World Cup ಫೈನಲ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ
Team Udayavani, Nov 28, 2023, 5:38 PM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ವಿಶ್ವವಿದ್ಯಾನಿಲಯವೊಂದರ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಮತ್ತು ಏಕದಿನ ವಿಶ್ವಕಪ್ ಫೈನಲ್ ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲಿಗೆ ಸಂಭ್ರಮಾಚರಿಸಿದ ಆರೋಪದಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಬಂಧಿತ ಕಾಶ್ಮೀರಿ ವಿದ್ಯಾರ್ಥಿಗಳು ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (SKUAST) ದಲ್ಲಿ ಓದುತ್ತಿದ್ದಾರೆ. UAPA ಮತ್ತು ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳ ಬಂಧನವನ್ನು “ಆಘಾತಕಾರಿ” ಎಂದು ಬಣ್ಣಿಸಿದ್ದಾರೆ. ಅಲ್ಲದೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರನ್ನು ಈ ಸಮಸ್ಯೆಯನ್ನು ಪರಿಶೀಲಿಸುವಂತೆ ವಿನಂತಿಸಿದ್ದಾರೆ.
“ವಿಜೇತ ತಂಡಕ್ಕಾಗಿ ಹುರಿದುಂಬಿಸುವುದನ್ನು ಸಹ ಕಾಶ್ಮೀರದಲ್ಲಿ ಅಪರಾಧೀಕರಿಸಲಾಗಿದೆ ಎಂದು ಅಸಮಾಧಾನ ಮತ್ತು ಆಘಾತಕಾರಿಯಾಗಿದೆ. ಪತ್ರಕರ್ತರು, ಕಾರ್ಯಕರ್ತರು ಮತ್ತು ಈಗ ವಿದ್ಯಾರ್ಥಿಗಳ ಮೇಲೆ UAPA ಯಂತಹ ಕಠಿಣ ಕಾನೂನುಗಳನ್ನು ಸಾಮಾನ್ಯಗೊಳಿಸುವುದು ಜಮ್ಮು ಕಾಶ್ಮೀರದಲ್ಲಿನ ಯುವಕರ ಕಡೆಗೆ ನಿರ್ದಯ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ” ಎಂದು ಮುಫ್ತಿ ಹೇಳಿದ್ದಾರೆ.
ಇದನ್ನೂ ಓದಿ:Aamir Khan: ಮಾಲಿವುಡ್‌ನ “ಜಯ ಜಯ ಜಯ ಜಯ ಹೇ” ರಿಮೇಕ್ ನಲ್ಲಿ ಆಮಿರ್ ನಟನೆ?
“ಕ್ರೀಡೆ ಎಂದರೆ ಕ್ರೀಡೆ. ನಮ್ಮ ಪ್ರಧಾನಿಗಳು ಮತ್ತು ಅವರಿಗಿಂತ ಮೊದಲು ಅನೇಕರು ಪಂದ್ಯಗಳನ್ನು ವೀಕ್ಷಿಸಲು ಹೋಗಿದ್ದಾರೆ ಮತ್ತು ಉತ್ತಮವಾಗಿ ಆಡುವ ತಂಡವನ್ನು ಹುರಿದುಂಬಿಸುತ್ತಾರೆ, ಅವರು ಎದುರಾಳಿ ತಂಡವನ್ನು ಹುರಿದುಂಬಿಸುತ್ತಾರೆ. ಜಮ್ಮು ಕಾಶ್ಮೀರದಲ್ಲಿ ಅವರು ಇಲ್ಲಿ ವಿಷಯಗಳು ಸರಿಯಾಗಿವೆ ಎಂದು ಹೇಳಿಕೊಳ್ಳುತ್ತಾರೆ, ಆದರೆ ಕೆಲವು ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಗೆಲುವನ್ನು ಸಂಭ್ರಮಿಸಿದರೆ ಇಷ್ಟು ಭಯ ಯಾಕೆ ” ಎಂದು ಮುಫ್ತಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.