Finalನಲ್ಲಿ ಭಾರತ ಗೆದ್ದಿದರೆ ಅದು ಕ್ರಿಕೆಟ್ ಆಟದ ದುಃಖದ ದಿನವಾಗಿರುತ್ತಿತ್ತು: ರಜಾಕ್
Team Udayavani, Nov 24, 2023, 10:33 AM IST
ಕರಾಚಿ: ಪಾಕಿಸ್ತಾನದ ಕ್ರಿಕೆಟಿಗರು ಟೀಮ್ ಇಂಡಿಯಾದ ಮೇಲೆ ಸದಾ ಅಪಾದನೆಗಳನ್ನು ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಮಾತನಾಡಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಪಾಕ್ ಮಾಜಿ ಕ್ರಿಕೆಟಿಗ ಅಬ್ದುಲ್ ರಜಾಕ್ ಇದೀಗ ಮತ್ತೊಂದು ಹೇಳಿಕೆ ನೀಡಿದ್ದಾರೆ.
ಟಿವಿ ಕಾರ್ಯಕ್ರಮವೊಂದರಲ್ಲಿ ಭಾರತ ವಿಶ್ವಕಪ್ ಫೈನಲ್ ನಲ್ಲಿ ಸೋತ ಬಗ್ಗೆ ಅವರು ವ್ಯಂಗ್ಯವಾಗಿ ಮಾತನಾಡಿದ್ದು, ಭಾರತೀಯರ ಆಕ್ರೋಶಕ್ಕೆ ಕಾರಣವಾಗಿದೆ.
“ಇಂಡಿಯಾದವರು ಅತಿಯಾದ ವಿಶ್ವಾಸದಲ್ಲಿದ್ದರು. ಫೈನಲ್ ನಲ್ಲಿ ಕ್ರಿಕೆಟ್ ಗೆದ್ದಿತು. ಭಾರತ ಸೋತಿತು. ಒಂದು ವೇಳೆ ಭಾರತ ಗೆದ್ದಿದರೆ ಅದು ಕ್ರಿಕೆಟ್ ಆಟದ ದುಃಖದ ದಿನವಾಗಿರುತ್ತಿತ್ತು. ಭಾರತದವರು ತಮ್ಮ ಅನುಕೂಲಕ್ಕೆ ತಕ್ಕ ಪಿಚ್ ಕಂಡಿಷನ್ ಬಳಸಿಕೊಳ್ಳುತ್ತಿದ್ದರು. ಫೈನಲ್ ಪಂದ್ಯದ ಪಿಚ್ ನ್ನು ನಾನು ಇದುವರೆಗೆ ನೋಡೇ ಇಲ್ಲ. ಭಾರತ ಸೋತಿದ್ದರಿಂದ ಕ್ರಿಕೆಟ್ ಗೆ ಒಳ್ಳೆದಾಯಿತು” ಎಂದು ಹೇಳಿದ್ದಾರೆ.
ಸದ್ಯ ಅಬ್ದುಲ್ ರಜಾಕ್ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಹಲವರು ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.