Anish Tejeshwar; ‘ಮಾಯಾನಗರಿ’ಯಲ್ಲಿ ಲಚ್ಚಿ ಸದ್ದು
Team Udayavani, Nov 23, 2023, 4:07 PM IST
ಅನೀಶ್ ತೇಜೇಶ್ವರ್, ತೇಜು ಹಾಗೂ ಶ್ರಾವ್ಯರಾವ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ “ಮಾಯಾನಗರಿ’ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಲಕ್ಷಾಂತರ ಫಾಲೋವರ್ಸ್ ಹೊಂದಿರುವ 5 ವರ್ಷದ ಮಗು ನಿಶಿತಾ ಕೈಲಿ ಲಚ್ಚಿ ಹಾಡನ್ನು ಬಿಡುಗಡೆಗೊಳಿಸಲಾಯಿತು
ಈ ಚಿತ್ರಕ್ಕೆ ಶಂಕರ್ ಆರಾಧ್ಯ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಚಿತ್ರರಂಗದಲ್ಲಿ ನಡೆಯುವ ಒಂದಷ್ಟು ಸತ್ಯ ಘಟನೆಗಳನ್ನಿಟ್ಟುಕೊಂಡು ಶಂಕರ್ ಆರಾಧ್ಯ ಈ ಚಿತ್ರವನ್ನು ನಿರೂಪಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್, “ಈ ಹಾಡು ನಮ್ಮ ಚಿತ್ರಕ್ಕೆ ಟ್ರಂಪ್ ಕಾರ್ಡ್ ಆಗುತ್ತೆ ಅಂತ ಕಲರ್ ಫುಲ್ ಆಗಿಯೇ ಶೂಟ್ ಮಾಡಿದ್ದೇವೆ. ಕಂಠೀರವ ಸ್ಟುಡಿಯೋ ಹಾಗೂ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ 6 ದಿನ ಇದನ್ನು ಚಿತ್ರೀಕರಿಸಿದ್ದೇವೆ. ಹಾರರ್, ಆ್ಯಕ್ಷನ್, ಫ್ಯಾಮಿಲಿ ಸೆಂಟಿಮೆಂಟ್ ಕಥೆ ಇದಾಗಿದ್ದು, ಚಿತ್ರದಲ್ಲಿ ನಾಯಕ ಶಂಕರ್ ನಾಗ್ ಅಭಿಮಾನಿ, ಚಿತ್ರರಂಗದಲ್ಲಿ ದೊಡ್ಡ ನಿರ್ದೇಶಕನಾಗಬೇಕೆಂದು ಹೋರಾಟ ನಡೆಸುವ ಆತನಿಗೆ ಕೊನೆಗೂ ಒಂದು ಅವಕಾಶ ಸಿಕ್ಕಿ, ಮಾಯಾನಗರಿ ಎಂಬ ಸ್ಥಳಕ್ಕೆ ಹೋಗಬೆಕಾಗುತ್ತದೆ. ಆ ಊರಿಗೆ ಬರುವ ಆತ ಅಲ್ಲಿ ತಾನೇ ಪಾತ್ರವಾಗಬೇಕಾಗುತ್ತದೆ. ಹೀಗೆ ಕುತೂಹಲಕಾರಿಯಾಗಿ ಸಾಗುವ ಈ ಚಿತ್ರಕ್ಕೆ ಬೆಂಗಳೂರು, ಶಿವಮೊಗ್ಗ, ಸಾಗರ, ಚಿಕ್ಕಮಗಳೂರು, ಭದ್ರಾವತಿ ಸುತ್ತಮುತ್ತ ಸುಮಾರು 65 ದಿನಗಳ ಕಾಲ ಚಿತ್ರೀಕರಣ ಮಾಡಿದ್ದೇವೆ. ವಿಶೇಷವಾಗಿ ಹಿರಿಯ ನಟ ದ್ವಾರಕೀಶ್ ಅವರು ರಿಯಲ್ ಲೈಫ್ ಪಾತ್ರವನ್ನೇ ಮಾಡಿದ್ದಾರೆ’ ಎಂದು ಹೇಳಿದರು.
ನಾಯಕ ಅನೀಶ್ ಮಾತನಾಡಿ, “ನಾನು ತುಂಬಾ ಇಷ್ಟಪಟ್ಟು ಮಾಡಿದಂಥ ಪಾತ್ರವಿದು. ದ್ವಾರಕೀಶ್‌ರಂಥ ನಟರ ಜೊತೆ ನಟಿಸಿದ್ದು, ನನ್ನ ಅದೃಷ್ಟ. ಡೈರೆಕ್ಟರ್ ಆಗಬೇಕೆಂದು ಕನಸು ಕಾಣೋ ಹುಡುಗನ ಪಾತ್ರ ಮಾಡಿದ್ದೇನೆ’ ಎಂದರು.
ಚಿತ್ರದಲ್ಲಿ ನಾನು ಮಲ್ಲಿಕಾ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ತುಂಬಾ ಶೇಡ್ಸ್ ಇರುವ ಪಾತ್ರ ಎಂದರು ನಾಯಕಿ ಶ್ರಾವ್ಯಾ. ಸ್ಯಾಂಡಲ್ ವುಡ್ ಪಿಕ್ಚರ್ಸ್ ಬ್ಯಾನರ್ ಅಡಿ, ನಿರ್ಮಾಣವಾಗಿರುವ ಈ ಚಿತ್ರಕ್ಕೆ ಶ್ವೇತಾ ಶಂಕರ್ ಸಹ ನಿರ್ಮಾಣವಿದೆ.
ಶರತ್ ಲೋಹಿತಾಶ್ವ, ಅವಿನಾಶ್, ಸುಚೇಂದ್ರ ಪ್ರಸಾದ್, ಎಡಕಲ್ಲು ಗುಡ್ಡದ ಚಂದ್ರಶೇಖರ್, ಚಿಕ್ಕಣ್ಣ, ಗಿರಿ ದಿನೇಶ್ ಹಾಗೂ ನಿಹಾರಿಕಾ ಚಿತ್ರದ ತಾರಾಬಳಗದಲ್ಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.