H1B ದೇಶಿಯ ನವೀಕರಣ- ಡಿಸೆಂಬರ್‌ನಲ್ಲಿ ಅಮೆರಿಕ ಚಾಲನೆ
- ಭಾರತೀಯ ತಂತ್ರಜ್ಞಾನ ವೃತ್ತಿಪರರಿಗೆ ಅನುಕೂಲ
Team Udayavani, Nov 29, 2023, 11:28 PM IST
ವಾಷಿಂಗ್ಟನ್: ಉದ್ಯೋಗ ವೀಸಾ ಎಚ್1ಬಿಯ ದೇಶಿಯ ನವೀಕರಣಕ್ಕೆ ಸಂಬಂಧಿಸಿದಂತೆ ಅಮೆರಿಕವು ಡಿಸೆಂಬರ್‌ನಲ್ಲಿ ಹೊಸ ಯೋಜನೆಯನ್ನು ಆರಂಭಿಸಲಿದೆ. ಇದರಿಂದ ಅಮೆರಿಕದಲ್ಲಿ ಗಣನೀಯ ಸಂಖ್ಯೆಯಲ್ಲಿರುವ ಭಾರತೀಯ ತಂತ್ರಜ್ಞಾನ ವೃತ್ತಿಪರರಿಗೆ ನೆರವಾಗಲಿದೆ ಎಂದು ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಗೆ ಭೇಟಿ ನೀಡಿದ್ದ ವೇಳೆಯೇ ಬೈಡನ್ ಸರ್ಕಾರ ಈ ಯೋಜನೆಯನ್ನು ಘೋಷಿಸಿತ್ತು.
ವೀಸಾ ಸೇವೆಗಳ ಉಪಸಹಾಯಕ ಕಾರ್ಯದರ್ಶಿ ಜ್ಯೂಲಿ ಸ್ಟಫ್ಟ್ ಈ ಕುರಿತು ಸಂದರ್ಶನವೊಂದರಲ್ಲಿ ಮಾಹಿತಿ ನೀಡಿದ್ದಾರೆ. ಈ ವೇಳೆ ಭಾರತದಲ್ಲಿ ಅಮೆರಿಕದ ಉದ್ಯೋಗ ವೀಸಾಗಳಿಗೆ ಭಾರೀ ಬೇಡಿಕೆ ಇದೆ. ಅರ್ಜಿದಾರರು ತಮ್ಮ ಸ್ಲಾಟ್‌ಗಳಿಗಾಗಿ 6,8,12 ತಿಂಗಳುಗಳ ವರೆಗೆ ಕಾಯಬೇಕಾದ ಪರಿಸ್ಥಿತಿ ಇದೆ. ಹೊಸದಾಗಿ ಅರ್ಜಿ ಸಲ್ಲಿಸುವವರಿಗೆ ಮಾತ್ರವಲ್ಲದೇ, ನವೀಕರಣಕ್ಕೆ ಅರ್ಜಿ ಸಲ್ಲಿಸುವವರದ್ದು ಇದೇ ಪಾಡಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವೃತ್ತಿಪರರಿಗೆ, ವಲಸಿಗರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅತ್ಯಂತ ವೇಗದಲ್ಲಿ ವೀಸಾ ನವೀಕರಣಕ್ಕೆ ಅನುವು ಮಾಡಿಕೊಡಲು ದೇಶಿಯವಾಗಿಯೇ ವೀಸಾ ನವೀಕರಣಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಅದರ ಭಾಗವಾಗಿಯೇ ಡಿಸೆಂಬರ್‌ನಲ್ಲಿ ಪ್ರಾಯೋಗಿಕ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.
ಏನಿದು ಯೋಜನೆ ?
ಭಾರತೀಯ ವೃತ್ತಿಪರರು ಭಾರತಕ್ಕೆ ಬಂದು ಅರ್ಜಿ ಸಲ್ಲಿಸಿ ವೀಸಾ ನವೀಕರಣಕ್ಕೆ ಕಾಯುವ ಬದಲು ಅಮೆರಿಕದಲ್ಲೇ ಅಲ್ಲಿನ ವಿದೇಶಾಂಗ ಸಚಿವಾಲಯ ವೀಸಾಗಳ ನವೀಕರಣವನ್ನು ನಡೆಸಲಿದೆ. ಇದಕ್ಕಾಗಿ ಡಿಸೆಂಬರ್‌ನಿಂದ 3 ತಿಂಗಳಿನವರೆಗೆ ಅಭಿಯಾನ ನಡೆಯಲಿದೆ. ಈ ವೇಳೆ ಒಟ್ಟು 20,000 ವಿದೇಶಿಗಳಿಗೆ ವೀಸಾ ನೀಡಲು ಯೋಜಿಸಲಾಗಿದೆ ಎಂದು ಜ್ಯೂಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.