Dharmasthala ಡಾ| ಡಿ. ವೀರೇಂದ್ರ ಹೆಗ್ಗಡೆ 76ನೇ ವರ್ಷಕ್ಕೆ ಪಾದಾರ್ಪಣೆ
Team Udayavani, Nov 25, 2023, 11:49 PM IST
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು 75 ವರ್ಷಗಳನ್ನು ಪೂರೈಸಿ 76ನೇ ವರ್ಷಕ್ಕೆ ಕಾಲಿಟ್ಟಿದ್ದು, ಶನಿವಾರ ಜನ್ಮದಿನಾಚರಣೆಯ ಹಿನ್ನೆಲೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಭಕ್ತಿಪೂರ್ವಕ ಶುಭಾಶಯ ಸಲ್ಲಿಸಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಎಸ್. ಸತೀಶ್ಚಂದ್ರ, ನಾಟೆಕಲ್ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ ಅಧ್ಯಕ್ಷ ಯು.ಕೆ. ಮೋನು, ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯ ಸಿಬಿಒ ಗೋಕುಲ್‌ದಾಸ್ ಪೈ, ಶಾಲಿನಿ ಜಿ. ಪೈ, ವಲಯ ಕಚೇರಿ ಡಿಜಿಎಂ ವಸಂತ್ ಹೆರ್ಲೆ, ಪುತ್ತೂರು ಕ್ಲಸ್ಟರ್ ಹೆಡ್ ಚೀಫ್ ಮ್ಯಾನೇಜರ್ ಶ್ರೀಹರಿ, ಉಜಿರೆ ಶಾಖೆಯ ಮ್ಯಾನೇಜರ್ ವಿನಾಯಕ ಪ್ರಭು, ಪೆರಿಂಜೆ ಶ್ರೀ ಪದ್ಮ ಕ್ಯಾಶ್ಯೂ ಇಂಡಸ್ಟ್ರೀಸ್‌ನ ವಿಕಾಸ್ ಜೈನ್, ಪೆರಿಂಜೆ ಅರಿಹಂತ್ ಇಂಡಸ್ಟ್ರೀಸ್‌ನ ವಿಶ್ವಾಸ್ ಜೈನ್ ಮೊದಲಾದ ಗಣ್ಯರು ಶುಭಾಶಯ ಸಲ್ಲಿಸಿದರು.
ಡಾ| ಹೆಗ್ಗಡೆಯವರ ಕುಟುಂಬದ ಸದಸ್ಯರು, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ವರ್ಗ, ದೇವಸ್ಥಾನದ ವಿವಿಧ ವಿಭಾಗಗಳ ಮುಖ್ಯಸ್ಥರು, ರುಡ್‌ಸೆಟ್ ಸಿಬಂದಿ ವರ್ಗ, ಕ್ಷೇತ್ರದ ವಿವಿಧ ಸಂಸ್ಥೆಗಳ ನೌಕರರು ಸೇರಿದಂತೆ ಸರ್ವರು ಹೆಗ್ಗಡೆಯವರನ್ನು ಗೌರವಿಸಿದರು.
ಶನಿವಾರ ಸಂಜೆಯ ಹೊತ್ತು ಹೆಗ್ಗಡೆಯವರ ಕುಟುಂಬದ ಸದ ಸ್ಯರು, ಹಿರಿಯ ಸಿಬಂದಿ ಸೇರಿ ಹಿಂದಿನ ಘಟನೆಗಳನ್ನು ಮೆಲುಕು ಹಾಕುವ ಸಮ್ಮಿಲನ ಕಾರ್ಯಕ್ರಮ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Udupi: ವಿಸಿಲ್ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್ ನಿರ್ವಹಣೆ!
Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ
Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.