CM-DCM ಮಧ್ಯೆ ಒಡಕು ತಂದ ಜಾತಿಗಣತಿ

ವರದಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಆಗ್ರಹಕ್ಕೆ ಡಿಸಿಎಂ ಸಹಿ : ಅವಕಾಶ ವಂಚಿತರಿಗೆ ನ್ಯಾಯ ಕೊಡಿಸುವೆ- ಸಿಎಂ ಸಿದ್ದರಾಮಯ್ಯ

Team Udayavani, Nov 22, 2023, 1:22 AM IST

SIDDU DK SHI

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಜಾರಿ ವಿಚಾರದಲ್ಲಿ ಸರಕಾರದೊಳಗೆ ಒಡಕು ಮೂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿಭಿನ್ನ ನಿಲುವು ತಳೆದಿದ್ದಾರೆ.

ಕಾಂತರಾಜ್‌ ವರದಿ ತಿರಸ್ಕರಿಸಬೇಕೆಂದು ಒಕ್ಕಲಿಗರ ಸಂಘ ನಡೆಸಿರುವ ಸಹಿ ಅಭಿ ಯಾನ ದಲ್ಲಿ ಡಿಸಿಎಂ ಶಿವಕುಮಾರ್‌, ಸಚಿವ ರಾದ ರಾಮಲಿಂಗಾ ರೆಡ್ಡಿ, ಎಂ.ಸಿ. ಸುಧಾಕರ್‌, ಚಲುವರಾಯಸ್ವಾಮಿ ಸಹಿತ ಕಾಂಗ್ರೆಸ್‌ ಶಾಸಕರು ಪಾಲ್ಗೊಂಡಿದ್ದಾರೆ. ಆದರೆ “ಆಯೋಗದ ವರದಿ ಸ್ವೀಕರಿಸಿ, ಅವಕಾಶ ವಂಚಿತ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲ’ ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

ವರದಿ ಸರಕಾರದ ಕೈಸೇರುವ ಮೊದಲೇ ದ್ವಂದ್ವ ನಿಲುವುಗಳು ವ್ಯಕ್ತಗೊಳ್ಳುತ್ತಿವೆ. ಜತೆಗೆ ಸಚಿವ ಸಂಪುಟದಲ್ಲೂ ಪರ-ವಿರೋಧ ಧ್ವನಿಗಳಿರುವುದು ಸ್ಪಷ್ಟವಾಗಿದೆ. ಇದು ರಾಜ್ಯ ರಾಜಕಾರಣದಲ್ಲಿ ಜಾತಿ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಾಧ್ಯತೆಗಳಿವೆ ಎನ್ನಲಾಗು ತ್ತಿದೆ. ಲಿಂಗಾಯತ ಹಾಗೂ ಒಕ್ಕಲಿಗ ಸಮು ದಾಯಗಳು ಕಾಂತರಾಜ್‌ ವರದಿಗೆ ವಿರೋಧ ವ್ಯಕ್ತಪಡಿಸಿದ್ದರೆ, ರಾಜ್ಯದ ವಿವಿಧ ಹಿಂದುಳಿದ ಸಮುದಾಯಗಳು ವರದಿ ಸ್ವೀಕರಿಸಬೇಕೆಂದು ಒತ್ತಡ ಹೇರಿವೆ.

ಸೋಮವಾರವಷ್ಟೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ನಿಯೋಗವು ಸರಕಾರಕ್ಕೆ ವರದಿ ಸಲ್ಲಿಸುವಂತೆ ಒತ್ತಡ ಹೇರಿದೆ. ಇದರ ಬೆನ್ನಲ್ಲೇ ವರದಿ ಜಾರಿಯನ್ನು ವಿರೋಧಿಸಿ ಒಕ್ಕಲಿಗರ ಸಂಘವು ಸಹಿ ಅಭಿಯಾನ ನಡೆಸಿದ್ದರೆ, ಅಖೀಲ ಭಾರತ ವೀರಶೈವ ಮಹಾಸಭಾವು ವರದಿ ಜಾರಿ ಬೇಡ ಎಂದಿದೆ. ವರದಿ ಜಾರಿಯಾಗಬೇಕು ಎನ್ನುವ ಸಂಘಟನೆಗಳ ಹಿಂದೆ ಒಂದಿಷ್ಟು ರಾಜಕಾರಣಿಗಳಿದ್ದರೆ, ಜಾರಿಯಾಗಬಾರದು ಎನ್ನುವ ಕೂಗಿಗೆ ಮತ್ತೂಂದು ವರ್ಗದ ರಾಜಕಾರಣಿಗಳ ಬೆಂಬಲವಿದೆ. ಒಂದು ವೇಳೆ ಸರಕಾರಕ್ಕೆ ವರದಿ ಸಲ್ಲಿಕೆಯಾದರೂ ಜಾರಿ ಮಾಡುವ ದಾರಿಯಂತೂ ಸುಲಭವಿಲ್ಲ. ಆದರೂ ಸಿಎಂ ಮಾತ್ರ ತಮ್ಮ ನಿರ್ಧಾರ ಅಚಲ ಎನ್ನುವ ಮೂಲಕ ವರದಿ ವಿರೋಧಿಸುವವರಿಗೆ ತಿರುಗೇಟು ನೀಡಿದ್ದಾರೆ.

ಸಲ್ಲಿಕೆ ಆಗಲಿದೆಯೇ ವರದಿ?
ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಅಧಿಕಾರಾವಧಿ ನ. 25ಕ್ಕೆ ಅಂತ್ಯಗೊಳ್ಳಲಿದೆ. ಹಿಂದಿನ ಅಧ್ಯಕ್ಷ ಕಾಂತರಾಜು ನೇತೃತ್ವದಲ್ಲಿ ನಡೆದಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಅಷ್ಟರೊಳಗೆ ಸರಕಾರಕ್ಕೆ ಸಲ್ಲಿಸಬೇಕಿದೆ. ನ. 25 ನಾಲ್ಕನೇ ಶನಿವಾರ ಆಗಿದ್ದು, ನ. 24 ಹೆಗ್ಡೆ ಅವರ ಕರ್ತವ್ಯದ ಕೊನೆಯ ದಿನವಾದ್ದರಿಂದ ಅಂದೇ ಸಲ್ಲಿಸಿದರೂ ಅಚ್ಚರಿಯಿಲ್ಲ. ಆದರೆ ಆಯೋಗದ ವರದಿ ಸಲ್ಲಿಕೆಗೆ ತಾಂತ್ರಿಕ ಅಡಚಣೆಗಳು ಸಾಕಷ್ಟಿದ್ದು, ಈ ಹಿಂದೆ ಕಾಂತರಾಜು ಅಧ್ಯಕ್ಷರಾಗಿದ್ದಾಗಲೇ ವರದಿ ಸಿದ್ಧವಾಗಿತ್ತಾದರೂ ಸದಸ್ಯ ಕಾರ್ಯದರ್ಶಿ ಸಹಿ ಮಾಡದ್ದರಿಂದ ಸರಕಾರಕ್ಕೆ ಸಲ್ಲಿಸಿರಲಿಲ್ಲ. ಅದೇ ವರದಿಯನ್ನು ಜಯಪ್ರಕಾಶ್‌ ಹೆಗ್ಡೆ ಅವರು ಕೊಂಚ ಬದಲಿಸಿರುವುದಾಗಿ ಹೇಳಿದ್ದು, ಈಗಿನ ಸದಸ್ಯ ಕಾರ್ಯದರ್ಶಿಯೂ ಸಹಿ ಮಾಡದೆ ಇದ್ದರೆ ತಾಂತ್ರಿಕವಾಗಿ ವರದಿಗೆ ಮಾನ್ಯತೆ ಸಿಗುವುದು ಕಷ್ಟ. ಇದೇ ನೆಪವೊಡ್ಡಿ ಜಯಪ್ರಕಾಶ್‌ ಹೆಗ್ಡೆ ವರದಿ ಸಲ್ಲಿಕೆ ಮಾಡದೆ ಇದ್ದರೆ ಹೊಣೆ ಹೊಸ ಅಧ್ಯಕ್ಷರ ಹೆಗಲಿಗೇರುವ ಎಲ್ಲ ಲಕ್ಷಣಗಳೂ ಇವೆ.

ಒಪ್ಪಿಕೊಳ್ಳದಿರಲು ಆಗ್ರಹ
ಕರ್ನಾಟಕ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಎಚ್‌. ಕಾಂತ ರಾಜು ಅವಧಿಯಲ್ಲಿ ಸಂಗ್ರಹಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2014-15ರ ದತ್ತಾಂಶ ಮತ್ತು ವರದಿಯನ್ನು ತಿರಸ್ಕರಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಹಾಗೂ ರಾಜ್ಯ ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯು ಸಿಎಂಗೆ ಪತ್ರ ಬರೆದಿದೆ.

ಈ ಸಹಿ ಸಂಗ್ರಹ ಅಭಿಯಾನಕ್ಕೆ ಆದಿಚುಂಚನಗಿರಿ ಮಠದ ಡಾ| ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಗುರುಗುಂಡ ಬ್ರಹೆ¾àಶ್ವರ ಮಠದ ಡಾ| ಶ್ರೀನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀಕುಮಾರಚಂದ್ರ ಶೇಖರಾನಂದನಾಥ ಸ್ವಾಮೀಜಿ, ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ, ಸಮಿತಿ ಅಧ್ಯಕ್ಷ ಗಾ.ನಂ. ಶ್ರೀಕಂಠಯ್ಯ, ಪ್ರಧಾನ ಸಂಚಾಲಕ ಆಡಿಟರ್‌ ನಾಗರಾಜ್‌ ಯಲಚವಾಡಿ ಸಹಿತ ಹಲವರು ಬೆಂಬಲ ನೀಡಿದ್ದಾರೆ.

ಅಲ್ಲದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ಮಾಜಿ ಸಿಎಂ ಎಸ್‌.ಎಂ. ಕೃಷ್ಣ, ಡಿ.ವಿ. ಸದಾನಂದ ಗೌಡ, ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ| ಅಶ್ವತ್ಥನಾರಾಯಣ, ಹಾಲಿ ಡಿಸಿಎಂ ಡಿ.ಕೆ. ಶಿವಕುಮಾರ್‌, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್‌. ಅಶೋಕ್‌, ಸಚಿವರಾದ ರಾಮಲಿಂಗಾರೆಡ್ಡಿ, ಎಂ.ಸಿ. ಸುಧಾಕರ್‌, ಚಲುವರಾಯಸ್ವಾಮಿ, ಕಾಂಗ್ರೆಸ್‌ ಶಾಸಕರಲ್ಲಿ ಕೆಲವರು, ಸಂಸದರಾದ ಬಿ.ಎನ್‌. ಬಚ್ಚೇಗೌಡ, ರಾಜ್ಯಸಭಾ ಸದಸ್ಯ ಜೆ.ಸಿ. ಚಂದ್ರಶೇಖರ್‌, ಕೆಲವು ಮೇಲ್ಮನೆ ಸದಸ್ಯರು ಸಹಿ ಮಾಡಿದ್ದಾರೆ. ಈ ಪತ್ರವನ್ನು ಸಿಎಂ ಅವರಿಗೆ ತಲುಪಿಸುವಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೇ ನೇತೃತ್ವ ವಹಿಸಿದ್ದು ಅಚ್ಚರಿ ಹುಟ್ಟಿಸಿದೆ.

ಟ್ವೀಟ್‌ನಲ್ಲಿ ಸಿಎಂ ಬರೆದುಕೊಂಡದ್ದೇನು?
“ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಡುವ ಮೊದಲ ಕೆಲಸ ಜಾತಿಗಣತಿ ಪ್ರಕ್ರಿಯೆಗೆ ಚಾಲನೆ. ಜಾತಿಗಣತಿ ನಡೆಸಿದಾಗಲೇ ಭಾರತ ಮಾತೆಗೆ ಜಯ’ ಎನ್ನುವ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಸಿಎಂ ಪೋಸ್ಟ್‌ ಮಾಡಿದ್ದಾರೆ. “ನಮ್ಮ ಹೆಮ್ಮೆಯ ನಾಯಕರಾದ ರಾಹುಲ್‌ ಗಾಂಧಿ ಅವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ ಸರ್ವರಿಗೂ ಸಮಪಾಲು- ಸರ್ವರಿಗೂ ಸಮಬಾಳು ಎನ್ನುವುದು ನನ್ನ ಭಾವನೆ. ನಮ್ಮ ಸರಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನಿರ್ಧಾರ ಅಚಲವಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

 

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.