Visakhapatnam: ಆಟೋ – ಟ್ರಕ್ ಢಿಕ್ಕಿ; ಅಪಘಾತದ ರಭಸಕ್ಕೆ ಹಾರಿಬಿದ್ದ ಶಾಲಾ ಮಕ್ಕಳು
Team Udayavani, Nov 22, 2023, 3:11 PM IST
ಆಂಧ್ರ ಪ್ರದೇಶ: ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ರಿಕ್ಷಾಕ್ಕೆ ಟ್ರಕ್ ವೊಂದು ಢಿಕ್ಕಿ ಹೊಡೆದ ಪರಿಣಾಮ 8 ಮಕ್ಕಳು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬುಧವಾರ (ನ.22 ರಂದು) ನಡೆದಿದೆ.
ಮುಂಜಾನೆ 7:35 ರ ಸಮಯಕ್ಕೆ ಮಕ್ಕಳು ಆಟೋದಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ವಿಶಾಖಪಟ್ಟಣಂನ ಸಂಗಮ್ ಶರತ್ ಥಿಯೇಟರ್ ನ ಅಂಡರ್ ಪಾಸ್ ರಸ್ತೆಯಲ್ಲಿ ಬಳಿ ಆಟೋ ರಿಕ್ಷಾ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಬಲಗಡೆಯಿಂದ ಟ್ರಕ್ ವೊಂದು ಬಂದಿದೆ. ರಸ್ತೆ ದಾಟಲು ವೇಗವಾಗಿ ಹೋಗುತ್ತಿದ್ದ ರಿಕ್ಷಾಕ್ಕೆ ಟ್ರಕ್ ಢಿಕ್ಕಿ ಹೊಡೆದಿದೆ. ಕ್ಷಣ ಮಾತ್ರದಲ್ಲಿ ಆಟೋ ಪಲ್ಟಿಯಾಗಿದ್ದು, ಅದರಲ್ಲಿದ್ದ 8 ಮಕ್ಕಳು ಗಾಳಿಗೆ ಹಾರಿ ಕೆಳಗೆ ಬಿದ್ದಿದ್ದಾರೆ.ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಪಘಾತದ ಬಳಿಕ ವಾಹನ ಸವಾರರು ಹಾಗೂ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಪಲ್ಟಿಯಾಗಿದ್ದ ಆಟೋವನ್ನು ಎತ್ತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಸಿದ್ದಾರೆ. ಸದ್ಯ 8 ಮಕ್ಕಳಲ್ಲಿ ನಾಲ್ವರು ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದ ನಾಲ್ವರಲ್ಲಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಆಟೋ ಓವರ್ ಲೋಡ್ ಆಗಿತ್ತು, ನಿಗದಿತ ಸಂಖ್ಯೆಗಿಂತ ಹೆಚ್ಚಿನ ಜನರನ್ನು ಆಟೋದಲ್ಲಿ ಕೂರಿಸಲಾಗಿತ್ತು. ಈ ಕಾರಣದಿಂದಾಗಿ ಟ್ರಕ್ ಹಾಗೂ ಆಟೋ ಚಾಲಕ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ವರದಿ ತಿಳಿಸಿದೆ.
#WATCH | Andhra Pradesh: Eight school children were injured in an accident when an auto collided with a lorry near Sangam Sarat Theatre in Visakhapatnam
Source: CCTV Footage from a local shop pic.twitter.com/sr9xaadUVo
— ANI (@ANI) November 22, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.