವರು ವಿವಿಧ ವಿವಿ ತಂಡಗಳನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರು ವಿವಿಯ ತಂಡವೂ ಭಾಗವಹಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.