Kasaragod ಯುವಕನ ಕೊಲೆ: ಜೀವಾವಧಿ ಸಜೆ
Team Udayavani, Nov 28, 2023, 11:19 PM IST
ಕಾಸರಗೋಡು: ಆಟೋ ರಿಕ್ಷಾ ತಡೆದು ನಿಲ್ಲಿಸಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಪನತ್ತಡಿ ಚಾಮುಂಡಿಕುನ್ನು ಶಿವಪುರದ ಕೆ.ಎಂ.ಜೋಸೆಫ್ (58)ಗೆ ಕಾಸರಗೋಡು ಅಡೀಶನಲ್ ಜಿಲ್ಲಾ ಸೆಶನ್ಸ್ (1) ನ್ಯಾಯಾಲಯ ಜೀವಾವಧಿ ಸಜೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದೆ.
ದಂಡ ಪಾವತಿಸದಿದ್ದಲ್ಲಿ ಐದು ವರ್ಷ ಹೆಚ್ಚುವರಿ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ. ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಐದು ವರ್ಷ ಸಜೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದಲ್ಲಿ ಎರಡು ವರ್ಷ ಸಜೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದೆ.
2014 ಜೂ. 25ರಂದು ರಾತ್ರಿ 10ಕ್ಕೆ ಪನತ್ತಡಿ ಚಾಮುಂಡಿಕುನ್ನಿನಲ್ಲಿ ಈ ಘಟನೆ ನಡೆದಿತ್ತು. ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಅರುಣ್ ಮೋಹನ್ ಯಾನೆ ಲಾಲ್, ಬಿಜು ಕೆ.ಜೆ. ಅವರಿಗೆ ಜೋಸೆಫ್ ಆಟೋ ರಿಕ್ಷಾ ತಡೆದು ನಿಲ್ಲಿಸಿ ಇರಿದು ಗಂಭೀರ ಗಾಯಗೊಳಿಸಿದ್ದು, ಆಸ್ಪತ್ರೆಗೆ ತಲುಪಿಸುವಷ್ಟರಲ್ಲಿ ಅರುಣ್ ಮೋಹನ್ ಸಾವಿಗೀಡಾಗಿದ್ದರು. ರಾಜಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.