Bangalore: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ
Team Udayavani, Nov 24, 2023, 2:03 PM IST
ಬೆಂಗಳೂರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ರಾಮನಗರ ಮೂಲದ ರಾಧಾ(24) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಈ ಸಂಬಂಧ ಆಕೆಯ ಪೋಷಕರು ರಾಧಾ ಪತಿ ರವಿ ಮತ್ತು ಆತನ ಕುಟುಂಬದ ವಿರುದ್ಧ ವರದಕ್ಷಿಣಿ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರವಿ ಎರಡು ವರ್ಷಗಳ ಹಿಂದೆ ರಾಮನಗರ ಮೂಲದ ರಾಧಾರನ್ನು ಮದುವೆಯಾಗಿದ್ದ. ಆರಂಭದಲ್ಲಿ ಉತ್ತಮವಾಗಿದ್ದ ದಂಪತಿ, ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿದೆ. ಪ್ರತಿ ನಿತ್ಯ ಮನೆಯಲ್ಲಿ ಜಗಳ ಮಾಡುತ್ತಿದ್ದರು. ಬುಧವಾರ ರಾತ್ರಿ ಕೂಡ ಇಬ್ಬರ ನಡುವೆ ಜಗಳ ಉಂಟಾಗಿದೆ. ಅದರಿಂದ ಬೇಸತ್ತ ಆಕೆ, ಮನೆಯ ಕೊಠಡಿಯ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮರಣೋತ್ತರ ವರದಿ ಬಂದ ಬಳಿಕ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದು ಗೊತ್ತಾಗಲಿದೆ. ಸದ್ಯ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.