BJP; ಸೋಮಣ್ಣ ಸಿದ್ಧಗಂಗಾ ಮಠದಲ್ಲಿ ರಾಜಕಾರಣ ಮಾಡಿದ್ದು ಸರಿಯಲ್ಲ: ರೇಣುಕಾಚಾರ್ಯ

ಅದೇನು ಚಾಡಿ ಹೇಳುತ್ತಾರೋ ಹೇಳಲಿ....

Team Udayavani, Nov 26, 2023, 8:18 PM IST

renukaacharya

ದಾವಣಗೆರೆ: ಮಾಜಿ ಸಚಿವ ವಿ. ಸೋಮಣ್ಣ ಅವರು ತುಮಕೂರಿನ ಸಿದ್ಧಗಂಗಾ ಮಠದಲ್ಲಿ ರಾಜಕಾರಣ ಮಾಡಿದ್ದು ಸರಿ ಅಲ್ಲ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆಕ್ರೋಶ ಹೊರ ಹಾಕಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೋಮಣ್ಣ ಅವರು ಬಿಜೆಪಿಯ ವಿಚಾರಗಳನ್ನು ಮಠದಲ್ಲಿ ಮಾತನಾಡುವ ಅವಶ್ಯಕತೆಯಾದರೂ ಏನಿತ್ತು ಎಂದು ಖಾರವಾಗಿ ಪ್ರಶ್ನಿಸಿದರು. ಜ.16 ರ ನಂತರ ದೆಹಲಿಗೆ ಹೋಗುವುದಾಗಿ ಸೋಮಣ್ಣ ಅವರು ಹೇಳುತ್ತಿದ್ದಾರೆ. ಹೋಗುವುದಾದರೆ ಹೋಗಲಿ. ಅಲ್ಲಿ ನಾಯಕರಿಗೆ ಅದೇನು ಚಾಡಿ ಹೇಳುತ್ತಾರೋ ಹೇಳಲಿ. ಅವರೊಬ್ಬರಿಗೆ ಅಲ್ಲ ನಮಗೂ ದೆಹಲಿ ನಾಯಕರು ಗೊತ್ತು. ನಾವೂ ಸಹ ದೆಹಲಿಗೆ ಹೋಗುತ್ತೇವೆ ಎಂದರು.

ರಾಜ್ಯದಲ್ಲಿ ಬಿಜೆಪಿಯನ್ನೇ ಕೇಳದ ಸ್ಥಿತಿಯಲ್ಲಿ ಯಡಿಯೂರಪ್ಪ ಅವರು ಸೈಕಲ್‌ನಲ್ಲಿ ರಾಜ್ಯವನ್ನೆಲ್ಲ ಸುತ್ತಾಡಿ ಪಕ್ಷ ಕಟ್ಟಿ ಬೆಳೆಸಿದವರು. ಅವರು ನನಗೆ ಹೊಡೆದರೂ ಪರವಾಗಿಲ್ಲ. ಯಾರೇ ಆಗಲಿ ಯಡಿಯೂರಪ್ಪ ಅವರ ಬಗ್ಗೆ ಮಾತನಾಡಿದರೆ ಸಹಿಸುವ ಮಾತೇ ಇಲ್ಲ. ನಾನೂ ಮಾತನಾಡುತ್ತೇನೆ. ವಿನಾಕಾರಣ ಯಡಿಯೂರಪ್ಪ ಅವರ ವಿರುದ್ಧ ಮಾತನಾಡುವುದನ್ನ ಸಹಿಸುವುದೇ ಇಲ್ಲ ಎಂದು ಗುಡುಗಿದರು.

ದಕ್ಷಿಣ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಬಿಜೆಪಿಯನ್ನ ಅಧಿಕಾರಕ್ಕೆ ತಂದವರೇ ಯಡಿಯೂರಪ್ಪ ಅವರು. ಅವರೇನು ರೆಡಿಮೇಡ್ ಫುಡ್ ಅಲ್ಲ. ಪಕ್ಷವನ್ನ ಕಟ್ಟಿ, ಬೆಳೆಸಿರುವಂತಹವರು ಎಂದು ತಿಳಿಸಿದರು.

ಸೋಮಣ್ಣ ಕಾಂಗ್ರೆಸ್‌ನಲ್ಲಿ ಇದ್ದಂತಹವರು. ಅವರಿಂದ ಪಕ್ಷ ಅಧಿಕಾರಕ್ಕೆ ಬಂದಿಲ್ಲ. ಕಾಂಗ್ರೆಸ್ ಬಿಟ್ಟು ಬಂದಿದ್ದರೂ ಅವರನ್ನ ಎರಡು ಬಾರಿ ಮಂತ್ರಿ ಮಾಡಲಾಯಿತು. ಸೋತಾಗ ಪರಿಷತ್ತು ಸದಸ್ಯರನ್ನಾಗಿ ಮಾಡಿದ್ದು ಯಡಿಯೂ ರಪ್ಪ ಅವರು ಮಾಡಿರುವ ತಪ್ಪಾ, ನಿರಂತರವಾಗಿ ಅಽಕಾರ ಅನುಭವಿಸಿ ಈಗ ಯಡಿಯೂರಪ್ಪ ಬಗ್ಗೆ ಕೀಳು ಮಟ್ಟದ ಭಾಷೆ ಬಳಸುತ್ತೀರಾ ಎಂದು ಪ್ರಶ್ನಿಸಿದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿನ ಸೋಲು ಕಂಡೇ ದೆಹಲಿ ನಾಯಕರು ವಿಜಯೇಂದ್ರ ಅವರಿಗೆ ರಾಜ್ಯ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾಗಿದ್ದಕ್ಕೆ ರಾಜ್ಯವ್ಯಾಪಿ ಪಕ್ಷಕ್ಕೆ ಹೆಚ್ಚು ಬಲ ಬಂದಂತಾಗಿದೆ ಎಂದು ತಿಳಿಸಿದರು.

ಸೋಮಣ್ಣ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿರುವುದನ್ನ ಅವಮಾನಿಸುತ್ತಿದ್ದಾರೆ. ಅವರು ನನಗೆ ಹಿರಿಯಣ್ಣನ ಸಮಾನ. ಈಗಲೂ ಬಾರಲೇ… ತಮ್ಮ ಅಂತಲೇ ಮಾತನಾಡುವ ಸೋಮಣ್ಣ ನನ್ನ ಕ್ಷೇತ್ರಕ್ಕೆ ಸಾಕಷ್ಟು ಮನೆ ನೀಡಿದ್ದಾರೆ. ಏನೇ ಸಮಸ್ಯೆ ಇದ್ದರೂ ಪಕ್ಷದಲ್ಲಿ ಕುಳಿತು ಚರ್ಚಿಸಲಿ. ಅದನ್ನು ಬಿಟ್ಟು, ಹಾದಿ ರಂಪ, ಬೀದಿ ರಂಪ ಮಾಡುವುದು ಸರಿಯಲ್ಲ. ಮನೆಯನ್ನು ಕೂಡಿಸುವ ಕೆಲಸ ಮಾಡಲಿ. ಮನೆ ಒಡೆಯುವ ಕೆಲಸ ಬೇಡ ಎಂದು ಸೋಮಣ್ಣಗೆ ಮನವಿ ಮಾಡುವುದಾಗಿ ತಿಳಿಸಿದರು.

ಜಾತಿಗಣತಿಗೆ ವಿರೋಧ : ಗಂಭೀರವಾಗಿ ಪರಿಗಣಿಸಬೇಕು

ಜಾತಿಗಣತಿ ಬಗ್ಗೆ ವೀರಶೈವ ಲಿಂಗಾಯತ, ಒಕ್ಕಲಿಗ ಸೇರಿದಂತೆ ವಿವಿಧ ಸಮಾಜ ಮತ್ತು ಅನೇಕ ಸಚಿವರು, ಶಾಸಕರು ಪಕ್ಷಾತೀತವಾಗಿ ವಿರೋಧಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.

ವೈಯಕ್ತಿಕವಾಗಿಯೂ ನನ್ನ ವಿರೋಧ ಇದೆ. ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿರುವ ಜಾತಿ ಗಣತಿ ಕೈಬಿಟ್ಟು, ಹೊಸದಾಗಿ ವೈಜ್ಞಾನಿಕವಾಗಿ, ವ್ಯವಸ್ಥಿತವಾಗಿ ಜಾತಿ ಗಣತಿ ಕಾರ್ಯ ನಡೆಸಲಿ. ಅವಸರದಲ್ಲಿ ವರದಿ ಅಂಗೀಕರಿಸುವ ದುಸ್ಸಾಹಸ ಮಾಡಬಾರದು ಎಂದು ಒತ್ತಾಯಿಸಿದರು.

ವೀರಶೈವ ಲಿಂಗಾಯತ, ಒಕ್ಕಲಿಗ ಸೇರಿದಂತೆ ಎಲ್ಲ ಜಾತಿ, ಜನಾಂಗಗಳಲ್ಲೂ ಆರ್ಥಿಕವಾಗಿ ಹಿಂದುಳಿದವರು, ಕಡು ಬಡವರು ಇದ್ದಾರೆ. ತರಾತುರಿಯಲ್ಲಿ ಜಾತಿಗಣತಿ ವರದಿ ಅಂಗೀಕರಿಸುವ ಕೆಲಸವನ್ನ ಸರ್ಕಾರ ಮಾಡ ಬಾರದು. ಗಾಜಿನ ಮನೆಯಲ್ಲಿ ಕುಳಿತು ವರದಿ ತಯಾರಿಸಿದ್ದಾರೆ. ಇನ್ನೂ ಐದಾರು ತಿಂಗಳಾಗಲಿ ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ, ವೈಜ್ಞಾನಿಕವಾಗಿ ಜಾತಿಗಣತಿ ಆಗಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.