Politics: ಕಣದಲ್ಲಿ `ಅಪಶಕುನ’ ಕದನ- ಪ್ರಧಾನಿ ಮೋದಿ ಬಗ್ಗೆ ರಾಹುಲ್ ಅವಹೇಳನಕಾರಿ ಹೇಳಿಕೆ
ಕ್ಷಮೆಗೆ ಆಗ್ರಹಿಸಿದ ಬಿಜೆಪಿ
Team Udayavani, Nov 22, 2023, 12:53 AM IST
ಹೊಸದಿಲ್ಲಿ: ವಿಶ್ವಕಪ್ ಕ್ರಿಕೆಟ್ನಲ್ಲಿ ಭಾರತದ ಸೋಲಿನ ಬಗ್ಗೆ ಪ್ರಸ್ತಾವಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಧಾನಿ ಮೋದಿಯವರನ್ನು “ಅಪಶಕುನ’ ಎಂದು ಕರೆಯುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದಾರೆ. ರಾಹುಲ್ ಅವರ ಈ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲವಾಗಿದೆ.
ರಾಜಸ್ಥಾನದಲ್ಲಿ ಮಂಗಳವಾರ ವಲ್ಲಭನಗರ ಮತ್ತು ಬೇಟೂ ಎಂಬಲ್ಲಿ ರ್ಯಾಲಿ ನಡೆಸಿದ ರಾಹುಲ್, ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಕುರಿತು ಮಾತನಾಡುತ್ತಾ “ಪನೌತಿ'(ದುರದೃಷ್ಟವಂಶ, ಅಪಶಕುನ) ಎಂಬ ಪದಬಳಕೆ ಮಾಡಿದ್ದಾರೆ. “ಪಿಎಂ ಎಂದರೆ ಪನೌತಿ ಮೋದಿ’ ಎಂದಿದ್ದಾರೆ. ಈ ಮೂಲಕ, ಅಹ್ಮದಾಬಾದ್ನ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯದ ವೇಳೆ ಪ್ರಧಾನಿ ಮೋದಿ ಪಂದ್ಯ ವೀಕ್ಷಿಸಲು ಆಗಮಿಸಿದ್ದೇ ಭಾರತದ ಸೋಲಿಗೆ ಕಾರಣ. ಅಂದರೆ ಮೋದಿಯವರು ಅಪಶಕುನ ಇದ್ದಂತೆ ಎಂಬರ್ಥದಲ್ಲಿ ರಾಹುಲ್ ಮಾತನಾಡಿದ್ದಾರೆ.
ಕ್ಷಮೆಗೆ ಆಗ್ರಹ: ರಾಹುಲ್ ಹೇಳಿಕೆಗೆ ಕಿಡಿಯಾಗಿರುವ ಬಿಜೆಪಿ, ಇದೊಂದು ನಾಚಿಕೆಗೇಡಿನ, ಅವಹೇಳನಕಾರಿ ಮತ್ತು ಖಂಡನೀಯ ಹೇಳಿಕೆ ಎಂದಿದ್ದು, ಈ ಕೂಡಲೇ ರಾಹುಲ್ ಅವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದೆ. ಇಂಥ ಹೇಳಿಕೆ ನೀಡುವ ಮೂಲಕ ರಾಹುಲ್ ತಮ್ಮ ನಿಜಬಣ್ಣವನ್ನು ತೋರಿಸಿದ್ದಾರೆ. ಗುಜರಾತ್ನಲ್ಲಿ ಮೋದಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಸೋನಿಯಾ ಗಾಂಧಿಯವರು “ಸಾವಿನ ವ್ಯಾಪಾರಿ’ ಎಂದು ಕರೆದಿದ್ದರು. ಅನಂತರ ಗುಜರಾತ್ನಲ್ಲಿ ಕಾಂಗ್ರೆಸ್ ಹೇಗೆ ಮುಳುಗಿತು ಎಂಬುದನ್ನು ರಾಹುಲ್ ನೆನಪಿಟ್ಟುಕೊಳ್ಳಬೇಕಿತ್ತು ಎಂದು ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಜತೆಗೆ ಪಂಚರಾಜ್ಯಗಳಲ್ಲಿ ಕಾಂಗ್ರೆಸ್ಗೆ ಸೋಲಿನ ಹತಾಶೆ ಕಾಡುತ್ತಿರುವುದು ಈ ಹೇಳಿಕೆಯಿಂದಲೇ ಸ್ಪಷ್ಟವಾಗಿದೆ ಎಂದೂ ಹೇಳಿದ್ದಾರೆ.
ಇದೇ ವೇಳೆ, ಮಂಗಳವಾರ ಜೈಪುರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜಸ್ಥಾನದ ಕಾಂಗ್ರೆಸ್ ಸರಕಾರವು ಧಾರ್ಮಿಕ ಧ್ರುವೀಕರಣ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿದ್ದಾರೆ.
ತೆಲಂಗಾಣದ ಮಲ್ಕಾಜ್ಗಿರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, 2014ರಲ್ಲಿ ತೆಲಂಗಾಣ ರಾಜ್ಯ ರಚನೆಯಾದಾಗ ಇದು ಸಂಪದ್ಭರಿತ ರಾಜ್ಯವಾಗಿತ್ತು. ಆದರೆ ಈಗ ಆದಾಯ ಕೊರತೆಯಿರುವ ರಾಜ್ಯವಾಗಿ ಬದಲಾಗಿದೆ. ಈ ಬದಲಾವಣೆಯ ಕ್ರೆಡಿಟ್ ಸಿಎಂ ಕೆ. ಚಂದ್ರಶೇಖರ್ ರಾವ್ಗೆ ಸಲ್ಲಬೇಕು ಎಂದು ವಾಗ್ಧಾಳಿ ನಡೆಸಿದ್ದಾರೆ.
ಮೋದಿ ಟೀಕೆಗೆ ಪೈಲಟ್ ತಿರುಗೇಟು: “ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರು ಪರಸ್ಪರರನ್ನು ರನೌಟ್ ಮಾಡಲು ಪ್ರಯತ್ನಿಸುತ್ತಲೇ 5 ವರ್ಷ ಕಳೆದರು’ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ತಿರುಗೇಟು ನೀಡಿದ್ದಾರೆ. “ಬಿಜೆಪಿಯೇ ಒಂದು ಹಿಟ್ ವಿಕೆಟ್. ಅವರು ನಮ್ಮ ಬಗ್ಗೆ ಮಾತಾಡುವುದು ಹಾಸ್ಯಾಸ್ಪದ’ ಎಂದಿದ್ದಾರೆ.
ಜೈಪುರದಲ್ಲಿ ಮೋದಿ ರೋಡ್ಶೋ
ಇದೇ 25ರಂದು ಚುನಾವಣೆ ಎದುರಿಸಲಿರುವ ರಾಜಸ್ಥಾನದ ಜೈಪುರದಲ್ಲಿ ಮಂಗಳವಾರ ಪ್ರಧಾನಿ ಮೋದಿ ರೋಡ್ ಶೋ ನಡೆಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಜನರು, ಮೋದಿಯವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ. ಇದಕ್ಕೂ ಮುನ್ನ, ಬರಾನ್, ಕೋಟಾ ಮತ್ತು ಕರೌಲಿ ಜಿಲ್ಲೆಯಲ್ಲಿ ಪ್ರಚಾರ ರ್ಯಾಲಿ ನಡೆಸಿದ ಮೋದಿ, ಕಾನೂನು ಸುವ್ಯವಸ್ಥೆ ಸ್ಥಿತಿ ಮತ್ತು ಭ್ರಷ್ಟಾಚಾರ ವಿಚಾರ ಪ್ರಸ್ತಾವಿಸಿ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದ್ದರು.
ಬಿಆರ್ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ
ತೆಲಂಗಾಣದ ಹೈದರಾಬಾದ್ನಲ್ಲಿ ಪ್ರಚಾರ ನಡೆಸಿರುವ ಕಾಂಗ್ರೆಸ್ ನಾಯಕ, ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ ಮತ್ತು ಆಡಳಿತಾರೂಢ ಬಿಆರ್ಎಸ್ ಲೂಟಿ ಮಾಡಿದ ಹಣವನ್ನು ಗ್ಯಾರಂಟಿಗಳ ರೂಪದಲ್ಲಿ ಜನರಿಗೆ ವಾಪಸ್ ನೀಡುವುದೂ ಖಚಿತ ಎಂದು ಹೇಳಿದ್ದಾರೆ. ಬಿಆರ್ಎಸ್ ಅಂದರೆ “ಭ್ರಷ್ಟ ರಾಷ್ಟ್ರ ಸಮಿತಿ’. ಟಿಆರ್ಎಸ್ ಆಗಿದ್ದಾಗ ಈ ಪಕ್ಷದ ಭ್ರಷ್ಟಾಚಾರವು ತೆಲಂಗಾಣಕ್ಕೆ ಸೀಮಿತವಾಗಿತ್ತು. ಬಿಆರ್ಎಸ್ ಆಗಿ ಬದಲಾದ ಅನಂತರ ಭ್ರಷ್ಟಾಚಾರ ಕೂಡ ರಾಷ್ಟ್ರಮಟ್ಟಕ್ಕೆ ವ್ಯಾಪಿಸಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.