Crime News ಕಾಸರಗೋಡು ಅಪರಾಧ ಸುದ್ದಿಗಳು


Team Udayavani, Nov 25, 2023, 10:16 PM IST

Crime News ಕಾಸರಗೋಡು ಅಪರಾಧ ಸುದ್ದಿಗಳು

ನೇಣು ಬಿಗಿದು ಯುವಕ ಆತ್ಮಹತ್ಯೆ
ಮುಳ್ಳೇರಿಯ: ಕಾನಕ್ಕೋಡಿನ ಬಾಡಿಗೆ ಮನೆಯಲ್ಲಿ ವಾಸಿಸುವ ರಂಜಿತ್‌ (37) ಅವರು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮರ ಕಡಿಯುವ ಕಾರ್ಮಿಕರಾಗಿರುವ ರಂಜಿತ್‌ ಮೂಲತಃ ಆಲಂಪಾಡಿ ನಿವಾಸಿಯಾಗಿದ್ದು, ಇತ್ತೀಚೆಗೆ ಕಾನಕ್ಕೋಡಿನಲ್ಲಿ ಕುಟುಂಬ ಸಹಿತ ವಾಸ್ತವ್ಯ ಹೂಡಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆದೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೊಳೆಗೆ ಹಾರಿದ್ದ ವ್ಯಾಪಾರಿಯ ಮೃತದೇಹ ಪತ್ತೆ
ಕಾಸರಗೋಡು: ಚಂದ್ರಗಿರಿ ಸೇತುವೆಯ ಬದಿ ಕಾರು, ಪಾದರಕ್ಷೆ ಬಿಟ್ಟು ಹೊಳೆಗೆ ಹಾರಿದ ಶಿರಿಬಾಗಿಲು ರಹ್ಮತ್‌ನಗರದ ನಿವಾಸಿ, ಕಾಸರಗೋಡು ನಗರದಲ್ಲಿ ಹೊಟೇಲ್‌ ನಡೆಸುತ್ತಿರುವ ಹಸೈನಾರ್‌ (46) ಅವರ ಮೃತ ದೇಹ ಶನಿವಾರ ಬೆಳಗ್ಗೆ ತಳಂಗರೆಯ ಹೊಸ ಹಾರ್ಬರ್‌ ಪರಿಸರದಲ್ಲಿ ಪತ್ತೆಯಾಯಿತು.

ಮೃತದೇಹವನ್ನು ಕಾಸರಗೋಡು ಜನರಲ್‌ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ನ. 23ರಂದು ರಾತ್ರಿ ಹೊಳೆಗೆ ಹಾರಿದ್ದರು.

ಎಸ್‌.ಐ., ಪೊಲೀಸರಿಗೆ ಹಲ್ಲೆ : ಕೇಸು ದಾಖಲು
ಪೆರ್ಲ: ಹತ್ಯೆ ಯತ್ನ ಪ್ರಕರಣದ ಆರೋಪಿಯನ್ನು ಬಂಧಿಸಲು ಹೋಗಿದ್ದ ಪೊಲೀಸರಿಗೆ ಹಲ್ಲೆ ಮಾಡಿದ ಘಟನೆ ನಡೆದಿದ್ದು, ಈ ಸಂಬಂಧ ಎಂಟು ಮಂದಿ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ.

ನ. 23ರಂದು ರಾತ್ರಿ ಪೆರ್ಲ ಚೆಕ್‌ಪೋಸ್ಟ್‌ ಪರಿಸರದಲ್ಲಿ ಈ ಘಟನೆ ನಡೆದಿದೆ. ಪೆರ್ಲ ನಲ್ಕ ಹೌಸ್‌ನ ಬಿ.ಮೊದೀನ್‌ ಕುಂಞಿ ಅವರಿಗೆ ಕಾರು ಢಿಕ್ಕಿ ಹೊಡೆಸಿ ಕೊಲೆಗೈಯ್ಯಲು ಯತ್ನಿಸಿದ ಆರೋಪಿ ನೌಶಾದ್‌ನನ್ನು ಬಂಧಿಸಲು ಹೋಗಿದ್ದ ಬದಿಯಡ್ಕ ಠಾಣೆ ಎಸ್‌.ಐ. ಎನ್‌.ಅನ್ಸಾರ್‌ ಹಾಗೂ ಇತರ ಪೊಲೀಸರಿಗೆ ಹಲ್ಲೆ ಮಾಡಲಾಗಿತ್ತು. ಘಟನೆಗೆ ಸಂಬಂಧಿಸಿ ಕತ್ತಿ ನೌಶಾದ್‌ ಮತ್ತು ಕಾರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಮದ್ಯ ಸಾಗಾಟ : ಆರೋಪಿ ಠಾಣೆಗೆ ಹಾಜರು
ಮಂಜೇಶ್ವರ: ಪೊಲೀಸರನ್ನು ಕಂಡು ಮದ್ಯ, ಸ್ಕೂಟರ್‌ ಬಿಟ್ಟು ಪರಾರಿಯಾದ ಆರೋಪಿ ಕಣ್ವತೀರ್ಥ ನಿವಾಸಿ ಭವಿಷ್‌ (39) ಪೊಲೀಸ್‌ ಠಾಣೆಗೆ ಹಾಜರಾಗಿದ್ದಾನೆ. ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ. 15ರಂದು ಕಣ್ವತೀರ್ಥದಲ್ಲಿ ಸ್ಕೂಟರ್‌, ಮದ್ಯ ಬಿಟ್ಟು ಪರಾರಿಯಾಗಿದ್ದನು. 90 ಮಿಲ್ಲಿಯ 320 ಪ್ಯಾಕೆಟ್‌ ಮದ್ಯ ಸ್ಕೂಟರ್‌ನಲ್ಲಿ ಪತ್ತೆಯಾಗಿತ್ತು.

ಕಾಪಾ ಪ್ರಕಾರ ಯುವಕನ ಬಂಧನ
ಕಾಸರಗೋಡು: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಹೊಸದುರ್ಗ ಕಲ್ಯಾಣ ರಸ್ತೆಯ ಮುತ್ತನ್‌ಪಾರ ನಿರೋಕಿ ನಿವಾಸಿ ಎನ್‌. ಮನುರಾಜ್‌(27)ನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೊಲೆ ಯತ್ನ, ಹಲ್ಲೆ, ಮದ್ಯ ಸಾಗಾಟ ಮೊದಲಾದ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.

ಟಾಪ್ ನ್ಯೂಸ್

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

udupi-Kota-Mee

Udupi: ಕಸ್ತೂರಿ ರಂಗನ್‌ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ

siddanna-2

Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

GM-Pancha

Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ

KH-Muniyappa

Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.