Dakshina Kannada ಎಲ್ಲ ತಾಲೂಕುಗಳಲ್ಲೂ ಮಲತ್ಯಾಜ್ಯ ನಿರ್ವಹಣೆಗೆ ಘಟಕ

ಪ್ರಾಯೋಗಿಕ ಯೋಜನೆ ಯಶಸ್ವಿ, ಜಿಲ್ಲಾದ್ಯಂತ ಯೋಜನೆ ವಿಸ್ತರಣೆಗೆ ಸಿದ್ಧತೆ

Team Udayavani, Nov 30, 2023, 6:45 AM IST

Dakshina Kannada ಎಲ್ಲ ತಾಲೂಕುಗಳಲ್ಲೂ ಮಲತ್ಯಾಜ್ಯ ನಿರ್ವಹಣೆಗೆ ಘಟಕ

ಮಂಗಳೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ನಿರ್ವಹಣೆಯ ಸುಧಾರಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮಲತ್ಯಾಜ್ಯ ನಿರ್ವಹಣ ಘಟಕಗಳ ಸ್ಥಾಪನೆಗೆ ಮುಂದಾಗಿದೆ.

ಇದರ ಕುರಿತ ಪ್ರಾಯೋಗಿಕ ಯೋಜನೆ ಯಶಸ್ವಿಯಾಗಿದ್ದು, ಉಳ್ಳಾಲ, ಮಂಗಳೂರು, ಮೂಲ್ಕಿ ಮತ್ತು ಮೂಡುಬಿದಿರೆ ತಾಲೂಕಿನಲ್ಲಿ ಸ್ಥಳದ ಪರಿಶೀಲನೆ ಮತ್ತು ಭೌಗೋಳಿಕ ಸರ್ವೇ ಪ್ರಗತಿಯಲ್ಲಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಡಬ ತಾಲೂಕಿಗೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸಿ, ರಾಜ್ಯಮಟ್ಟದ ತಾಂತ್ರಿಕ ಸಮಿತಿಯ ಅನುಮತಿ ಪಡೆಯಲಾಗಿದೆ. ರಾಜ್ಯ ಸರಕಾರದ ಅನುಮೋದನೆ ದೊರಕಬೇಕಿದೆ.

ಬಯಲು ಬಹಿರ್ದೆಸೆ ಮುಕ್ತ
ಎಂದು ಜಿಲ್ಲೆಯನ್ನು ಘೋಷಿಸಿದ್ದು, ಗ್ರಾಮೀಣ ಭಾಗದಲ್ಲಿ ನೈರ್ಮಲ್ಯ ಸುಸ್ಥಿರತೆ ಕಾಯ್ದುಕೊಳ್ಳಲು ಈ ಘಟಕಗಳು ಸಹಕರಿಸಲಿವೆ. ಮನೆಗಳು ಮಾತ್ರವಲ್ಲದೆ ಶಾಲೆಗಳು, ವಾಣಿಜ್ಯ ಕಟ್ಟಡಗಳ ಶೌಚಾಲಯದ ಗುಂಡಿ (ಪಿಟ್‌) ತುಂಬಿದ ಬಳಿಕ ಅದರ ಸಮಸ್ಯೆಯಾಗುತ್ತಿದೆ. ಕೆಲವು ಸಂಸ್ಥೆಗಳು ಸಕ್ಕಿಂಗ್‌ ಯಂತ್ರದ ಮೂಲಕ ತ್ಯಾಜ್ಯ ಸಂಗ್ರಹಿಸಿ, ನದಿ, ಕಾಲುವೆಗಳಿಗೆ ಹರಿಯಬಿಟ್ಟು ವಾತಾವರಣವನ್ನು ಕಲುಷಿತಗೊಳಿಸುವ ದೂರುಗಳೂ ಕೇಳಿಬರುತ್ತವೆ. ಇವುಗಳನ್ನು ತಡೆಯಲು ಆಯಾ ಗ್ರಾ.ಪಂ. ಮೂಲಕವೇ ತೆರವುಗೊಳಿಸಿ ಘಟಕಕ್ಕೆ ರವಾನಿಸಲಾಗುತ್ತದೆ.

ಪ್ರಾಯೋಗಿಕ ಘಟಕ ಯಶಸ್ವಿ
ಮಲತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ತಲಾ 3 ಕೆಎಲ್‌ಡಿ (3 ಸಾವಿರ ಲೀ.) ಸಾಮರ್ಥ್ಯದ ಘಟಕಗಳು ಬಂಟ್ವಾಳ ತಾಲೂಕಿನ ಗೋಳ್ತಮಜಲು (57.22 ಲಕ್ಷ ರೂ. ವೆಚ್ಚ) ಮತ್ತು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ (79.22 ಲಕ್ಷ ರೂ. ವೆಚ್ಚ) ಕಾರ್ಯಾಚರಿಸುತ್ತಿವೆ. ಬಂಟ್ವಾಳದ 33 ಮತ್ತು ಬೆಳ್ತಂಗಡಿಯ 24 ಗ್ರಾ.ಪಂ.ಗಳ ಮಲತ್ಯಾಜ್ಯ ನಿರ್ವಹಿಸಲಾಗುತ್ತಿದೆ.

ಗೊಬ್ಬರವಾಗಿ ಪರಿವರ್ತನೆ
ಮಲತ್ಯಾಜ್ಯವನ್ನು ವಿವಿಧ ಹಂತಗಳಲ್ಲಿ ಸಂಸ್ಕರಿಸಿ, ರೊಚ್ಚು ಗೊಬ್ಬರವಾಗಿಸಲಾಗುತ್ತದೆ. ಇದನ್ನು ಕೃಷಿಗೆ ಸಾವಯವ ಗೊಬ್ಬರವಾಗಿ ಬಳಸುವಂತೆ ರೈತರನ್ನು ಪ್ರೇರೇಪಿಸಲಾಗುತ್ತಿದೆ. ನೀರನ್ನು ಶುದ್ಧೀಕರಿಸಿ ಗಿಡಗಳಿಗೆ ಮರು ಬಳಕೆ ಮಾಡಲಾಗುತ್ತದೆ ಎನ್ನುತ್ತಾರೆ ಅಧಿಕಾರಿಗಳು.

ಮಲತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿ ಉಜಿರೆ ಮತ್ತು ಗೋಳ್ತಮಜಲಿನಲ್ಲಿ ನಿರ್ಮಿಸಲಾದ ಘಟಕಗಳು ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ. ಇತರ ತಾಲೂಕು ವ್ಯಾಪ್ತಿಯಲ್ಲೂ ಘಟಕ ನಿರ್ಮಾಣಕ್ಕೆ ಯೋಜಿಸಲಾಗಿದೆ.
– ಡಾ| ಆನಂದ್‌ ಕೆ. ಸಿಇಒ, ದ.ಕ. ಜಿಲ್ಲೆ

-ಭರತ್‌ ಶೆಟ್ಟಿಗಾರ್‌

ಟಾಪ್ ನ್ಯೂಸ್

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

2-dandeli

Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ

1-thirthahalli

Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.