Kaiva Teaser: ಟೀಸರ್‌ನಲ್ಲಿ ಕೈವ ಮಿಂಚು


Team Udayavani, Nov 22, 2023, 3:54 PM IST

Kaiva Teaser: ಟೀಸರ್‌ನಲ್ಲಿ ಕೈವ ಮಿಂಚು

ಜಯತೀರ್ಥ ನಿರ್ದೇಶನದಲ್ಲಿ “ಕೈವ’ ಎಂಬ ಸಿನಿಮಾ ಸಿದ್ಧವಾಗಿರುವ ವಿಚಾರ ನಿಮಗೆ ಗೊತ್ತಿರಬಹುದು. ಇತ್ತೀಚೆಗೆ ಆ ಚಿತ್ರದ ಆ್ಯಕ್ಷನ್‌ ಟೀಸರ್‌ ಬಿಡುಗಡೆಯಾಗಿ, ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಟ ಅಭಿಷೇಕ್‌ ಅಂಬರೀಶ್‌ ಚಿತ್ರದ ಟೀಸರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ರವೀಂದ್ರ ಕುಮಾರ್‌ ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರದಲ್ಲಿ ಧನ್ವೀರ್‌ ನಾಯಕರಾಗಿ ನಟಿಸಿದ್ದು, ಮೇಘಾ ಶೆಟ್ಟಿ ನಾಯಕಿ.

“ಕೈವ ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳರಪೇಟೆಯಲ್ಲಿ ನಡೆದ ನೈಜ ಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ ಚಿತ್ರದ ಪ್ರಮುಖ ಕಥಾವಸ್ತು. ನನಗೆ ಶವಾಗಾರದಲ್ಲಿ ಕೆಲಸ ಮಾಡುವವರಿಂದ ಈ ಕಥೆ ಸಿಕ್ಕಿತು. ಆನಂತರ ತಿಗಳರಪೇಟೆಗೆ ಹೋಗಿ ಅಲ್ಲಿ ಈ ಘಟನೆ ಬಗ್ಗೆ ಕೂಲಂಕುಶವಾಗಿ ತಿಳಿದುಕೊಂಡೆ. ಈ ಘಟನೆ ಕಂಡಿದ್ದ ಅನೇಕರು ಈಗಲೂ ಇದ್ದಾರೆ. ಅದೇ ಇಸವಿಯಲ್ಲಿ ನಡೆದ ಗಂಗಾರಾಮ್‌ ಕಟ್ಟಡದ ದುರಂತಕ್ಕೆ ಹಾಗೂ ಈ ಚಿತ್ರದ ಕಥೆಗೂ ಸಂಬಂಧವಿದೆ.  ದಿನಕರ್‌ ತೂಗುದೀಪ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ದಿನಕರ್‌ ತೂಗುದೀಪ, ರಾಘು ಶಿವಮೊಗ್ಗ ಸೇರಿದಂತೆ ಐದು ಜನ ನಿರ್ದೇಶಕರು ಈ ಚಿತ್ರದಲ್ಲಿ ನಟಿಸಿದ್ದಾರೆ’ ಎಂದು ಚಿತ್ರದ ವಿವರ ನೀಡಿದರು ನಿರ್ದೇಶಕ ಜಯತೀರ್ಥ.

ನಾಯಕ ಧನ್ವೀರ್‌ಗೆ “ಕೈವ’ ಮೇಲೆ ನಿರೀಕ್ಷೆ ಇದೆ. “ಕೈವ, ನಾನು ನಾಯಕನಾಗಿ ನಟಿಸಿರುವ ನಾಲ್ಕನೇ ಚಿತ್ರ.ಈ ಕಥೆ ಎಲ್ಲ ಕಡೆ ಸುತ್ತಿ ಕೊನೆಗೆ ನನ್ನ ಬಳಿ ಬಂತು. ಜಯತೀರ್ಥ ಅವರು ತುಂಬಾ ಅದ್ಭುತವಾಗಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ನೋಡಿದವರು ಚಿತ್ರ ಚೆನ್ನಾಗಿದೆ ಎನ್ನುತ್ತಿದ್ದಾರೆ’ ಎಂದರು.

ದಿನಕರ್‌ ತೂಗುದೀಪ್‌ ಅವರು, “ನನ್ನ ಪಾತ್ರ ನೋಡಿದವರು ನಮ್ಮ ತಂದೆ ತೂಗುದೀಪ ಶ್ರೀನಿವಾಸ್‌ ಅವರ ಹಾಗೆ ಕಾಣುತ್ತಿರಾ ಎನ್ನುತ್ತಿದ್ದಾರೆ. ಅದು ನಮ್ಮ ತಂದೆಯವರ ಆಶೀರ್ವಾದ. ನಮ್ಮ ಅಮ್ಮ ಕೂಡ ನನ್ನ ಪಾತ್ರ ನೋಡಿ ಸಂತೋಷಪಟ್ಟರು’ ಎಂದು ಖುಷಿ ಹಂಚಕೊಂಡರು.

ನಾಯಕಿ ಮೇಘ ಶೆಟ್ಟಿ ಹಾಗೂ ಇಡೀ ತಂಡ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿತು. ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ನಟ ರಾಘು ಶಿವಮೊಗ್ಗ, ಸಂಭಾಷಣೆಕಾರ ರಘು ನಿಡವಳ್ಳಿ ಹಾಗೂ ಕಾರ್ಯಕಾರಿ ನಿರ್ಮಾಪಕರಾದ ಬಾಲಕೃಷ್ಣ ಹಾಗೂ ಕೃಷ್ಣ ಅವರು “ಕೈವ’ ಚಿತ್ರದ ಕುರಿತು ಮಾತನಾಡಿದರು.

ಸಂಕ್ರಾಂತಿ ಸಂಜೇಲಿ…

ಚಿತ್ರದ ಸಂಗೀತ ನಿರ್ದೇಶಕ ಅಜ ನೀಶ್‌ ಲೋಕನಾಥ್‌ ಹುಟ್ಟುಹಬ್ಬದ ದಿನದಂದೇ ಸಂಕ್ರಾಂತಿ ಸಂಜೇಲಿ ಹಾಡು ಬಿಡುಗಡೆಯಾಗಿದೆ. ಅಲ್ಲದೇ ಈ ಹಾಡಿಗೆ ಅಜನೀಶ್‌ ಅವರೇ ಧ್ವನಿಯಾಗಿರುವುದು ಮತ್ತೂಂದು ವಿಶೇಷ.

ಡಾ.ವಿ.ನಾಗೇಂದ್ರ ಪ್ರಸಾದ್‌ ಸಾಹಿತ್ಯದಲ್ಲಿ ಈ ಹಾಡು ಮೂಡಿಬಂದಿದೆ.

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.