Minister ನಾಗೇಂದ್ರ ಮೇಲಿನ ಕೇಸ್ ವಾಪಸ್ ಪಡೆಯುತ್ತೀರಾ?: ಸಿಎಂಗೆ ಗಾಲಿ ರೆಡ್ಡಿ ಚಾಲೆಂಜ್
ಆರ್.ಅಶೋಕ್ 16 ಮಂದಿ ಬಿಜೆಪಿ ನಾಯಕರಿಗೆ ಅವಮಾನ ಮಾಡುತ್ತಿದ್ದಾರೆ...
Team Udayavani, Nov 27, 2023, 5:58 PM IST
ಗಂಗಾವತಿ:ಸಿಎಂ ಸಿದ್ದರಾಮಯ್ಯ ಅವರೇ ಈ ಹಿಂದೆ ಸಚಿವ ಬಿ.ನಾಗೇಂದ್ರ ಅವರ ಮೇಲೆ ಹಾಕಿದ ಕೇಸ್‌ಗಳು ಮತ್ತು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಕೆಆರ್‌ಪಿ ಪಕ್ಷ ರಾಜ್ಯಾಧ್ಯಕ್ಷ ಹಾಗೂ ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿ ಚಾಲೆಂಜ್ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ”ದ್ವೇಷದ ಕಾರಣಕ್ಕಾಗಿ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ ಮನವಿ ಹಿನ್ನೆಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕೇಸ್ ಹಾಕಲು ಪರವಾನಿಗೆ ನೀಡಿದ್ದರಿಂದ ಈಗ ರಾಜ್ಯ ಸರಕಾರದ ಪರವಾನಿಗೆ ವಾಪಸ್ ಪಡೆಯಲಾಗಿದೆ ಎಂದು ಸಿದ್ದರಾಮಯ್ಯ ಸೇರಿ ಸರಕಾರದ ಸಚಿವರು ಪದೇ ಪದೇ ಹೇಳಿಕೆ ಕೊಡುತ್ತಿದ್ದಾರೆ. ಮಾತೆತ್ತಿದರೆ ಅಹಿಂದ ವರ್ಗದ ಹಿತರಕ್ಷಕರೆಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಹಿಂದ ವಾಲ್ಮೀಕಿ ಜನಾಂಗದ ನಾಯಕ ಹಾಗೂ ಸಚಿವ ಬಿ.ನಾಗೇಂದ್ರ ಮತ್ತು ನನ್ನ ಮೇಲೆ ಸಿಬಿಐ ಕೇಸ್ ಹಾಕಲು ಪರವಾನಿಗೆ ನೀಡಿದ್ದನ್ನು ಕೂಡಲೇ ವಾಪಸ್ ಪಡೆದು ಅಹಿಂದ ಹಿತ ರಕ್ಷಕ ಎಂದು ಸಾಬೀತು ಮಾಡಲಿ” ಎಂದರು.
ನಾಗೇಂದ್ರ ಅವರ ಮೇಲೆ ಹಾಕಿರುವ ಕೇಸ್ ವಾಪಸ್ ಪಡೆಯುತ್ತಿರಾ ಅಥವಾ ಅವರನ್ನು ಸಚಿವ ಸಂಪುಟ ದಿಂದ ತೆಗೆದುಹಾಕುತ್ತಿರಾ ಎನ್ನುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಡಬೇಕಿದೆ. ಮೋದಿಯವರೇ ನನ್ನನ್ನು ನೋಡಿ ಹೆದರಿಕೊಳ್ಳುತ್ತಾರೆಂದು ಹೇಳುವ ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಅವರಿಗೆ ಹೆದರುವುದಿಲ್ಲ. ಅವರು ಬಹಳ ಸ್ಟ್ರಾಂಗ್ ಸಿಎಂ ಆಗಿದ್ದಾರೆ. ಹೈಕಮಾಂಡ್ ಒತ್ತಡವೋ, ಡಿಕೆ ಅವರ ಮೇಲಿನ ಪ್ರೀತಿನೋ ಗೊತ್ತಿಲ್ಲ ಎಂದರು.
20 ಕೇಸ್‌ಗಳು ಸಚಿವ ನಾಗೇಂದ್ರ ಮೇಲೆ ಇವೆ. ನನ್ನ ಮತ್ತು ನಾಗೇಂದ್ರ ಮೇಲೆ ಹಾಕಿದ ಕೇಸ್‌ಗಳನ್ನು ವಾಪಸ್ ಪಡೆಯುತ್ತೀರೋ ಸಿಎಂ ಕೂಡಲೇ ಸ್ಪಷ್ಟಪಡಿಸಬೇಕು. ಡಿಕೆ ಶಿವಕುಮಾರ್ ಅವರಿಗೊಂದು ನ್ಯಾಯ, ನನಗೆ ಮತ್ತು ಸಚಿವ ನಾಗೇಂದ್ರ ಅವರಿಗೊಂಡು ನ್ಯಾಯವೇ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ತೀವ್ರ ಬರಗಾಲವಿದ್ದ ಸಂದರ್ಭದಲ್ಲಿ ಸಿಎಂ ಡಿಸಿಎಂ ಹಾಗೂ ಸಚಿವರು ಮತ್ತು ಬಿಜೆಪಿಯವರು ತೆಲಗಾಣ ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ತೆರಳಿರುವುದು ದುಃಖದ ಸಂಗತಿಯಾಗಿದೆ. ಈಗಾಗಲೇ ಬಿಜೆಪಿಯ 16 ಜನ ನಾಯಕರು ಬರಗಾಲ ಅಧ್ಯಯನ ಮಾಡಿ ವರದಿ ನೀಡಿದ್ದಾರೆ.ಇದೀಗ ವಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಆರ್. ಅಶೋಕ್ ಬರಗಾಲ ವೀಕ್ಷಣೆ ಮಾಡಿ ವರದಿ ನೀಡಲು ಸಿದ್ಧತೆ ನಡೆಸಿದ್ದಾರೆ. ಬಿಜೆಪಿ 16 ನಾಯಕರ ವರದಿ ಸರಿಯಲ್ಲ ಎಂದರ್ಥವಾಯಿತು. ಆರ್.ಅಶೋಕ್ 16 ನಾಯಕರಿಗೆ ಅವಮಾನ ಮಾಡುತ್ತಿದ್ದಾರೆ ಎಂದರು.
ಜನರು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಂಬಬಾರದು. ಪ್ರತಿಯೊಂದನ್ನು ಚುನಾವಣ ದೃಷ್ಟಿಯಿಂದ ಅವರು ನೋಡುತ್ತಾರೆ. ಕೆಆರ್‌ಪಿ ಪಕ್ಷ ಬರವೀಕ್ಷಣೆ ಮಾಡಿ ಸರಕಾರಕ್ಕೆ ನೈಜ ವರದಿ ಸಲ್ಲಿಸಲಿದೆ ಎಂದು ರೆಡ್ಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.