Bhiwani; ಶೂಟ್ ಮಾಡಲು ಬಂದ ದುಷ್ಕರ್ಮಿಗಳಿಗೆ ಪೊರಕೆಯಿಂದ ಓಡಿಸಿದ ಮಹಿಳೆ; VIDEO
Team Udayavani, Nov 28, 2023, 2:10 PM IST
ಹೊಸದಿಲ್ಲಿ: ಲಾರೆನ್ಸ್ ಗ್ಯಾಂಗ್ ದರೋಡೆಕೋರ ರವಿ ಬಾಕ್ಸರ್ ಹತ್ಯೆ ಪ್ರಕರಣದ ಆರೋಪಿ ಹರಿಕಿಶನ್ ಅಲಿಯಾಸ್ ಹರಿಯಾ ಎಂಬಾತನ ಮೇಲೆ ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಸೋಮವಾರ ಬೆಳಗ್ಗೆ ನಡೆಸಿದ ಗುಂಡಿನ ದಾಳಿಗೆ ಭಿವಾನಿಯ ದಬರ್ ಕಾಲೋನಿ ತತ್ತರಿಸಿ ಹೋಗಿದೆ.
ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದ ಹರಿಯಾ ಮೇಲೆ ನಾಲ್ಕು ಬಾರಿ ಗುಂಡು ಹಾರಿಸಿದ್ದು, ಅವರನ್ನು ರೋಹ್ಟಕ್ ನಲ್ಲಿರುವ ಪಿಜಿಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ.
ಆದರೆ ಘಟನೆಯ ಬಗೆಗಿನ ವಿಡಿಯೋವೊಂದು ಇದೀಗ ಭಾರಿ ವೈರಲ್ ಆಗುತ್ತಿದೆ. ಹರಿಯಾ ನೆರೆಮನೆಯ ಮಹಿಳೆಯೊಬ್ಬರು ಕೈಯಲ್ಲಿ ಪೊರಕೆ ಹಿಡಿದು ಶೂಟ್ ಮಾಡಲು ಬಂದ ದುಷ್ಕರ್ಮಿಗಳನ್ನು ಎದುರಿಸಿದ ವಿಡಿಯೋ ಈಗ ಸಾಮಾಜಿಕ ಜಾಲಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಮಹಿಳೆಯ ಧೈರ್ಯದ ಕಾರ್ಯಕ್ಕೆ ಸಾಮಾಜಿಕ ಜಾಲತಾಣದ ಜನತೆ ಶಹಭಾಸ್ ಗಿರಿ ಕೊಟ್ಟಿದ್ದಾರೆ.
ಇದನ್ನೂ ಓದಿ:UP: ಬುರ್ಖಾ ಧರಿಸಿಕೊಂಡು ಫ್ಯಾಷನ್ ಶೋನಲ್ಲಿ ಭಾಗಿಯಾದ ವಿದ್ಯಾರ್ಥಿನಿಯರು; ಸಂಘಟನೆ ಗರಂ
ಹರಿಯಾ ಮನೆಯ ಹೊರಗೆ ನಿಂತಿದ್ದಾಗ ಎರಡು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬೈಕ್ ನಿಲ್ಲಿಸಿ ಗುಂಡು ಹಾರಿಸಿದ್ದಾರೆ. ಕೂಡಲೇ ಹರಿಯಾ ಮನೆಯ ಗೇಟ್ ಒಳಗೆ ಓಡಿದ್ದಾರೆ. ಗುಂಡಿನ ಶಬ್ದ ಕೇಳಿದ ಓಡಿ ಬಂದ ಮಹಿಳೆ ತನ್ನ ಕೈಯಲ್ಲಿ ಕೋಲು ಕಟ್ಟಿದ್ದ ಪೊರಕೆಯನ್ನು ದುಷ್ಕರ್ಮಿಗಳತ್ತ ಬೀಸಿದ್ದಾರೆ. ದುಷ್ಕರ್ಮಿಗಳು ಗುಂಡಿನ ದಾಳಿ ನಿಲ್ಲಿಸಿದ್ದು ಮಾತ್ರವಲ್ಲದೆ, ಬೈಕ್ ಏರಿ ಪರಾರಿಯಾಗಿದ್ದಾರೆ.
Four to five miscreants riding on two bikes opened fire on a person standing outside his house in #Bhiwani district of #Haryana. pic.twitter.com/4AJuOBe8Vc
— Hate Detector 🔍 (@HateDetectors) November 27, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.