West Bengal ರಿಲಯನ್ಸ್ ನಿಂದ 20 ಸಾವಿರ ಕೋಟಿ ರೂಪಾಯಿ ಹೂಡಿಕೆ; ಮುಕೇಶ್ ಅಂಬಾನಿ ಘೋಷಣೆ

ಜಿಯೋ ಟ್ರೂ 5ಜಿ ನೆಟ್‌ವರ್ಕ್ ಪಶ್ಚಿಮ ಬಂಗಾಳದ ಹೆಚ್ಚಿನ ಸ್ಥಳಗಳನ್ನು ತಲುಪುತ್ತದೆ

Team Udayavani, Nov 21, 2023, 8:44 PM IST

West Bengal ರಿಲಯನ್ಸ್ ನಿಂದ 20 ಸಾವಿರ ಕೋಟಿ ರೂಪಾಯಿ ಹೂಡಿಕೆ; ಮುಕೇಶ್ ಅಂಬಾನಿ ಘೋಷಣೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ 20 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಮಂಗಳವಾರ ಘೋಷಣೆ ಮಾಡಿದ್ದಾರೆ.

ಮುಂದಿನ ಮೂರು ವರ್ಷಗಳಲ್ಲಿ ಈ ಹೂಡಿಕೆ ಮಾಡಲಾಗುವುದು. ಕೋಲ್ಕತ್ತಾದಲ್ಲಿ ನಡೆಯುತ್ತಿರುವ 7ನೇ ಬೆಂಗಾಲ್ ಜಾಗತಿಕ ಉದ್ಯಮ ಸಮಾವೇಶದಲ್ಲಿ ಅವರು ಮಾತನಾಡಿದರು. “ಬಂಗಾಳದ ಅಭಿವೃದ್ಧಿಯ ಯಾವುದೇ ಸಾಧ್ಯತೆಯನ್ನು ರಿಲಯನ್ಸ್ ಬಿಡುವುದಿಲ್ಲ. ರಿಲಯನ್ಸ್ ಇದುವರೆಗೆ ಬಂಗಾಳದಲ್ಲಿ ಸುಮಾರು 45,000 ಕೋಟಿ ರೂಪಾಯಿ ಹೂಡಿಕೆ ಮಾಡಿದೆ. ಮುಂದಿನ ಮೂರು ವರ್ಷಗಳಲ್ಲಿ ನಾವು 20 ಸಾವಿರ ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆ ಮಾಡುತ್ತೇವೆ” ಎಂದು ಹೇಳಿದರು.

ದೂರಸಂಪರ್ಕ, ರೀಟೇಲ್ ಮತ್ತು ಜೈವಿಕ ಇಂಧನ ಷೇತ್ರಗಳಲ್ಲಿ ಈ 20 ಸಾವಿರ ಕೋಟಿ ಹೂಡಿಕೆ ಮಾಡಲಾಗುವುದು. ನಾವು 5ಜಿ ತಂತ್ರಜ್ಞಾನವನ್ನು ರಾಜ್ಯದ ಮೂಲೆ ಮೂಲೆಗೆ ಒಯ್ಯುತ್ತಿದ್ದೇವೆ, ವಿಶೇಷವಾಗಿ ಗ್ರಾಮೀಣ ಭಾಗದ ಬಂಗಾಳವನ್ನು ಸಂಪರ್ಕಿಸಲಾಗುತ್ತಿದೆ ಎಂದು ಅಂಬಾನಿ ಹೇಳಿದರು. ನಾವು ಬಂಗಾಳದ ಬಹುತೇಕ ಭಾಗಗಳನ್ನು ಆವರಿಸಿದ್ದೇವೆ. ಜಿಯೋ ನೆಟ್‌ವರ್ಕ್ ರಾಜ್ಯದ ಜನಸಂಖ್ಯೆಯ ಶೇ 98.8ರಷ್ಟು ಮತ್ತು ಕೋಲ್ಕತ್ತಾ ಟೆಲಿಕಾಂ ವಲಯದಲ್ಲಿ ಶೇ 100ರಷ್ಟು ಜನಸಂಖ್ಯೆಯನ್ನು ತಲುಪಿದೆ. ಜಿಯೋದ ಪ್ರಬಲ ನೆಟ್‌ವರ್ಕ್ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗದ ಜೊತೆಗೆ ಶಿಕ್ಷಣ, ಆರೋಗ್ಯ ಮತ್ತು ಕೃಷಿಯನ್ನು ಉತ್ತೇಜಿಸುತ್ತದೆ.

ರಿಲಯನ್ಸ್ ರೀಟೇಲ್ ಮುಂದಿನ ಎರಡು ವರ್ಷಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಸುಮಾರು 200 ಹೊಸ ಮಳಿಗೆಗಳನ್ನು ತೆರೆಯಲು ಯೋಜಿಸುತ್ತಿದೆ. ಸದ್ಯಕ್ಕೆ ಬಂಗಾಳದಲ್ಲಿ ಸುಮಾರು 1000 ರಿಲಯನ್ಸ್ ಸ್ಟೋರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅದು 1200ಕ್ಕೆ ಹೆಚ್ಚಾಗುತ್ತದೆ. ನೂರಾರು ಸಣ್ಣ ಮತ್ತು ಮಧ್ಯಮ ಉದ್ಯಮಿಗಳು ಮತ್ತು ಬಂಗಾಳದ ಸುಮಾರು 5.5 ಲಕ್ಷ ಕಿರಾಣಿ ಅಂಗಡಿಯವರು ನಮ್ಮ ರೀಟೇಲ್ ವ್ಯಾಪಾರದೊಂದಿಗೆ ಕೈ ಜೋಡಿಸಿದ್ದಾರೆ ಎಂದು ಹೇಳಿದರು.

ಹೊಸ ಮಳಿಗೆಗಳನ್ನು ತೆರೆಯುವುದರಿಂದ ಅವರಿಗೆ ಲಾಭವಾಗಲಿದೆ. ಪ್ರಭುಜಿ, ಮುಖ್ರೋಚಕ್, ಸಿಟಿ ಗೋಲ್ಡ್, ಬಿಸ್ಕ್ ಫಾರ್ಮ್‌ನಂತಹ ಬಂಗಾಳದ ಹಲವು ಪ್ರಾದೇಶಿಕ ಬ್ರ್ಯಾಂಡ್‌ಗಳನ್ನು ಉಲ್ಲೇಖಿಸಿದ ಅವರು, ರಿಲಯನ್ಸ್ ರೀಟೇಲ್ ಮೂಲಕ ನಾವು ಈ ಬ್ರ್ಯಾಂಡ್‌ಗಳನ್ನು ಇಡೀ ದೇಶದಾದ್ಯಂತ ಕೊಂಡೊಯ್ಯುತ್ತಿದ್ದೇವೆ ಎಂದು ಹೇಳಿದರು.

ಭಾರತದ ಅತಿದೊಡ್ಡ ಜೈವಿಕ ಇಂಧನ ಉತ್ಪಾದಕ ರಿಲಯನ್ಸ್ ಮುಂದಿನ ಮೂರು ವರ್ಷಗಳಲ್ಲಿ 100 ಕಂಪ್ರೆಸ್ ಜೈವಿಕ ಅನಿಲ ಘಟಕಗಳನ್ನು ಸ್ಥಾಪಿಸಲಿದೆ. ಈ ಘಟಕಗಳು 5.5 ಮಿಲಿಯನ್ ಟನ್ ಕೃಷಿ ಅವಶೇಷಗಳು ಮತ್ತು ಸಾವಯವ ತ್ಯಾಜ್ಯವನ್ನು ವಿಲೇವಾರಿ ಮಾಡುತ್ತವೆ. ಇದು ಸುಮಾರು 2 ಮಿಲಿಯನ್ ಟನ್ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ವಾರ್ಷಿಕವಾಗಿ 2.5 ಮಿಲಿಯನ್ ಟನ್ ಸಾವಯವ ಗೊಬ್ಬರವನ್ನು ಉತ್ಪಾದಿಸಲು ಸಹಾಯ ಮಾಡುತ್ತದೆ. ರೈತರಿಗೆ ದೊಡ್ಡ ಪ್ರಮಾಣದಲ್ಲಿ ಇಂಧನ ಪಾರ್ಕ್ ಗಳನ್ನು ಸ್ಥಾಪಿಸಲು ನಾವು ಸಹಾಯ ಮಾಡುತ್ತೇವೆ. ಇದರೊಂದಿಗೆ, ಅವರು ಆಹಾರ ಪೂರೈಕೆದಾರರೊಂದಿಗೆ ಇಂಧನ ಪೂರೈಕೆದಾರರಾಗಲು ಸಾಧ್ಯವಾಗುತ್ತದೆ ಮತ್ತು ಅವರ ಆದಾಯವೂ ಹೆಚ್ಚಾಗುತ್ತದೆ ಎಂದು ಮುಕೇಶ್ ಅಂಬಾನಿ ಹೇಳಿದರು.

ಮುಕೇಶ್ ಅಂಬಾನಿ ತಮ್ಮ ಭಾಷಣದಲ್ಲಿ ರಿಲಯನ್ಸ್ ಫೌಂಡೇಷನ್ ಪಶ್ಚಿಮ ಬಂಗಾಳದಲ್ಲಿ ನಡೆಸುತ್ತಿರುವ ಕೆಲಸಗಳನ್ನೂ ಪ್ರಸ್ತಾಪಿಸಿದರು. ಇವುಗಳಲ್ಲಿ ಪ್ರಮುಖವಾದದ್ದು ಕೋಲ್ಕತ್ತಾದ ಪ್ರಸಿದ್ಧ ಕಾಳಿಘಾಟ್ ದೇವಾಲಯದ ನವೀಕರಣ ಮತ್ತು ಜೀರ್ಣೋದ್ಧಾರ. ಶತಮಾನಗಳಷ್ಟು ಹಳೆಯದಾದ ಈ ದೇವಾಲಯದ ದುರಸ್ತಿ ಮತ್ತು ಸೌಂದರ್ಯ ಹೆಚ್ಚಿಸುವ ಕಾರ್ಯವನ್ನು ರಿಲಯನ್ಸ್ ಫೌಂಡೇಷನ್ ಮಾಡುತ್ತಿದೆ. ಫೌಂಡೇಷನ್‌ನ ‘ಸ್ವದೇಶ್’ ಉಪಕ್ರಮದ ಅಡಿಯಲ್ಲಿ ಭಾರತದ ಶ್ರೀಮಂತ ಮತ್ತು ವೈವಿಧ್ಯಮಯ ಸಾಂಪ್ರದಾಯಿಕ ಕಲೆ ಮತ್ತು ಕರಕುಶಲಗಳನ್ನು ಭಾರತದಲ್ಲಿ ಮತ್ತು ಜಾಗತಿಕವಾಗಿ ಪ್ರಚಾರ ಮಾಡಲಾಗುತ್ತಿದೆ. ರಿಲಯನ್ಸ್ ಫೌಂಡೇಷನ್ ಬಂಗಾಳದ ಯುವ ಪೀಳಿಗೆಯ ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸುತ್ತದೆ. ಅಲ್ಲದೆ, ನೇಕಾರರು, ಕುಶಲಕರ್ಮಿಗಳು ಮತ್ತು ಕರಕುಶಲಕರ್ಮಿಗಳ ಉತ್ಪನ್ನಗಳನ್ನು ರಿಲಯನ್ಸ್‌ನ ರೀಟೇಲ್ ನ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲು ‘ಬಿಸ್ವಾ ಬಾಂಗ್ಲಾ ಕಾರ್ಪೊರೇಷನ್’ ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.