Udupi Nejaru Case ತ್ವರಿತ ನ್ಯಾಯಾಲಯಕ್ಕೆ ಶಿಫಾರಸು: ಅಬ್ದುಲ್‌ ಆಜೀಮ್‌

ಉಡುಪಿ ನೇಜಾರಿನ ಒಂದೇ ಮನೆಯ ನಾಲ್ವರ ಕೊಲೆ ಪ್ರಕರಣ

Team Udayavani, Nov 29, 2023, 12:01 AM IST

Udupi Nejaru Case ತ್ವರಿತ ನ್ಯಾಯಾಲಯಕ್ಕೆ ಶಿಫಾರಸು: ಅಬ್ದುಲ್‌ ಆಜೀಮ್‌Udupi Nejaru Case ತ್ವರಿತ ನ್ಯಾಯಾಲಯಕ್ಕೆ ಶಿಫಾರಸು: ಅಬ್ದುಲ್‌ ಆಜೀಮ್‌Udupi Nejaru Case ತ್ವರಿತ ನ್ಯಾಯಾಲಯಕ್ಕೆ ಶಿಫಾರಸು: ಅಬ್ದುಲ್‌ ಆಜೀಮ್‌

ಮಲ್ಪೆ: ನೇಜಾರು ನಡೆದ ನಾಲ್ವರ ಕೊಲೆ ಪ್ರಕರಣವನ್ನು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ನ್ಯಾಯಲಯದ ಎದುರು ಸಾಬೀತು ಪಡಿಸಬೇಕು, ವರ್ಷದೊಳಗೆ ಎಲ್ಲ ತನಿಖೆ ಮುಗಿಸಿ ತ್ವರಿತ ನ್ಯಾಯಾಲಯದ ಮುಂದೆ ದೋಷಾರೋಪಣ ಪಟ್ಟಿ ಸಲ್ಲಿಸಿ ಆರೋಪಿಗೆ ಮರಣ ದಂಡನೆಯನ್ನು ಕೊಡಿಸಬೇಕು ಎಂದು ನಿವೃತ್ತ ಪೊಲೀಸ್‌ ಅಧಿಕಾರಿ, ಕರ್ನಾಟಕ ರಾಜ್ಯ ಅಲ್ಪಸಂಖ್ಯಾಕರ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ಅವರು ಸರಕಾರವನ್ನು ಒತ್ತಾಯಿಸಿದರು.

ಅವರು ಉಡುಪಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಕೊಲೆ ಪ್ರಕರಣ ನಡೆದ ನೇಜಾರಿನ ನೂರ್‌ ಮಹಮ್ಮದ್‌ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಸಾಂತ್ವನ ನೀಡಿದರು.

ಅಲ್ಪಸಂಖ್ಯಾಕ ಸಮುದಾಯದ ಹಿನ್ನೆಲೆಯಲ್ಲಿ ನಾನು ಘಟನೆ ನಡೆದ ದಿನದಿಂದ ಪೊಲೀಸ್‌ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಸಮಾಲೋಚನೆ ನಡೆಸುತ್ತಿದ್ದೇನೆ. ನಾಲ್ವರನ್ನು ಹತ್ಯೆಗೈದಿರುವ ಸ್ಥಳವನ್ನು ಪರಿಶೀಸಿದಾಗ ಹಂತಕ ಎಲ್ಲ ತಯಾರಿ ಯನ್ನು ಮಾಡಿಕೊಂಡೇ ಬಂದಿದ್ದ ಎಂದು ದೃಢವಾಗಿದೆ ಎಂದರು. ಈ ಕೇಸಿನ ಮೇಲ್ವಿಚಾರಣೆಯನ್ನು ಮಂಗಳೂರು ಪಶ್ಚಿಮ ವಲಯದ ಐಜಿಪಿ ವಹಿಸಿಕೊಳ್ಳಬೇಕು, ಪ್ರಕರಣದ ತನಿಖೆಯನ್ನು ಜಿಲ್ಲೆಯ ಪೊಲೀಸರೇ ಮಾಡಲಿ, ಸಿಐಡಿ ತನಿಖೆ ಆಗತ್ಯವಿಲ್ಲ. ಯಾವುದೇ ಕಾರಣದಿಂದ ತನಿಖೆ ವಿಳಂಬವಾಗಬಾರದು. ಆಯೋಗದ ವತಿಯಿಂದ ಮುಖ್ಯಮಂತ್ರಿ, ಗೃಹಮಂತ್ರಿಗಳಿಗೆ ಈ ಬಗ್ಗೆ ಶಿಫಾರಸು ಮಾಡುವುದಾಗಿ ತಿಳಿಸಿದರು.

ಮಗನಿಗೆ ಕೆಲಸ; ಸರಕಾರಕ್ಕೆ ಪತ್ರ
ನೂರ್‌ ಮೊಹಮ್ಮದರ ಪುತ್ರ ಆಸಾದ್‌ ಮೊಹಮ್ಮದ್‌ ಈಗಾಗಲೇ ಇಂಡಿಗೋ ಏರ್‌ಪೋರ್ಟ್‌ನ ಉದ್ಯೋಗಿ
ಯಾಗಿದ್ದಾರೆ. ಬಿಬಿಎಂ ಪದವೀಧರನಾಗಿ ರುವ ಆತನನ್ನು ಪೊಲೀಸ್‌ ಇಲಾಖೆಯಲ್ಲಿ ಉನ್ನತ ಹುದ್ದೆಗೆ ನೇರ ನೇಮಕಾತಿ ಮಾಡಬೇಕು. ಆತನಿಗೆ ಬೇಕಾದ ತರಬೇತಿಯನ್ನು ನಾನೇ ಕೊಡುತ್ತೇನೆ ಎಂದ ಅವರು ರಾಜ್ಯದ ಮುಖ್ಯಮಂತ್ರಿ, ಗೃಹ ಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡುವುದಾಗಿ ತಿಳಿಸಿದರು.

ಕುಸಿದ ನೂರ್‌ ಮೊಹಮ್ಮದ್‌
ಆರಂಭದಲ್ಲಿ ಅಬ್ದುಲ್‌ ಅಜೀಮ್‌ ಅವರು ನೂರ್‌ ಮೊಹಮದ್‌ ಅವರ ಮನೆಯಲ್ಲಿ ನಾಲ್ವರ ಕೊಲೆ ನಡೆದಿರುವ ಸ್ಥಳಗಳನ್ನು ಪರಿಶೀಲನೆ ನಡೆಸಿ ಮೊಬೈಲ್‌ನಲ್ಲಿ ಮೃತದೇಹಗಳ ಫೋಟೋ ವೀಕ್ಷಿಸುತ್ತಿದ್ದರು, ಈ ವೇಳೆ ಕೊನೆ ಮಗ ಅಸಿಮ್‌ ಪೋಟೋವನ್ನು ಕಂಡ ಕೂಡಲೇ ನೂರ್‌ ಮೊಹಮದ್‌ ಕುಸಿದು ಬಿದ್ದರು. ಸ್ಥಳದಲ್ಲಿದ್ದವರು ಅವರನ್ನು ಮೇಲೆತ್ತಿ ಉಪಚರಿಸಿದರು.

ನಮ್ಮ ನಾಡ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಮುಸ್ತಾಕ್‌ ಅಹ್ಮದ್‌, ಕೇಂದ್ರ ಸಮಿತಿ ಸಂಘಟನ ಕಾರ್ಯದರ್ಶಿ ಹುಸೇನ್‌ ಹೈಕಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಝಹೀರ್‌ ಆಹ್ಮದ್‌, ಕೋಶಾಧಿಕಾರಿ ನಕ್ವ ಯಾಯ್ಯ, ವಕ್ಫ್ ಚೇರ್‌ಮನ್‌ ಮುತಾಲಿಫ್‌, ಕಾಂಗ್ರೆಸ್‌ ಮುಖಂಡ ಎಂ.ಎ. ಗಫೂರ್‌, ನೂರ್‌ ಮಹಮ್ಮದ್‌, ಸಹೋದರ ಇಕ್ಬಾಲ್‌ ಹೈಕಾಡಿ, ಆಶ್ರಫ್‌ ನೇಜಾರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.