Politics: ಡಿಕೆಶಿ ಪ್ರಕರಣ- ಹೈಕೋರ್ಟ್ಗೆ ಯತ್ನಾಳ್ ಅರ್ಜಿ
- ಅಕ್ರಮ ಆಸ್ತಿ ಗಳಿಕೆ: ಇಂದು ಡಿಕೆಶಿ ಮೇಲ್ಮನವಿ ವಿಚಾರಣೆ
Team Udayavani, Nov 28, 2023, 10:13 PM IST
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಸಿಬಿಐ ತನಿಖೆಗೆ ಅನುಮತಿ ನೀಡಿ ಹಿಂದಿನ ಬಿಜೆಪಿ ಸರಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ತಾವು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಯತ್ನಾಳ್, ಪ್ರಕರಣದಲ್ಲಿ ತಮ್ಮ ವಾದವನ್ನು ಆಲಿಸುವಂತೆ ಕೋರಿದ್ದಾರೆ.
ಇಂದು ವಿಚಾರಣೆ
ಇದೇವೇಳೆ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಮೇಲ್ಮನವಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿರುವ ವಿಭಾಗೀಯ ನ್ಯಾಯಪೀಠದಲ್ಲಿ ನ. 29ರಂದು ವಿಚಾರಣೆಗೆ ಬರಲಿದೆ. ಇದೇ ಸಂದರ್ಭದಲ್ಲಿ ಯತ್ನಾಳ್ ಅವರ ಮಧ್ಯಂತರ ಅರ್ಜಿಯನ್ನು ಪರಿಗಣಿಸುವ ಸಾಧ್ಯತೆಯಿದೆ. ಹಿಂದಿನ ಬಿಜೆಪಿ ಸರಕಾರವು ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆವ ನಿರ್ಣಯವನ್ನು ನ. 23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿತ್ತು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ.
ಡಿಕೆಶಿ ವಿರುದ್ಧದ ತನಿಖೆಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆಯುವ ಮೂಲಕ ರಾಜ್ಯ ಸರಕಾರವು ಹೈಕೋರ್ಟ್ ವಿಚಾರಣೆಯನ್ನು ನಿಷ್ಫಲಗೊಳಿಸುವ ಪ್ರಯತ್ನ ಮಾಡುತ್ತಿದೆ. ಸಿಬಿಐ ಶೇ. 90ರಷ್ಟು ತನಿಖೆ ಪೂರ್ಣಗೊಳಿಸಿದೆ ಎಂದು ಇದೇ ಪ್ರಕರಣದ ವಿಚಾರಣೆ ನಡೆಸಿದ ಏಕ ಸದಸ್ಯ ನ್ಯಾಯಪೀಠ ತಿಳಿಸಿದೆ. ಈ ಹಂತದಲ್ಲಿ ಸರಕಾರ ಕೈಗೊಂಡಿರುವ ಕ್ರಮ ಸಿಬಿಐ ತನಿಖೆಯನ್ನು ಮೊಟಕುಗೊಳಿಸುತ್ತಿದೆ. ಆ ಮೂಲಕ ನ್ಯಾಯಾಂಗದ ಪ್ರಕ್ರಿಯೆಯಲ್ಲಿ ಸರಕಾರ ಹಸ್ತಕ್ಷೇಪ ಮಾಡಿದೆ. ಆದ್ದರಿಂದ ಸಿಬಿಐಗೆ ನೀಡಲಾಗಿದ್ದ ಅನುಮತಿಯನ್ನು ವಾಪಸ್ ಪಡೆದ ಸರಕಾರದ ನಿರ್ಧಾರಕ್ಕೆ ಸೀಮಿತವಾಗಿ ತಮ್ಮ ವಾದವನ್ನು ಆಲಿಸಬೇಕು ಎಂದು ಅರ್ಜಿಯಲ್ಲಿ ಯತ್ನಾಳ್ ಕೋರಿ¨ªಾರೆ.
ಸರಕಾರದ ಪರ ಕಪಿಲ್ ಸಿಬಲ್ ವಾದ
ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಲಾಗಿದ್ದ ಅನುಮತಿ ಹಿಂಪಡೆದ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರಕಾರದ ಪರ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿ ಹಾಗೂ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ. ಬುಧವಾರ ಹೈಕೋರ್ಟ್ಗೆ ಹಾಜರಾಗಲಿರುವ ಸಿಬಲ್ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ರಾಜ್ಯ ಸರಕಾರದ ಪರವಾಗಿ ವಾದ ಮಂಡಿಸಲಿದ್ದಾರೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಶೇಖ್ ಇಸ್ಮಾಯಿಲ್ ಜಬಿವುಲ್ಲಾ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.