Belagavi: ಪಾಲಿಕೆ ಸದಸ್ಯ ಅಭಿಜಿತ್ ಜವಳಕರ್ ಬಂಧನ
Team Udayavani, Nov 27, 2023, 10:57 AM IST
ಬೆಳಗಾವಿ: ಇಲ್ಲಿನ ಭಾಗ್ಯ ನಗರದ 9ನೇ ಕ್ರಾಸ್ ಮನೆಯ ಮೇಲೆ ಮೊಬೈಲ್ ಟವರ್ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ರಮೇಶ ಪಾಟೀಲ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ ಜವಳಕರ್ ಅವರನ್ನು ಟಿಳಕವಾಡಿ ಠಾಣೆ ಪೊಲೀಸರು ಭಾನುವಾರ ತಡರಾತ್ರಿ ಬಂಧಿಸಿದ್ದಾರೆ.
ಮನೆಯ ಮೇಲೆ ಮೊಬೈಲ್ ಟವರ್ ಅಳವಡಿಸುವದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ ರಮೇಶ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅಭಿಜಿತ ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಸ್.ಎನ್. ಸಿದ್ರಾಮಪ್ಪ ತಿಳಿಸಿದರು.
ಅಭಿಜಿತ ಬಂಧನಕ್ಕೆ ಒತ್ತಾಯಿಸಿ ಶ್ರೀರಾಮ ಸೇನೆ ಹಿಂದೂಸ್ಥಾನ್ ಸಂಘಟನೆ ಕಾರ್ಯಕರ್ತರು ಭಾನುವಾರ ಸಂಜೆ ಟಿಳಕವಾಡಿ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.
ಈ ಮಧ್ಯೆ ಪಾಲಿಕೆಯ ಬಿಜೆಪಿ ಸದಸ್ಯ ಅಭಿಜಿತ್ ಬಂಧನದ ಬಗ್ಗೆ ವಿಚಾರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾಜಿ ಶಾಸಕ ಅನಿಲ ಬೆನಕೆ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಬಂಧಿತ ಅಭಿಜಿತ್ ಅವರನ್ನು ಕೂಡಲೇ ಬಿಡುಗಡೆ ಮಾಡದಿದ್ದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.